ಅರಕಲಗೂಡು | ನ.26ರಂದು ‘ಸಹಬಾಳ್ವೆ ಉದ್ಯಾನವನ’ ಲೋಕಾರ್ಪಣೆ: ಎ.ಟಿ. ರಾಮಸ್ವಾಮಿ

Date:

ಪರಿಸರ ಸಂರಕ್ಷಣೆ, ಹಸಿರು ಪರಿಸರ ನಿರ್ಮಾಣ ಹಾಗೂ ಸಾಮಾಜಿಕ ಸಹಬಾಳ್ವೆಯ ಮಹತ್ವವನ್ನು ಸಾರುವ ಉದ್ದೇಶದಿಂದ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕೋಣನೂರು ಹೋಬಳಿಯ ಬಿಸಲಹಳ್ಳಿ ಗ್ರಾಮದಲ್ಲಿ 400ಕ್ಕೂ ಹೆಚ್ಚು ಪ್ರಭೇದದ ಸಸಿಗಳನ್ನು ನೆಟ್ಟು ಅಭಿವೃದ್ಧಿಪಡಿಸಿರುವ ‘ಸಹಬಾಳ್ವೆ ಉದ್ಯಾನವನ’ವನ್ನು ಇದೇ ನವೆಂಬರ್ 26ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಮಾಜಿ ಶಾಸಕರಾದ ಎ.ಟಿ. ರಾಮಸ್ವಾಮಿ ಮಾಹಿತಿ ನೀಡಿದ್ದಾರೆ.

- Advertisement -

ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವಾದ ನವೆಂಬರ್ 26ರಂದು ಬೆಳಿಗ್ಗೆ 10.30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ. ಅರಸಿಕಟ್ಟೆ ಅಮ್ಮ ದೇವಾಲಯ ಸಮಿತಿಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಉದ್ಯಾನವನದಲ್ಲಿ 400ಕ್ಕೂ ಹೆಚ್ಚು ಪ್ರಭೇದದ ಸಸಿಗಳನ್ನು ಬೆಳೆಸಿರುವುದು ಈ ಯೋಜನೆಯ ವಿಶೇಷತೆಯಾಗಿದೆ. ಕೇವಲ ಸಸಿಗಳನ್ನು ನೆಡುವುದಕ್ಕೆ ಸೀಮಿತವಾಗದೆ, ವಿವಿಧ ಸಸ್ಯ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಪರಿಸರದ ಮಹತ್ವ ಪರಿಚಯಿಸುವ ಪ್ರಯತ್ನ ಇದಾಗಿದೆ. ಪ್ರಕೃತಿ ಸಂರಕ್ಷಣೆ ಮತ್ತು ಮಾನವೀಯ ಮೌಲ್ಯಗಳ ಸಹಬಾಳ್ವೆಯನ್ನು ಒಂದೇ ವೇದಿಕೆಯಲ್ಲಿ ಪ್ರತಿಪಾದಿಸುವ ಆಶಯವನ್ನು ಈ ಉದ್ಯಾನವನ ಹೊಂದಿದೆ.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹಾಗೂ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ನ್ಯಾಯಮೂರ್ತಿ ವಿ. ಗೋಪಾಲಗೌಡ ಹಾಗೂ ಬೆಂಗಳೂರಿನ ಕ್ಷೇಮವನದ ಕಾರ್ಯನಿರ್ವಾಹಕ ನಿರ್ದೇಶಕಿ ಶ್ರದ್ಧಾ ಅಮಿತ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅರಕಲಗೂಡು ಕ್ಷೇತ್ರದ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಅವರು ಪರಿಸರ ಸಂರಕ್ಷಣೆಯನ್ನು ತಮ್ಮ ಸಾಮಾಜಿಕ ಕಾಳಜಿಯ ಪ್ರಮುಖ ಭಾಗವಾಗಿಸಿಕೊಂಡಿದ್ದಾರೆ. 2025ರಲ್ಲಿ ಅವರು ‘ಪರಿಸರಕ್ಕಾಗಿ ನಾವು’ ಎಂಬ ರಾಜ್ಯಮಟ್ಟದ ಪರಿಸರ ಸಂಘಟನೆಯನ್ನು ಸ್ಥಾಪಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಪರಿಸರ ತಜ್ಞರು, ವಿದ್ಯಾರ್ಥಿಗಳು, ನಾಗರಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳನ್ನು ಒಗ್ಗೂಡಿಸಿ ಪರಿಸರ ಸಂರಕ್ಷಣೆಗೆ ಸಂಘಟಿತ ರೂಪ ನೀಡುವ ಉದ್ದೇಶ ಹೊಂದಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಬೆಂಗಳೂರು ಸುತ್ತಮುತ್ತಲಿನ ಸರ್ಕಾರಿ ಭೂಮಿ ಒತ್ತುವರಿ ಪ್ರಕರಣಗಳ ಕುರಿತು ವಿಶೇಷ ಸದನ ಸಮಿತಿಯ ಅಧ್ಯಕ್ಷರಾಗಿ ವರದಿ ನೀಡಿದ್ದ ಎ.ಟಿ. ರಾಮಸ್ವಾಮಿ ಅವರು ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಗುರುತನ್ನು ಹೊಂದಿದ್ದಾರೆ. ಇದೀಗ ಪರಿಸರ ಸಂರಕ್ಷಣೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುವ ಪ್ರಯತ್ನವೂ ಮಹತ್ವ ಪಡೆದಿದೆ.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

400ಕ್ಕೂ ಹೆಚ್ಚು ಪ್ರಭೇದದ ಸಸಿಗಳನ್ನು ಹೊಂದಿರುವ ಬಿಸಲಹಳ್ಳಿಯ ಸಹಬಾಳ್ವೆ ಉದ್ಯಾನವನವು ಪರಿಸರ ಪ್ರಜ್ಞೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾಮಾಜಿಕ ಸಾಮರಸ್ಯದ ಸಂಕೇತವಾಗಿ ರೂಪುಗೊಂಡಿದೆ.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಪರಿಸರಾಸಕ್ತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೇರದಾಳ |ನ. 25ರಿಂದ ಶಾಲೆಗಳಲ್ಲಿ ಬಿಸಿಯೂಟ ಬಂದ್: ಅಡುಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಶಾಲೆಗಳಲ್ಲಿ ಕ್ಲಸ್ಟರ್ ಮಟ್ಟದಲ್ಲಿ ಕಿಚನ್ ಸೆಂಟರ್‌ಗಳನ್ನು ಪ್ರಾರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆಯ...

ಕಬ್ಬಿನ ದರ ಏರಿಕೆಗೆ ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ; ಸಕ್ಕರೆ ಗೋದಾಮುಗಳಿಗೆ ಬೀಗ

ಕಬ್ಬಿನ ದರ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು...

ಮುದ್ದೇಬಿಹಾಳ |ಬಸವಣ್ಣ, ಸಂವಿಧಾನದ ಕುರಿತು ವಿವಾದಾತ್ಮಕ ಹೇಳಿಕೆ: ದಲಿತ ಸಂಘರ್ಷ ಸಮಿತಿ ಖಂಡನೆ

ವಿಶ್ವಗುರು ಬಸವಣ್ಣನವರ ಕುರಿತು ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್...

ರಾಯಚೂರು | ಬಸನಗೌಡ ದದ್ದಲ್‌ಗೆ ಕೆಕೆಆರ್‌ಡಿಬಿ ಅಧ್ಯಕ್ಷ ಪಟ್ಟ, ಬಾದರ್ಲಿಗೆ ಉಗ್ರಾಣ ನಿಗಮದ ಹೊಣೆ

ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ...