ಅರಸೀಕೆರೆ | ಲಿಂಗ್ಲಾಪುರ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಮರೀಚಿಕೆ: ದಾನಿಗಳ ನೆರವಿಗೆ ಎಐಡಿಎಸ್‌ಒ ಮನವಿ

Date:

ಲಿಂಗ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ವ್ಯವಸ್ಥೆ ಇಲ್ಲದಿರುವುದು ಮಕ್ಕಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿರುವಂತೆ ತೋರಿಸುತ್ತದೆ. ಸ್ಮಾರ್ಟ್‌ ತರಗತಿಗಳು ನಡೆಯದೇ ಇರುವುದರಿಂದ ಆಧುನಿಕ ಶಿಕ್ಷಣದದಿಂದಲೂ ಮಕ್ಕಳು ವಂಚಿತರಾಗಿದ್ದಾರೆ. ದಾನಿಗಳು, ಸ್ಥಳೀಯ ಆಡಳಿತ ಮತ್ತು ಶಿಕ್ಷಣ ಇಲಾಖೆ ತುರ್ತು ಗಮನ ಹರಿಸಿ ನೀರು ಹಾಗೂ ವಿದ್ಯುತ್‌ ಸೌಲಭ್ಯಗಳನ್ನು ಕಲ್ಪಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ನಿವಾರಿಸುವುದು ಮಕ್ಕಳ ಭವಿಷ್ಯಕ್ಕೆ ಅತ್ಯಗತ್ಯ. ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯುವಂತಾಗಲಿ.

ಅರಸೀಕೆರೆ ತಾಲೂಕಿನ ಜಾವಗಲ್‌ ಹೋಬಳಿಯ ಲಿಂಗ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ವಿದ್ಯುತ್ ವ್ಯವಸ್ಥೆಯಿಲ್ಲದಂತಾಗಿದೆ. ಇದರಿಂದಾಗಿ ಸ್ಮಾರ್ಟ್‌ ತರಗತಿಗಳನ್ನೂ ಕೂಡ ನಡೆಸದಂತಾಗಿದೆ. ಯಾರಾದರೂ ದಾನಿಗಳಿದ್ದರೆ ಸಹಾಯ ಮಾಡಿ ಎಂದು ಎಐಡಿಎಸ್‌ಒ ವತಿಯಿಂದ ಮನವಿ ಮಾಡಿದ್ದಾರೆ.

- Advertisement -

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ ಆಗಿದ್ದು, ಲಿಂಗ್ಲಾಪುರ ಸರ್ಕಾರಿ ಶಾಲೆಯ ಅಭಿವೃದ್ಧಿಗಾಗಿ ನೆರವು ಕೇಳುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಘಟನೆಗೆ ಸಂಬಂಧಿಸಿದಂತೆ ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಈ ಶಾಲೆಯಲ್ಲಿ ಓದುತ್ತಿರುವವರು ಬಡಮಕ್ಕಳು. ಅವರು ಅಲ್ಲಿಯ ಸುತ್ತಮಯತ್ತ ಜೋಪಡಿ, ಶೆಡ್‌ ಹಾಗೂ ಸಣ್ಣ ಸಣ್ಣ ಮನೆಗಳಲ್ಲಿ ವಾಸಿಸುತ್ತಿರುವ ಕೂಲಿಕಾರ್ಮಿಕರ ಮಕ್ಕಳು. ಈ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮೂಲ ಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಹಲವು ಬಾರಿ ಪಿಡಿಒ, ಬಿಇಒ ಹಾಗೂ ಎಂಎಲ್‌ಎ ಅವರಿಗೂ ಮನವಿ ನೀಡಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕಳೆದ ಬಾರಿ ಕೃಷ್ಣೇಬೈರೇಗೌಡರಿಗೆ ಮನವಿ ಮಾಡಿದರೂ ಇಷ್ಟು ಮಕ್ಕಳಿಗಾಗಿ ಯಾವುದೇ ರೀತಿಯ ಸೌಲಭ್ಯಗಳನ್ನು ಕೊಡಲಾಗುವುದಿಲ್ಲವೆಂದು ನೇರವಾಗಿ ಹೇಳಿದ್ದಾರೆ” ಎಂದು ಆರೋಪಿಸಿದರು.

“ಶಾಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ವಿದ್ಯುತ್‌ ವ್ಯವಸ್ಥೆ ಇಲ್ಲ. ಇವತ್ತಿನ ಎಐ ಯುಗದಲ್ಲಿ ಮಕ್ಕಳು ಎಲೆಕ್ಟ್ರಾನಿಕ್‌ ಉಪಕರಣಗಳ ಅರಿವೇ ಇಲ್ಲದಂತೆ ಕಲಿಯುವುದು ಅವರ ಮುಂದಿನ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಶಾಲೆಯಲ್ಲಿ ಒಂದರಿಂದ ಐದನೇ ತರಗತಿಯವರೆಗೆ 15 ಮಂದಿ ಮಕ್ಕಳಿದ್ದಾರೆ. ಇಬ್ಬರು ಶಿಕ್ಷಕರಿದ್ದಾರೆ. ಒಬ್ಬರು ಅಡುಗೆ ಸಿಬ್ಬಂದಿ ಇದ್ದಾರೆ. ಅಡುಗೆಗೂ ನೀರಿಲ್ಲದೆ ಹೊರಗಿನಿಂದ ನೀರು ಹೊತ್ತು ತಂದು ಆಹಾರ ತಯಾರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸತತವಾಗಿ ಆಡಳಿತ ಪ್ರತಿಯೊಬ್ಬರ ಬಳಿ ಹೋಗಿ ಅಂಗಲಾಚಿದರೂ ಕೂಡ ಪ್ರಯೋಜನವಾಗಿಲ್ಲ. ಸರ್ಕಾರಿ ಶಾಲೆಗಳನ್ನು ಸರ್ಕಾರವೇ ಅಭಿವೃದ್ಧಿಗೊಳಿಸಬೇಕು ಎಂಬುದು ಎಐಡಿಎಸ್‌ಒ ನಿಲುವು. ಆದರೆ ಎಮ್ಮೆ ಚರ್ಮದ ಸರ್ಕಾರಕ್ಕೆ ತಿಳಿಸಿದರೂ ತನ್ನಿಂದ ಆಗುವುದಿಲ್ಲವೆಂದು ಹೇಳಿದಾಗ ಅನಿವಾರ್ಯವಾಗಿ ನಾವು ದಾನಿಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ” ಎಂದರು.

ಇದನ್ನೂ ಓದಿದ್ದೀರಾ? ಎಸ್‌ಐಆರ್‌ | ಮನೆ ಬಾಗಿಲಿಗೆ ತಲುಪಲಿ ಚುನಾವಣಾ ವ್ಯವಸ್ಥೆ: ಕಣ್ಮರೆಯಾಗದಿರಲಿ ಅಲೆಮಾರಿಗಳ ಮತದಾನದ ಹಕ್ಕು

“ಯಾರಿಗೂ ಸರ್ಕಾರಿ ಶಾಲೆಯ ಕುರಿತು ಕಾಳಜಿ ಇಲ್ಲ. ಹಾಗಾಗಿ ಅಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲೇಬೇಕಾಗಿದೆ. ಅಲ್ಲದೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಒಳ್ಳೆಯ ಕಂಪ್ಯೂಟರ್ ಅವಶ್ಯಕತೆ ಇದೆ. ಹಾಗಾಗಿ ಕಂಪ್ಯೂಟರ್‌ಗಳನ್ನೂ ಒದಗಿಸಬೇಕಾಗಿದೆ” ಎಂದು ಮನವಿ ಮಾಡಿದರು.

ದಾನಿಗಳು 9164220387ಕ್ಕೆ ಸಂಪರ್ಕಿಸಬಹುದು…… ಇದರಿಂದಾಗಿ ಕಾಯಕಲ್ಪಕ್ಕಾಗಿ ಕಾಯುತ್ತಿರುವ ಸರ್ಕಾರಿ ಶಾಲೆಗೆ ನೆರವಾಗಬಹುದು. ಅಲ್ಲಿಯ ಮಕ್ಕಳ ಉಜ್ವಲ ಬದುಕಿಗೆ ಆಸರೆಯಾಗುತ್ತದೆ.

ಲಿಂಗ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್‌ ವ್ಯವಸ್ಥೆ ಇಲ್ಲದಿರುವುದು ಮಕ್ಕಳ ಮೂಲಭೂತ ಹಕ್ಕುಗಳನ್ನು ಕಿತ್ತುಕೊಂಡಿರುವಂತೆ ತೋರಿಸುತ್ತದೆ. ಸ್ಮಾರ್ಟ್‌ ತರಗತಿಗಳು ನಡೆಯದೇ ಇರುವುದರಿಂದ ಆಧುನಿಕ ಶಿಕ್ಷಣದದಿಂದಲೂ ಮಕ್ಕಳು ವಂಚಿತರಾಗಿದ್ದಾರೆ. ದಾನಿಗಳು, ಸ್ಥಳೀಯ ಆಡಳಿತ ಮತ್ತು ಶಿಕ್ಷಣ ಇಲಾಖೆ ತುರ್ತು ಗಮನ ಹರಿಸಿ ನೀರು ಹಾಗೂ ವಿದ್ಯುತ್‌ ಸೌಲಭ್ಯಗಳನ್ನು ಕಲ್ಪಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ನಿವಾರಿಸುವುದು ಮಕ್ಕಳ ಭವಿಷ್ಯಕ್ಕೆ ಅತ್ಯಗತ್ಯ. ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಯುವಂತಾಗಲಿ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಪತ್ರಕರ್ತರ ಸಂಘದ ನೂತನ ಭವನಕ್ಕೆ ₹50 ಲಕ್ಷ ಅನುದಾನ: ಸಂಸದ ಯದುವೀರ ಘೋಷಣೆ

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣಕ್ಕೆ ಸಂಸದರ ಪ್ರದೇಶಾಭಿವೃದ್ಧಿ...

ಗದಗ | ಮತದಾನದ ಹಕ್ಕನ್ನು‌ ಕಳೆದುಕೊಳ್ಳುವ ಆತಂಕದಲ್ಲಿ ಅನಿವಾಸಿ ಭಾರತೀಯರು: ಮುಖಂಡರು ಕಿಡಿ

"ರೋಣ ಮತಕ್ಷೇತ್ರದಲ್ಲಿ ಅನಿವಾಸಿ ಭಾರತೀಯರು 999 ಜನರಿದ್ದಾರೆಂದು ಮತದಾರರ ಯಾದಿ ಪಟ್ಟಿಯಲ್ಲಿ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...