ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು ₹2.5 ಕೋಟಿ ಹಣಕಾಸಿನ ವಂಚನೆ ನಡೆದಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಹಕರು ಬ್ಯಾಂಕ್ ಮುಂಭಾಗದಲ್ಲಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ರಾಹುಲ್ ಹಾಗೂ ಅಧಿಕಾರಿ ವಿಶ್ವನಾಥ್ ವಿರುದ್ಧ ಆರೋಪಗಳನ್ನು ಮಾಡಿದ ಪ್ರತಿಭಟನಕಾರರು, ರೈತರು ಮತ್ತು ಗ್ರಾಹಕರ ಹಣಕಾಸಿನ ವ್ಯವಹಾರಗಳಲ್ಲಿ ಅಕ್ರಮ ನಡೆದಿರುವ ಶಂಕೆ ವ್ಯಕ್ತಪಡಿಸಿದರು. ಬ್ಯಾಂಕ್‌ನಲ್ಲಿ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿಯಲ್ಲಿ ಬ್ಯಾಂಕಿನ ಅಧಿಕಾರಿಗಳಿಂದ ಅನ್ಯಾಯವಾಗಿದೆ ಎಂದು ದೂರಿದ ಅವರು, ಪ್ರಕರಣದ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸುವಂತೆ ಪ್ರತಿಭಟನೆ ನಡೆಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್ ಶ್ರೀನಿವಾಸ್
ಈ ವೇಳೆ ಪ್ರತಿಭಟನೆಯಲ್ಲಿ ಗ್ರಾಮಸ್ಥರು ಹಾಗೂ ಮುಖಂಡರಾದ ಡಿ.ಎಂ.ಕುರ್ಕೆ, ರವಿಕುಮಾರ್, ರಾಂಪುರದ ಸುರೇಶ್, ಶಶಿವಾಳದ ಚಂದ್ರಪ್ಪ, ಅನಿಲ್, ಪಿ.ಎಲ್.ಡಿ. ಬ್ಯಾಂಕ್ ನಾಮ ನೀರ್ದೆಶಕ ಮೋಹನ್, ಮಾಡಾಳು ಜಯಪ್ಪ, ದೇವರಾಜ್, ರವಿಕುಮಾರ ಭಾಗವಹಿಸಿದ್ದರು.




