ಕಾರ್ಯಾಚರಣೆಯಲ್ಲಿ ದಾರುಣ ಅಂತ್ಯ ಕಂಡ ಅರ್ಜುನ; ಕಂಬನಿ ಮಿಡಿದ ಕರ್ನಾಟಕ

Date:

ಕಾಡಾನೆಯೊಂದನ್ನು ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ದಾರುಣವಾಗಿ ಸಾವನ್ನಪ್ಪಿದೆ. ಒಂಟಿ ಸಲಗ ಹೊಟ್ಟಿಗೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಅರ್ಜುನ ಸೋಮವಾರ ಕೊನೆಯುಸಿರೆಳೆದಿದೆ. ಆನೆಯ ಸಾವಿಗೆ ಕರ್ನಾಟಕ ಕಂಬನಿ ಮಿಡಿದಿದೆ.

- Advertisement -

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಯೊಂದರ ಉಪಟಳ ಹೆಚ್ಚಾಗಿತ್ತು. ಅದನ್ನು ಸೆಳೆ ಹಿಡಿಯಲು ನಾಲ್ಕು ಸಾಕಾನೆಗಳೊಂದಿಗೆ ತಾಲೂಕಿನ ಬಾಳೆಕೆರೆ ಅರಣ್ಯ ಪ್ರದೇಶದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಲಾಗಿತ್ತು. ನಾಲ್ಕು ಸಾಕಾನೆಗಳಿಂದಲೂ ಕಾಡಾನೆಯನ್ನು ಹಿಮ್ಮೆಟ್ಟಲು ಸಾಧ್ಯವಾಗಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ವೇಳೆ, ಮೂರು ಸಾಕಾನೆಗಳು ಹಿಂದೆ ಸರಿದಿವೆ. ಆದರೆ, ಅರ್ಜುನ ಕಾರ್ಯಾಚರಣೆಯಲ್ಲಿ ಮುಂದೆ ಹೋಗಿದೆ. ಕಾಡಾನೆ ಅರ್ಜುನನ ಮೇಲೆ ನಡೆದಿದೆ. ಅರ್ಜುನನನ್ನು ಮುನ್ನಡೆಸುತ್ತಿದ್ದ ಮಾವುತ ಕೆಳಗಿಳಿದು ಓಡಿ ಹೋಗಿದ್ದಾರೆ. ಗಾಯಗೊಂಡಿದ್ದ ಆನೆ ಮೃತಪಟ್ಟಿದೆ.

ಅರ್ಜುನನ ಸಾವಿಗೆ ಹಲವಾರು ಮಂದಿ ಕಂಬನಿ ಮಿಡಿದಿದ್ದಾರೆ. ಅರ್ಜುನನನ್ನು ನೆನೆದಿರುವ ನಟ ದರ್ಶನ್, “೮ ಬಾರಿ ದಸರಾ ಅಂಬಾರಿ ಹೊತ್ತು ನಾಡಿನ ಜನಮನ ಗೆದ್ದಿದ್ದ ೬೪ ವರ್ಷದ ‘ಅರ್ಜುನ’ ಇಂದು ಕಾಡಾನೆಗಳ ಕಾಳಗದಲ್ಲಿ ಸಾವನ್ನಪ್ಪಿರುವುದು ವಿಷಾದದ ಸಂಗತಿ. ಅರ್ಜುನನ ಗಜಗಾಂಭೀರ್ಯಕ್ಕೆ ಅವನೇ ಸಾಟಿ!
ಓಂ ಶಾಂತಿ!” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಅರ್ಜನನನ್ನು ಸ್ಮರಿಸಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ, “ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಹಲವು ಬಾರಿ ಅಂಬಾರಿ ಹೊತ್ತಿದ್ದ 64 ವರ್ಷದ ಅರ್ಜುನ ಆನೆಯ ಸಾವಿನ ಸುದ್ದಿ ತಿಳಿದು ಬಹಳ ದುಃಖವಾಗಿದೆ.
ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆಯ ವೇಳೆ ದುರ್ಘಟನೆ ಸಂಭವಿಸಿದ್ದು, ಮದಗಜವೊಂದು, ಅರ್ಜುನನ ಮೇಲೆ ದಾಳಿ ಮಾಡಿ, ತನ್ನ ದಂತದಿಂದ ಚುಚ್ಚಿ ಘಾಸಿಗೊಳಿಸಿ, ಸಾವಿಗೆ ಕಾರಣವಾಗಿರುವುದು ಅತ್ಯಂತ ದುರಾದೃಷ್ಟಕರ. ಕಾರ್ಯಾಚರಣೆಯಲ್ಲಿ ಪುಂಡಾನೆ ರೌದ್ರಾವತಾರ ತಾಳಿ, ಅರ್ಜುನನ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರೂ ಜಗ್ಗದೆ ದಾಳಿ ಮಾಡಿದೆ. ಮಾವುತ ಮತ್ತು ಪಶುವೈದ್ಯರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದ ಮೂರು ಆನೆಗಳು ಹಿಮ್ಮೆಟ್ಟಿವೆ. ಆದರೆ ಅರ್ಜುನ ಪುಂಡಾನೆಯೊಂದಿಗೆ ಏಕಾಂಗಿಯಾಗಿ ಹೋರಾಡುವಾಗ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ಜುನ ಆನೆ ಈ ಹಿಂದೆ ಹಲವು ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಅನುಭವ ಹೊಂದಿತ್ತು ಮತ್ತು ತರಬೇತಿ ಕೂಡಾ ಪಡೆದಿತ್ತು.
ತಾಯಿ ಶ್ರೀ ಚಾಮುಂಡೇಶ್ವರಿಯು ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

arjuna

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, “ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಎಂಟು ಬಾರಿ ಅಂಬಾರಿ‌ ಹೊತ್ತಿದ್ದ ಅರ್ಜುನ ಆನೆ, ಸಕಲೇಶಪುರ ತಾಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಸಂಗತಿ ತಿಳಿದು ದುಃಖವಾಗಿದೆ. ಒಂದು ಕಾಲದಲ್ಲಿ ಮೈಸೂರು ದಸರಾದ ಕೇಂದ್ರಬಿಂದುವಾಗಿದ್ದ ಅರ್ಜುನ ನಮ್ಮೆಲ್ಲರ ಹೃದಯದಲ್ಲಿ ಮರೆಯಲಾರದ ನೆನಪುಗಳನ್ನು ಬಿಟ್ಟುಹೋಗಿದ್ದಾನೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಅರ್ಜನನ ಸಾವಿಗೆ ಕಂಬನಿ ಮಿಡಿದಿದ್ದು, “ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ. ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ. ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ” ಎಂದಿದ್ದಾರೆ.

“ಮೈಸೂರು ದಸರಾದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಗಳ ಕಾರ್ಯಾಚರಣೆ ವೇಳೆ ಮರಣ ಹೊಂದಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ. ಅರ್ಜುನನ ಆತ್ಮಕ್ಕೆ ಶಾಂತಿ ಕರುಣಿಸಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...