ಹಾಸನ | ಸಭೆಯಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್‌ ಕಾರ್ಯಕರ್ತರು

Date:

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ.

- Advertisement -

ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗಾಗಿ ಮಾಜಿ ಸಚಿವ ಬಿ ಶಿವರಾಂ ಅವರು ಕರೆದಿದ್ದ ಸಭೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಭೆಯಲ್ಲಿ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಜತ್ತೇನಹಳ್ಳಿ ರಾಮಚಂದ್ರ ಮತ್ತು ವಿಧಾನಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದ ಗ್ರಾನೈಟ್ ರಾಜಶೇಖರ್ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಸಭೆಯಲ್ಲಿ ಮಾತನಾಡಿ ಬಿ ಶಿವರಾಂ, “ನಮ್ಮ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿದ್ದ ಕಾರಣ ಕಳೆದ ಚುನಾವಣೆಯಲ್ಲಿ ಬೇಲೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋತಿತು” ಎಂದು ಹೇಳಿದ್ದಾರೆ.

ಇದರಿಂದ ರಾಜಶೇಖರ್ ಅವರ ಬೆಂಬಲಿಗರು ಕೋಪಗೊಂಡು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾತಿಗೆ ಮಾತು ಬಳೆದು ಶಿವರಾಂ ಮತ್ತು ರಾಜಶೇಖರ್ ಬೆಂಬಲಿಗರ ನಡುವಿನ ಜಗಳ ತೀವ್ರ ಸ್ವರೂಪಕ್ಕೆ ಹೋಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...