ಬೆಂಗಳೂರಿನಲ್ಲಿ ಬಾಲಕ ಕಿಡ್ನಾಪ್‌; ಹಾಸನದಲ್ಲಿ ಬಿಟ್ಟುಹೋದ ಕಿಡಿಗೇಡಿಗಳು

Date:

ಬೆಂಗಳೂರಿನಲ್ಲಿ ವಿಳಾಸ ಕೇಳುವ ನೆಪದಲ್ಲಿ ಬಂದ ಕಿರಾತಕರು ಬಾಲಕನನ್ನು ಪ್ರಜ್ಞೆ ತಪ್ಪಿಸಿ ಅಪಹರಿಸಿದ್ದು, ಹಾಸನದಲ್ಲಿ ಬಿಟ್ಟುಹೋಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಅನಂತಪುರದ ಕೃಷ್ಣೇಗೌಡರ ಮಗ ನಾಗಾರ್ಜುನ ಪಿಯು ಕಾಲೇಜು ವಿದ್ಯಾರ್ಥಿ ಚಿರಾಗ್(17) ಅವರನ್ನು ಮಂಗಳವಾರ ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಅಪಹರಿಸಲಾಗಿತ್ತು. ಆತನನ್ನು ಹಾಸನದಲ್ಲಿ ಬಿಟ್ಟು ಆರೋಪಿಗಳು ಪಾರಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ ಕಾಲೇಜಿಗೆ ತೆರಳುವ ವೇಳೆ ಪ್ರಜ್ಞೆ ತಪ್ಪಿ ಎಚ್ಚರಗೊಂಡಾಗ ಬಾಲಕ ಹಾಸನ ಜಿಲ್ಲೆಯ ಅರಕಲಗೂಡು ಸಮೀಪದಲ್ಲಿದ್ದ. ಬಳಿಕ ಸಮೀಪದ ಮನೆ ಬಳಿ ತೆರಳಿ ಪೋಷಕರಿಗೆ ಫೋನ್ ಮಾಡಿದ್ದಾನೆ. ಕೂಡಲೇ ಹಾಸನಕ್ಕೆ ಬಂದ ಪೋಷಕರು ಮಗನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮತ್ತೆ ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು; ಹಲವರ ಬಂಧನ

ಅಸ್ವಸ್ಥಗೊಂಡಿದ್ದ ಬಾಲಕ ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಾರು ಯಾವ ಕಾರಣಕ್ಕೆ ಅಪಹರಣ ಮಾಡಿದ್ದಾರೆನ್ನುವ ಬಗ್ಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸಿದ್ದು, ಬೆಂಗಳೂರಿನ ಯಲಹಂಕ‌ ಪೊಲೀಸ್ ಠಾಣೆಗೆ ಅಪಹರಣದ ಬಗ್ಗೆ ದೂರು  ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...