ಚನ್ನರಾಯಪಟ್ಟಣ | ಒಳ ಮೀಸಲಾತಿ ಯೋಜನೆ: ಕೂಡಲೇ ಜಾರಿಗೆ ತರಬೇಕು; ದಂಡೂರ ಮಂಜುನಾಥ್ 

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಒಳ ಮೀಸಲಾತಿ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕು ಎಂದು ಮಾದಿಗ ದಂಡೂರ ಸಮಿತಿಯ ಮಂಜುನಾಥ್ ಒತ್ತಾಯಿಸಿದರು.

- Advertisement -

ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿ ಮಾತನಾಡಿ, “ಕಳೆದ 30 ವರ್ಷಗಳಿಂದ ಒಳ ಮೀಸಲಾತಿ ಜಾರಿಗೆ ತರಬೇಕೆಂಬ ಬೇಡಿಕೆ ಮುಂದುವರಿದಿದ್ದು, ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಂಗೀಕಾರದ ಜೊತೆಗೆ ರಾಜ್ಯಪಾಲರ ಅನುಮೋದನೆಯೂ ದೊರೆತಿದೆ. ಆದರೂ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇದನ್ನು ಜಾರಿಗೆ ತರಲು ಮುಂದಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನೂ ವಿಳಂಬ ಮಾಡದೆ ತಕ್ಷಣವೇ ಒಳ ಮೀಸಲಾತಿ ಜಾರಿಗೆ ತರಬೇಕು. ಮೀಸಲಾತಿ ಜಾರಿಗೆ ಬಂದ ದಿನದಿಂದಲೇ ಮಹಾನೀಯರ ಜಯಂತಿಗಳನ್ನು ಆಚರಿಸಲು ಮುಂದಾಗುತ್ತೇವೆಂದು ಹೇಳಿದರು. ಒಳ ಶೇಕಡ 160 ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇಕಡ 6 ಮೀಸಲಾತಿ ನೀಡಲಿ, ಉಳಿದ ಶೇಕಡ 9 ಅನ್ನು ಇತರ ಸಮುದಾಯಗಳಿಗೆ ನೀಡುವುದರಲ್ಲಿ ನಮ್ಮ ವಿರೋಧವಿಲ್ಲ. ನಮ್ಮ ಸಮುದಾಯದ ಜನರಿಗೆ ಬಹಳ ಅನ್ಯಾಯವಾಗಿರುವುದರಿಂದ ಮೊದಲು ಅವರಿಗೆ ನ್ಯಾಯ ಒದಗಿಸ ಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಚಂದ್ರಪ್ರಸಾದ್ ತ್ಯಾಗಿ 75ನೇ ಜನ್ಮದಿನಾಚರಣೆ‌

ಈ ಸಂದರ್ಭದಲ್ಲಿ ಮಾಜಿ ಪುರಸಭಾ ಸದಸ್ಯ ರಾಮಣ್ಣ, ನಂಜುಂಡಪ್ಪ, ಗಣೇಶ್ ಹಾಗೂ ಇನ್ನಿತರರು ಸೇರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...