ಹೊಳೆನರಸೀಪುರ-ಹಾಸನ ನಡುವೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಗೆ ಆಗ್ರಹ

Date:

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಹಾಸನ ನಗರಕ್ಕೆ ಆಗಮಿಸುತ್ತಿದ್ದಾರೆ. ಆದರೆ ಬೆಳಗಿನ ಸಮಯದಲ್ಲಿ ಹಾಸನದತ್ತ ಸಂಚರಿಸುವ ಬಸ್‌ಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

- Advertisement -

ಬೆಳಗಿನ ಸಮಯದಲ್ಲಿ ವಿವಿಧ ಕಾರ್ಖಾನೆಗಳಿಗೆ ಕೆಲಸಕ್ಕೆ ತೆರಳುವ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್‌ಗಳನ್ನು ಅವಲಂಬಿಸಿರುವುದರಿಂದ ಬಸ್‌ಗಳಲ್ಲಿ ವಿಪರೀತ ಜನದಟ್ಟಣೆ ಉಂಟಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಪ್ರಯಾಣಿಸಲು ಸಾಧ್ಯವಾಗದೆ, ಶಾಲಾ-ಕಾಲೇಜುಗಳಿಗೆ ತಡವಾಗಿ ತಲುಪುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ವಿದ್ಯಾರ್ಥಿಗಳು ಬೆಳಗ್ಗೆ ಎಷ್ಟೇ ಬೇಗ ಬಸ್ ನಿಲ್ದಾಣಕ್ಕೆ ಬಂದರೂ ಬಸ್‌ಗಳ ಕೊರತೆಯಿಂದಾಗಿ ಪ್ರಯಾಣಿಸಲು ಪರದಾಡುವಂತಾಗಿದೆ. ಕೆಲ ಸಂದರ್ಭಗಳಲ್ಲಿ ಬಸ್‌ನಲ್ಲಿನ ಜನದಟ್ಟಣೆ ಹಾಗೂ ಪ್ರಯಾಣಿಕರ ನಡುವಿನ ಅಸಮಾಧಾನದಿಂದ ವಿದ್ಯಾರ್ಥಿಗಳಿಗೆ ಅವಹೇಳನಕಾರಿ ಮಾತುಗಳನ್ನು ಕೇಳಬೇಕಾದ ಪರಿಸ್ಥಿತಿಯೂ ಎದುರಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪಟ್ಟಿಯಿಂದ ತಪ್ಪಿದ ಬರ ಪೀಡಿತ ಪ್ರದೇಶ; ರೈತ ಸಂಘ ಆಕ್ರೋಶ 

ಆದ್ದರಿಂದ ಹೊಳೆನರಸೀಪುರದಿಂದ ಹಾಸನಕ್ಕೆ ಬೆಳಗಿನ ಪೀಕ್‌ ಅವಧಿಯಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಿಸುವ ಮೂಲಕ ವಿದ್ಯಾರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿ ಧನುಶ್ರೀ ಕೆ.ಪಿ. ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...