ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

Date:

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ – ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆಗೆ  ₹426 ಕೋಟಿ ಪರಿಷ್ಕೃತ ವೆಚ್ಚಕ್ಕೆ ಅನುಮೋದನೆ ದೊರೆತಿದೆ. ನವೆಂಬರ್ ಅಂತ್ಯದೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಡಿಸೆಂಬರ್‌ನಲ್ಲಿ ಕಾಮಗಾರಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

- Advertisement -

2023ರಲ್ಲೇ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಅನುಮೋದನೆ ದೊರೆತಿತ್ತು. ಆದರೆ ಬಳಿಕ ಭೂಸ್ವಾಧೀನ ವೆಚ್ಚ ಹೆಚ್ಚಳ ಸೇರಿದಂತೆ ಹಲವು ತಾಂತ್ರಿಕ ಸಮಸ್ಯೆಗಳಿಂದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗಿರಲಿಲ್ಲ. 2024ರಲ್ಲಿ ಸಂಸದರಾಗಿ ಆಯ್ಕೆಯಾದ ಬಳಿಕ ಈ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಲಾಗಿದೆ ಎಂದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಎರಡು- ಮೂರು ಬಾರಿ ಭೇಟಿ ಮಾಡಿ ಯೋಜನೆಯ ಸಮಸ್ಯೆಗಳನ್ನು ವಿವರಿಸಿ ಮನವಿ ಸಲ್ಲಿಸಲಾಗಿತ್ತು. ಇದರ ಪರಿಣಾಮವಾಗಿ ಸುಮಾರು 20 ದಿನಗಳ ಹಿಂದೆ ಪರಿಷ್ಕೃತ ವೆಚ್ಚದ ಅಂದಾಜಿಗೆ ಅನುಮೋದನೆ ದೊರೆತಿದೆ ಎಂದು ಹೇಳಿದರು. ಯೋಜನೆ ಕಾರ್ಯಗತಗೊಳ್ಳಲು ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗಿದ್ದು, ನವೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಅಕ್ಟೋಬರ್ ಅಂತ್ಯದೊಳಗೆ ಪ್ರಕ್ರಿಯೆ ಮುಗಿಸುವಂತೆ ಸೂಚನೆ ನೀಡಲಾಗಿತ್ತಾದರೂ, ಹಬ್ಬಗಳ ಹಿನ್ನೆಲೆಯಲ್ಲಿ ಹೆಚ್ಚುವರಿ ಕಾಲಾವಕಾಶ ಪಡೆಯಲಾಗಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...