ಹಾಸನ | 80ನೇ ಸ್ವಾತಂತ್ರ್ಯವನ್ನು ಎಲ್ಲೆಡೆ ಆಚರಣೆ 

Date:

ಹಾಸನ ನಗರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಜನಪ್ರಿಯ ಆಸ್ಪತ್ರೆ, ಜನಪ್ರಿಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

- Advertisement -

ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ವಿ.ಕೆ ಅಬ್ದುಲ್ ಬಶೀರ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೈನಿಕರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ್ ಧ್ವಜಾರೋಹಣ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಅಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಶಾರುಖ್ ಅಬುಲ್ಲಾ, ರೋಟರಿ ಮಿಡ್ ಟೌನ್ ಅಧ್ಯಕ್ಷ ಯೋಗೇಶ್, ಜನಪ್ರಿಯ ಫೌಂಡೇಶನ್ ಉಪಾಧ್ಯಕ್ಷೆ ಫಾತಿಮಾ ನಸ್ರೀನ್ ಬಶೀರ್, ವೈದ್ಯರಾದ ಡಾ.ಮಂಜುನಾಥ್, ಡಾ. ಹರ್ಷ ಸುರೇಶ್, ಡಾ.ಮನೋಜ್ ಕುಮಾರ್, ಡಾ. ಪ್ರವೀಣ್ ಕುಮಾರ್, ಡಾ. ಭರತ್ ಸಾಹುಕಾರ್, ಡಾ.ಸುಮಾ, ಡಾ. ಭರತ್, ಡಾ.ಸುಹಾಸ್, ಡಾ.ಮುರಳಿಧರ್, ಡಾ.ಶೋಯೆಬ್, ಡಾ.ಫೈಜಲ್, ಡಾ.ಲೋಹಿತ್, ವ್ಯವಸ್ಥಾಪಕ ಪ್ರಮೋದ್ ಗೌಡ, ಆಸ್ಪತ್ರೆ ಸಿಬ್ಬಂದಿ, ಸಾರ್ವಜನಿಕರು, ಅಯ್ಯಪ್ಪ ಸ್ವಾಮಿ ಆಟೋ ನಿಲ್ದಾಣದ ಆಟೋ ಚಾಲಕರು, ಜನಪ್ರಿಯ ಪ್ಯಾರಾ ಮೆಡಿಕಲ್ ಮತ್ತು ನರ್ಸಿಂಗ್ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಳಿಕಾಂಬ ದೇವಸ್ಥಾನ: ನಗರದ ಕಾಳಿಕಾಂಬ ಕಮಠೇಶ್ವರ ದೇವಾಲಯದ ಆವರಣದಲ್ಲಿ ವಿಶ್ವಕರ್ಮ ಸಮಾಜ ತಾಲ್ಲೂಕು ಘಟಕದ ಮತ್ತು ವಿಶ್ವಕರ್ಮ ಸಂಘ-ಸಂಸ್ಥೆಗಳ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ. ಹರೀಶ್, ಪದಾಧಿಕಾರಿಗಳಾದ ಕೆ. ರಾಘವೇಂದ್ರಕುಮಾರ್, ಎಚ್.ಕೆ. ಆನಂದ್, ಎಚ್.ಬಿ. ಕುಮಾರಾಚಾರ್, ಎಚ್.ಎಸ್. ಶಿವಶಂಕರ್, ಎಚ್.ಎಸ್. ಆನಂದ್, ಎಂ.ಟಿ. ಸುರೇಶ್, ಎಚ್.ಎಂ. ಮಂಜು, ಬಿ. ಲೋಕೇಶ್, ಎಚ್.ಕೆ. ಸತೀಶ್, ದೀಪಕ್, ಶ್ರೀನಿವಾಸಮೂರ್ತಿ, ಎಚ್.ಎಲ್. ನರೇಂದ್ರ, ಭವಾನಿ ರಾಜು, ಆಶಾ ವಿಶ್ವನಾಥ್, ದಕ್ಷಿಣ ಶಕುಂತಲಾ, ಜಿ.ವಿ. ಪದ್ಮಾ ಹಾಜರಿದ್ದರು.

ಪಾಂಡಿತ್ಯ ಯುರೋ ಶಾಲೆ: ನಗರದ ಐಸಿಎಸ್‌ಇ ಶಾಲೆ ಪಾಂಡಿತ್ಯ ಯೂರೋ ಶಾಲೆಯಲ್ಲಿ ಪರಿಣಿತ ರಿಯಲ್ ಎಸ್ಟೇಟ್ ಡೆವಲಪರ್ಸ್ ಮಾಲೀಕ ಡಿ.ಪಿ. ಚಂದ್ರಶೇಖರ್ ಧ್ವಜಾರೋಹಣ ಮಾಡಿದರು. ಪ್ರಾಂಶುಪಾಲ ಡಾ. ವಿಶ್ವನಾಥ್ ಬಿ. ಕೋಳಿವಾಡ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಕಾರ್ಯದರ್ಶಿ ರಮ್ಯಾ ಚಂದ್ರಶೇಖರ್, ಉಪ ಪ್ರಾಂಶುಪಾಲರು, ಮಕ್ಕಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಇದನ್ನೂ ಓದಿದ್ದೀರಾ?ಹಾಸನ | ಮನೆ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ 

ಗೋಪನಹಳ್ಳಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ‘ಡೆಸ್ಟಿನಿ ರೈಡರ್ಸ್‌ ಹಾಸನ’ ತಂಡದ ವತಿಯಿಂದ ತಾಲ್ಲೂಕಿನ ಗೋಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 62 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌, ಪೆನ್ನು, ಪೆನ್ಸಿಲ್‌ ಹಾಗೂ ಪುಸ್ತಕಗಳನ್ನು ಉಚಿತವಾಗಿ ವಿತರಿಸುವ ಮೂಲಕ ಆಚರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...