ಹಾಸನ | ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಒತ್ತಾಯ

Date:

Advertisements

ಕ್ಷುಲಕ ಕಾರಣಕ್ಕೆ ಅಂಗನವಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ನಾಲ್ವರನ್ನು ಕೂಡಲೆ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪಟ್ಟಣದ ತಾ.ಪಂ ಆವರಣದಲ್ಲಿ ಸೇರಿದ್ದ ಅಂಗನವಾಡಿ ಕಾರ್ಯಕರ್ತೆಯರ ಪರವಾಗಿ ಸಂಘಟನೆಯ ಜಿಲ್ಲಾಧ್ಯಕ್ಷೆ ಪುಷ್ಪಾ ಮಾತನಾಡಿ, ತಾಲೂಕಿನ ಹೆಗ್ಗೋವೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಂಗಳಗೌರಿ ಎಂಬುವರು ಸೋಮವಾರ (ನ.13) ಕರ್ತವ್ಯಕ್ಕೆ ತೆರಳಿದ ಸಂದರ್ಭದಲ್ಲಿ, ನಾಲ್ವರು ಅವರನ್ನು ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.

ಪ್ರಕರಣ ದಾಖಲಿಸಿಕೊಳ್ಳಬೇಕಾಗಿದ್ದ ಪೊಲೀಸರು ಘಟನೆ ನಡೆದು 48 ಗಂಟೆಗಳಾದರು ಸಹ ಪ್ರಕರಣವನ್ನು ದಾಖಲಿಸಿಕೊಂಡಿಲ್ಲ. ಈ ಕುರಿತು ಪೊಲೀಸರನ್ನು ಕೇಳಿದರೆ, ಶಾಸಕರು ಪ್ರಕರಣವನ್ನು ಬಗೆಹರಿಸಿಕೊಡುತ್ತೇವೆಂದು ಹೇಳಿದ್ದಾರೆ. ಆದ್ದರಿಂದ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದಿದ್ದಾರೆ. ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

Advertisements

ಹಾಸನ ಮನವಿ

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸೌಮ್ಯ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆ ತಪ್ಪು ಮಾಡಿದಲ್ಲಿ ಅದರ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಗ್ರಾಮಸ್ಥರು ದೂರು ನೀಡಲಿ. ಆದರೆ, ಕಾರ್ಯನಿರ್ವಹಿಸುತ್ತಿರುವ ಅಂಗನಾಡಿ ಕಾರ್ಯಕರ್ತೆ ಮೇಲೆ ಹಲ್ಲೆ ನಡೆಸಲು ಇವರಿಗೆ ಯಾರು ಅಧಿಕಾರ ಕೊಟ್ಟಿದ್ದು. ಹಲ್ಲೆ ಆಗಿರುವ ಕುರಿತು ಪೊಲೀಸರಿಗೆ ಗೊತ್ತಿದ್ದರು ಸಹ, ನೈಜ ಘಟನೆಯನ್ನು ಮುಚ್ಚಿ ಹಾಕುವ ಯತ್ನ ಮಾಡುತ್ತಿದ್ದರು. ಕೂಡಲೇ ಪೊಲೀಸರು ಹಲ್ಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸದಿದ್ದಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಸಕಲೇಶಪುರ

ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಂಗನವಾಡಿ ಕಾರ್ಯಕರ್ತೆ ಮಂಗಳಗೌರಿ ಮಾತನಾಡಿ, ಹೆಗ್ಗೋವೆ ಗ್ರಾಮದ ಸುರೇಶ್ ಗೌಡ ಎಂಬುವರು ನಂದಿನಿ ಎಂಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ನಂದಿನಿ ಓಡಿ ಬಂದು ಅಂಗನವಾಡಿಯಲ್ಲಿ ಆಶ್ರಯ ಪಡೆದಿದ್ದರು. ಇದನ್ನೇ ನೆಪವಾಗಿಟ್ಟುಕೊಂಡು ಉಷಾ, ಸುರೇಶ್, ಚಂದನ, ವಸಂತಮ್ಮ ಎಂಬುವವರು ನನ್ನ ಮೇಲೆ ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜೊತೆಗೆ ಉಷಾರವರು ಅಂಗಡಿಯ ಪೀಠೋಪಕರಣಗಳನ್ನು ದಾಸ್ತಾನುಗಳನ್ನು ತೆಗೆದುಕೊಂಡು ಅಂಗನವಾಡಿ ಕೇಂದ್ರಕ್ಕೆ ಬೀಗ ಜಡಿದರು. ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು ಸಹ ಪೋಲಿಸರು ರಾಜಕೀಯ ಒತ್ತಡಕ್ಕೆ ಮಣಿದು ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಸತಾಯಿಸುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.

ಸಕಲೇಶಪುರ ಸಿಐಟಿಯು

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಿನಿ ವಿಧಾನಸೌಧದಿಂದ ತಾ.ಪಂ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಪಂಚಾಯತಿ, ಉಪ ವಿಭಾಗಾಧಿಕಾರಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ್, ಸಿಐಟಿಯು ಅಂಗನವಾಡಿ ಕಾರ್ಯಕರ್ತೆಯರ ತಾಲೂಕು ಘಟಕದ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷೆ ಶಾರದಾ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X