ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

Date:

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ ಅಥವಾ ಸಾಮಾಜಿಕ ವಿಚಾರವೇ?’ ಎಂದು ಪ್ರಶ್ನಿಸಿದರು. ಸಿಪಿಐಎಂ ಮುಖಂಡರಾದ ಧರ್ಮೇಶ್ ಮಾತನಾಡಿ, ನಾಸ್ತಿಕತೆ ವೈಯಕ್ತಿಕ ವಿಚಾರವೂ ಹೌದು ಜೊತೆಗೆ ಸಾಮಾಜಿಕ ವಿಚಾರವೂ ಹೌದು ಎಂದು ಹೇಳಿದರು. ವ್ಯಕ್ತಿಯಲ್ಲಿ ವೈಚಾರಿಕ ಚಿಂತನೆ ಬೆಳೆಯುವುದು ಅಗತ್ಯ. ಆದರೆ ಅದಕ್ಕೆ ಅನುಕೂಲವಾಗುವ ಸಾಮಾಜಿಕ ವಾತಾವರಣವೂ ಅಗತ್ಯವಾಗಿರುವುದರಿಂದ ಶಿಕ್ಷಣ, ಸಾಮಾಜಿಕ ವ್ಯವಸ್ಥೆ ಮತ್ತು ಚಿಂತನೆಯ ಕ್ಷೇತ್ರಗಳಲ್ಲಿ ಬದಲಾವಣೆಗಳು ಅಗತ್ಯವಾಗುತ್ತವೆ ಎಂದು ವಿವರಿಸಿದರು.

- Advertisement -

“ನಾಸ್ತಿಕತೆ ಎಂದರೆ ದೇವರು ಅಥವಾ ಧರ್ಮವನ್ನು ವಿರೋಧಿಸುವುದು ಎಂಬ ತಪ್ಪು ಕಲ್ಪನೆ ಇದೆ. ನಾಸ್ತಿಕತೆ ಎಂದರೆ ವೈಚಾರಿಕವಾಗಿ ಮತ್ತು ಪ್ರಶ್ನಿಸುವ ಮನೋಭಾವದಿಂದ ಯೋಚಿಸುವುದು” ಎಂದು ಅವರು ಸ್ಪಷ್ಟಪಡಿಸಿದರು. ವೈಜ್ಞಾನಿಕ ಚಿಂತನೆ ಮತ್ತು ಪ್ರಗತಿಪರ ವಿಚಾರಧಾರೆ ಬೆಳೆಯದಿದ್ದರೆ ಸಮಾಜ ಹಳೆಯ ಕಂದಾಚಾರ ಮತ್ತು ಮೂಢನಂಬಿಕೆಗಳತ್ತ ಹಿಂದಿರುಗುವ ಅಪಾಯವಿದೆ. ಜಗತ್ತು ವೈಜ್ಞಾನಿಕವಾಗಿ ಮುಂದುವರಿಯುತ್ತಿರುವ ಸಂದರ್ಭದಲ್ಲಿ ಭಾರತವೂ ವೈಚಾರಿಕತೆ, ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಮುನ್ನಡೆಯಬೇಕಾಗಿದೆ ಎಂದು ಧರ್ಮೇಶ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ವಿದ್ಯಾರ್ಥಿ-ಯುವಜನರು ಭಗತ್ ಸಿಂಗ್ ಅವರ ವೈಚಾರಿಕತೆಯನ್ನು ಅರಿತುಕೊಂಡು ಸಮಾಜದಲ್ಲಿನ ಅನ್ಯಾಯ, ಅಸಮಾನತೆ, ಜಾತಿ ತಾರತಮ್ಯ, ಶೋಷಣೆ ಹಾಗೂ ಮೂಢನಂಬಿಕೆಗಳ ಕುರಿತು ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳಬೇಕು. ಈ ಉದ್ದೇಶದಿಂದ ಆಯೋಜಿಸಿರುವ ರಾಜ್ಯಮಟ್ಟದ ವೈಚಾರಿಕ ಸಂವಾದ ಸಮಾವೇಶಕ್ಕೆ ಜಿಲ್ಲೆಯ ವಿದ್ಯಾರ್ಥಿ-ಯುವಜನರು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಧರ್ಮೇಶ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಟಿಯುಸಿ ಜಿಲ್ಲಾ ಅಧ್ಯಕ್ಷ ಎಂ.ಸಿ. ಡೋಂಗ್ರೆ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಬಿಜಿವಿಎಸ್ ಜಿಲ್ಲಾ ಕಾರ್ಯದರ್ಶಿ ಚಿನ್ನೇನಹಳ್ಳಿ ಸ್ವಾಮಿ, ಡಿವೈಎಫ್‌ಐ ಜಿಲ್ಲಾ ಸಂಚಾಲಕ ಪೃಥ್ವಿ, ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್. ವಿಜಯಕುಮಾರ್ ಹಾಗೂ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...