ಹಾಸನ | ಅಭಿವೃದ್ಧಿ ಕುಂಠಿತಗೊಂಡಿರುವ ಬೇಲೂರು ಯಗಚಿ ಜಲಾಶಯ 

Date:

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿರುವ ಯಗಚಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಪ್ರಮುಖ ಅಣೆಕಟ್ಟು ಮತ್ತು ಪ್ರವಾಸಿ ತಾಣವಾಗಿದೆ. ಬೇಲೂರಿನಿಂದ ಸುಮಾರು 3 ಕಿ.ಮೀ ದೂರ ಹಾಗೂ ಚಿಕ್ಕಮಗಳೂರು ಪಟ್ಟಣದಿಂದ ಕೇವಲ 2 ಕಿ.ಮೀ. ದೂರದ ಚಿಕ್ಕಬ್ಯಾಡಿಗೆರೆ ಗ್ರಾಮದ ಬಳಿಯಲ್ಲಿರುವ ಯಗಚಿ ಜಲಾಶಯ, ಇದು ಕಾವೇರಿ ಉಪನದಿಯಾದ ಯಗಚಿ ನದಿಯಾಗಿದೆ. ಈ ನದಿ 2001ರಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡಿತು. ಮುಖ್ಯವಾಗಿ ಈ ಯಗಚಿ ಜಲಾಶಯವನ್ನು ನೀರಾವರಿ ಮತ್ತು ಕುಡಿಯುವ ನೀರಿನ ಪೂರೈಕೆಗೆ ನಿರ್ಮಿಸಲಾಗಿತ್ತು.

- Advertisement -
Screenshot 2026 08 27 17 51 08 60 680d03679600f7af0b4c700c6b270fe7

ಯಗಚಿ ಜಲಾನಯನ ಪ್ರದೇಶಗಳಾದ ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಬೇಲೂರು ತಾಲ್ಲೂಕಿನ ಮಲೆನಾಡು ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾಶಯಕ್ಕೆ 1ಸಾವಿರ ಕ್ಯುಸೆಕ್ ಒಳಹರಿವು ಇದೆ. 5 ಕ್ರಸ್ಟ್ ಗೇಟ್‌ಗಳ ಮೂಲಕ 1,200 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಜಲಾಶಯದಿಂದ ಭೋರ್ಗರೆಯುತ್ತ ಹರಿಯುವ ನೀರಿನ ದೃಶ್ಯವನ್ನು ಕಣ್ಣುಂಬಿಕೊಳ್ಳಲು ಮಳೆಯ ನಡುವೆಯೂ ಜನ ತೆರಳುತ್ತಿದ್ದಾರೆ. ಯಗಚಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯದ ಮೇಲಿನಿಂದ, ನದಿಯಲ್ಲಿ ಹರಿಯುವ ನೀರಿನ ನೋಟ ರುದ್ರ ರಮಣೀಯವಾಗಿದೆ. ಚನ್ನಕೇಶವಸ್ವಾಮಿ ದೇವಾಲಯಕ್ಕೆ ಬರುವ ಪ್ರವಾಸಿಗರು ಮತ್ತು ಚಿಕ್ಕಮಗಳೂರಿಗೆ ತೆರಳುವ ಪ್ರಯಾಣಿಕರು ಹಾಗೂ ಸುತ್ತಲಿನ ಗ್ರಾಮಸ್ಥರು ಹೆಚ್ಚು ಉತ್ಸಾಹದಿಂದ ಯಗಚಿ ಜಲಾಶಯ ವೀಕ್ಷಿಸುತ್ತಿದ್ದಾರೆ. ಜಲಾಶಯದ ದ್ವಾರದಿಂದ ನೀರು ಹರಿಯುವ ಮನಮೋಹಕ ದೃಶ್ಯ ಆಸ್ವಾದಿಸಲು ತೆರಳುವಾಗ, ಇಳಿಜಾರಿನಂತಿರುವ ಕೆಸರಿನ ಕಿರಿದಾದ ರಸ್ತೆ ಜಾರುತ್ತದೆ. ಕೆಲವರು ಜಾರಿ ಬಿದ್ದಿರುವುದೂ ಇದೆ. ನೀರು ಹರಿಯುವ ಎರಡೂ ಬದಿಯಲ್ಲಿ ಕಂಬಿಗಳನ್ನು ಅಳವಡಿಸಿದ್ದರೂ, ಕೆಸರು ಮತ್ತು ಇಳಿಜಾರು ರಸ್ತೆ ಅಪಾಯಕ್ಕೆ ಅವಕಾಶ ನೀಡುತ್ತಿದೆ ಎಂದು ಜನರು ದೂರುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬೇಲೂರು ತಾಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಯಗಚಿ ಜಲಾಶಯ ದಿನದಿಂದ ದಿನಕ್ಕೆ ತನ್ನ ಆಕರ್ಷಣೆ ಕಳೆದುಕೊಳ್ಳುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ನೈಸರ್ಗಿಕ ಸೌಂದರ್ಯ, ವಿಶಾಲ ಜಲರಾಶಿ ಹಾಗೂ ಪ್ರವಾಸಿಗರನ್ನು ಸೆಳೆಯುವ ಸಾಮರ್ಥ್ಯ ಹೊಂದಿದ್ದರೂ, ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದಾಗಿ ಪ್ರವಾಸಿಗರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಮತ್ತು ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಯಗಚಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಿಸಲಾಗಿದೆ. ಜಲಾಶಯವು ಸುಮಾರು 3.36 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಮಳೆ ಪ್ರಮಾಣಕ್ಕೆ ಅನುಗುಣವಾಗಿ ನೀರಿನ ಮಟ್ಟದಲ್ಲಿ ಏರಿಳಿತ ಕಂಡುಬರುತ್ತದೆ. ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಹಲವು ಗ್ರಾಮಗಳು ಹಾಗೂ ಕೃಷಿ ಭೂಮಿಗಳು ಮುಳುಗಡೆಯಾಗಿವೆ. ಪ್ರವಾಸಿಗರ ನೆಚ್ಚಿನ ತಾಣ: ಐತಿಹಾಸಿಕ ಬೇಲೂರು ಚೆನ್ನಕೇಶವ ದೇವಾಲಯಕ್ಕೆ ಆಗಮಿಸುವ ಪ್ರವಾಸಿಗರಲ್ಲಿ ಬಹುತೇಕರು ಯಗಚಿ ಜಲಾಶಯಕ್ಕೂ ಭೇಟಿ ನೀಡುತ್ತಾರೆ. ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡಾ ಕೇಂದ್ರವೂ ಕಾರ್ಯನಿರ್ವಹಿಸುತ್ತಿದ್ದಾರೆ.

Screenshot 2026 08 27 17 48 57 58 40deb401b9ffe8e1df2f1cc5ba480b12 1

ಅಭಿವೃದ್ಧಿ ಪಡಿಸಬೇಕಾದ ಮೂಲಸೌಕರ್ಯಗಳು: ಜಲಾಶಯವನ್ನು ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶವಿದೆ. ಆದರೆ ಜಲಾಶಯದ ಸುತ್ತಮುತ್ತ ಅಗತ್ಯ ಮೂಲಸೌಕರ್ಯಗಳ ಕೊರತೆ ಪ್ರವಾಸಿಗರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಮುಖ್ಯವಾಗಿ ಸಾರ್ವಜನಿಕ ಶೌಚಾಲಯಗಳ ಸಮರ್ಪಕ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿದ್ದು, ಮಹಿಳೆಯರು ಹಾಗೂ ಕುಟುಂಬ ಸಮೇತ ಆಗಮಿಸುವ ಪ್ರವಾಸಿಗರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ. ಎರಡು ಜಿಲ್ಲೆಗಳ ಜನರಿಗೆ ನೀರು ಪೂರೈಸುವ ಪ್ರಮುಖ ಜಲಾಶಯದ ಆವರಣದಲ್ಲೇ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ. ಬೇಸಿಗೆ ಸೇರಿದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ಸಂದರ್ಭಗಳಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುತ್ತದೆ. ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಬಂಧಪಟ್ಟವರು ನಿರ್ಲಕ್ಷ್ಯವಹಿಸಿದ್ದಾರೆ ಎಂಬ ಆರೋಪ ಸ್ಥಳೀಯರು ಆರೋಪಿಸಿದ್ದಾರೆ. ಜಲಾಶಯದತ್ತ ಸಂಪರ್ಕ ಕಲ್ಪಿಸುವ ರಸ್ತೆಗಳ ಸ್ಥಿತಿಯೂ ಸಮರ್ಪಕವಾಗಿಲ್ಲ. ಕೆಲವು ಕಡೆ ರಸ್ತೆ ಹದಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ರಾತ್ರಿ ವೇಳೆ ಸೂಕ್ತ ವಿದ್ಯುತ್ ದೀಪಗಳ ವ್ಯವಸ್ಥೆ ಇಲ್ಲದಿರುವುದರಿಂದ ಜಲಾಶಯದ ಸುತ್ತಮುತ್ತ ಕತ್ತಲು ಆವರಿಸುತ್ತದೆ. ಇದರಿಂದ ಪ್ರವಾಸಿಗರ ಸುರಕ್ಷತೆ ಬಗ್ಗೆಯೂ ಆತಂಕ ವ್ಯಕ್ತವಾಗುತ್ತಿದೆ. 

Screenshot 2026 08 27 17 57 14 01 680d03679600f7af0b4c700c6b270fe7

ಇದನ್ನೂ ಓದಿದ್ದೀರಾ?ಹಾಸನ | ನಾವು ದ್ವೇಷದ ರಾಜಕಾರಣ ಮಾಡಲ್ಲ; ಹೆಚ್.ಡಿ ರೇವಣ್ಣ 

ತ್ಯಾಜ್ಯ ವಿಲೇವಾರಿ ವ್ಯವಸ್ಥೆ ಅಗತ್ಯ: ಪ್ರವಾಸಿಗರು ತರುವ ಪ್ಲಾಸ್ಟಿಕ್ ಬಾಟಲಿ, ಆಹಾರ ಪೊಟ್ಟಣ ಸೇರಿದಂತೆ ವಿವಿಧ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕಾಗಿದೆ. ಸೂಕ್ತ ಕಸದ ತೊಟ್ಟಿಗಳು ಹಾಗೂ ನಿಯಮಿತ ಸ್ವಚ್ಛತಾ ವ್ಯವಸ್ಥೆ ಇಲ್ಲದಿದ್ದರೆ ಜಲಾಶಯದ ನೈಸರ್ಗಿಕ ಸೌಂದರ್ಯಕ್ಕೂ ಧಕ್ಕೆ ಉಂಟಾಗುವ ಸಾಧ್ಯತೆ ಇದೆ.
ಯಗಚಿ ಜಲಾಶಯವನ್ನು ಕೇವಲ ನೀರು ಸಂಗ್ರಹಿಸುವ ಜಲಾಶಯವಾಗಿ ನೋಡದೆ, ಹಾಸನ ಜಿಲ್ಲೆಯ ಪ್ರಮುಖ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವ ಅಗತ್ಯವಿದೆ. ಸುಸಜ್ಜಿತ ಉದ್ಯಾನ, ಮಾಹಿತಿ ಕೇಂದ್ರ, ಶೌಚಾಲಯ, ಕುಡಿಯುವ ನೀರು, ಉತ್ತಮ ರಸ್ತೆ, ವಿದ್ಯುತ್ ದೀಪ ಹಾಗೂ ಸ್ವಚ್ಛತಾ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಪ್ರವಾಸಿಗರಿಗೆ ಉತ್ತಮ ಅನುಭವ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ, ಪ್ರವಾಸೋದ್ಯಮ ಇಲಾಖೆ ಹಾಗೂ ಜನಪ್ರತಿನಿಧಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹಾಗೂ ಪ್ರವಾಸಿಗರ ಒತ್ತಾಯಿಸಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...