ಹಾಸನ | ಡಿವೈಡರ್‌ಗೆ ಕಾರು ಡಿಕ್ಕಿ: ಓರ್ವ ಸಾವು ಇಬ್ಬರು ಗಂಭೀರ

Date:

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

- Advertisement -

ಹಾರನಹಳ್ಳಿಯ ಮಂಜುನಾಥ್(30) ಮೃತ ದುರ್ದೈವಿ. ಗಂಭೀರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆ ಫಲಿಸದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಹ್ಯುಂಡೈ ಐ-20 ಕಾರು ಅತಿ ವೇಗವಾಗಿ ಚಲಿಸುತ್ತಿತ್ತು. ಮತ್ತೊಂದು ವಾಹನವನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಲವು ಬಾರಿ ಉರುಳಿ ಪಕ್ಕದ ಲೇನ್‌ಗೆ ಬಿದ್ದಿದೆ. ವಿದ್ಯುತ್ ಕಂಬವೂ ನೆಲಕ್ಕುರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತದ ತೀವ್ರತೆಗೆ ಜಖಂಗೊಂಡ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಬಹುತೇಕ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದವರನ್ನು ಹೊರತೆಗೆಯಲು ಸ್ಥಳೀಯರು ಸಹಕರಿಸಿದ್ದಾರೆ ಎನ್ನಲಾಗಿದೆ.

ಹಾರನಹಳ್ಳಿಯ ಮಂಜುನಾಥ್ ಅವರ ಮೃತದೇಹವನ್ನು ಅರಸೀಕೆರೆ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಸಿಲಿಂಡರ್‌ ಸ್ಫೋಟದಿಂದ ಗಂಭೀರ ಗಾಯಗೊಂಡಿದ್ದ ತಂದೆ, ತಾಯಿ, ಮಗ ಸಾವು

ನವೀನ್ ಮತ್ತು ಪವನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಹಾಸನದ MMM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ದುರಂತಕ್ಕೆ ಕಾರಣವೆಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಬಾಣಾವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮೂಢನಂಬಿಕೆ, ಜಾತಿ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ವೈಚಾರಿಕತೆ ಅಗತ್ಯ; ಸಿಪಿಐಎಂ ಧರ್ಮೇಶ್ 

ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಹಾಸನ | ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕ ವಿನಾಯಿತಿ ಪಡೆಯಲು ಕೆ.ಪಿ.ಆರ್.ಎಸ್ ಆಗ್ರಹ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳು ಹಾಗೂ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ...

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ...