ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

Date:

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಒತ್ತಾಯಿಸಿ ಹಾಸನ ನಗರದಲ್ಲಿ ಶನಿವಾರ ಎಡಪಕ್ಷಗಳ ಜಂಟಿ ಪ್ರತಿಭಟನೆಯನ್ನು ನಡೆಸಲಾಯಿತು.

- Advertisement -
Screenshot 2026 09 27 07 35 05 53 7352322957d4404136654ef4adb64504

ಮೂವರು ಚುನಾವಣಾ ಆಯುಕ್ತರಲ್ಲಿ ಇಬ್ಬರು ಎತ್ತಿದ ಸಮಸ್ಯೆಗಳ ಕುರಿತು ಸೆಪ್ಟೆಂಬರ್ 23 ರಂದು ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿಗಳು, ಪ್ರಸ್ತುತ ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ಅಧೀನದಲ್ಲಿ ಚುನಾವಣಾ ಆಯೋಗ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬ ಬಗ್ಗೆ ಕೆಲವು ಮೂಲಭೂತ ಪ್ರಶ್ನೆಗಳನ್ನು ಎತ್ತುತ್ತವೆ. ಇವು ಕೇವಲ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್)ಗೆ ಸೀಮಿತವಲ್ಲ. ಭಾರತ ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಮತ್ತು ಸಮಗ್ರತೆಯ ಬಗ್ಗೆಯೂ ಗಂಭೀರ ಆತಂಕಗಳನ್ನು ಎತ್ತುತ್ತವೆ. ಅವು ಮುಖ್ಯ ಚುನಾವಣಾ ಆಯುಕ್ತರ ಕಚೇರಿಯ ವಿರುದ್ಧ ದೋಷಾರೋಪಣೆಯಾಗಿದೆ ಮತ್ತು ಆ ಕಚೇರಿ ವಿಶ್ವಾಸಾರ್ಹತೆಕಳೆದುಕೊಂಡಿದೆ. ಮೂವರಲ್ಲಿ ಇಬ್ಬರು ಚುನಾವಣಾ ಆಯುಕ್ತರು ಕನಿಷ್ಠ 14 ಸಂದರ್ಭಗಳಲ್ಲಿ ಮತದಾರರ ನೋಂದಣಿ, ಹೆಸರುಗಳ ಅಳಿಸುವಿಕೆ ಮತ್ತು ಮರು ಸ್ಥಾಪನೆ, ಹಾಗೂ ಎಸ್‌ಐಆರ್ ನಡವಳಿಕೆಗೆ ಸಂಬAಧಿಸಿದ ನಿರ್ಧಾರಗಳಿಗೆ ಆಕ್ಷೇಪಗಳನ್ನು ದಾಖಲಿಸಿದ್ದಾರೆ. ತಮ್ಮ ಒಪ್ಪಿಗೆಯಿಲ್ಲದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ಗಂಭೀರ ಆತಂಕಗಳನ್ನೂ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈಗ ಬಹಿರಂಗೊAಡಿರುವ ಅಂಶಗಳು ವಿರೋಧಪಕ್ಷಗಳು ಮತ್ತು ನಾಗರಿಕ ಸಂಘಟನೆಗಳು ಪದೇಪದೇ ಎತ್ತಿದ ಆತಂಕಗಳನ್ನು ದೃಢಪಡಿಸುತ್ತವೆ ಮತ್ತು ಎಸ್‌ಐಆರ್ ಹಾಗೂ ಮತದಾರರ ಪಟ್ಟಿ ನಿರ್ವಹಣೆ ಪಾರದರ್ಶಕ ಹಾಗೂ ವಿಕೇಂದ್ರೀಕೃತ ಎಂಬ ಹೇಳಿಕೆಗಳ ಟೊಳ್ಳುತನವನ್ನು ಬಯಲು ಮಾಡುತ್ತವೆ. ಆ ಇಬ್ಬರು ಆಯುಕ್ತರು ಮತದಾರರ ಡೇಟಾಬೇಸನ್ನು ಕ್ರಮೇಣ ಕೇಂದ್ರೀಕರಣ ಮತ್ತು ರಾಜ್ಯ ಹಾಗೂ ಕ್ಷೇತ್ರ ಮಟ್ಟದ ಶಾಸನಬದ್ಧ ಅಧಿಕಾರಿಗಳ ಪ್ರವೇಶದ ಮೇಲಿನ ನಿರ್ಭಂಧಗಳನ್ನು ನಿರ್ದಿಷ್ಟವಾಗಿ ಎತ್ತಿತೋರಿಸಿದ್ದಾರೆ. ಇದರ ಪರಿಣಾಮಗಳು ಕೇವಲ ಆಡಳಿತಾತ್ಮಕವಲ್ಲ. ಉದಾಹರಣೆಗೆ ಗೋವಾದಲ್ಲಿ, 97 ಮತದಾರರನ್ನು ಅರ್ಹರು ಎಂದು ಗುರುತಿಸಿದ ತಮ್ಮ ನಿರ್ಧಾರಗಳನ್ನು ದಾಖಲಿಸದಂತೆ ತಂತ್ರಾAಶ ನಿರ್ಬಂಧಗಳು ಚುನಾವಣಾ ನೋಂದಣಿ ಅಧಿಕಾರಿಗಳನ್ನು ತಡೆದವುಎಂದು ವರದಿಯಾಗಿದೆ.

ಆದ್ದರಿಂದ ಈ ವಿಷಯ ಎಸ್‌ಐಆರ್ ಅನ್ನು ಮೀರಿಬಹಳ ದೂರಹೋಗುತ್ತದೆ. ಇದು ಭಾರತ ಚುನಾವಣಾ ಆಯೋಗದ ಪಾರದರ್ಶಕತೆ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆ, ಹಾಗೂ ಸಾರ್ವತ್ರಿಕ ವಯಸ್ಕ ಮತದಾನದ ಮೂಲಭೂತ ಪ್ರಜಾಸತ್ತಾತ್ಮಕ ತತ್ವದರಕ್ಷಣೆಗೆ ಸಂಬAಧಿಸಿದೆ. ಮತದಾನದಹಕ್ಕನ್ನು ಅಪಾರದರ್ಶಕ, ಕೇಂದ್ರೀಕೃತ ನಿಯಂತ್ರಿತ ಪ್ರಕ್ರಿಯೆಗಳ ಮೇಲೆ ಅವಲಂಬಿತಗೊಳಿಸುವ ಯಾವುದೇ ವ್ಯವಸ್ಥೆ ಚುನಾವಣಾ ವ್ಯವಸ್ಥೆಯಲ್ಲಿ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುತ್ತದೆ.

ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ಸ್ವಾತಂತ್ರ‍್ಯ ಇಷ್ಟು ಕೆಳಮಟ್ಟಕ್ಕೆ ಎಂದೂ ಇಳಿದಿರಲಿಲ್ಲ. ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ವ್ಯವಸ್ಥೆಯನ್ನು ಕೆಟ್ಟದಾಗಿ ನಿರ್ವಹಿಸಿ ಸಂಸ್ಥೆಯಲ್ಲಿ ಜನರ ವಿಶ್ವಾಸವನ್ನು ಕುಗ್ಗಿಸಿದ್ದಕ್ಕೆ ಹೊಣೆಗಾರರಾಗಬೇಕು.

ಹಕ್ಕುತ್ತಾಯ : • ಜ್ಞಾನೇಶ್ ಕುಮಾರ್ ಅವರನ್ನು ಅಧಿಕಾರದಿಂದ ತೆಗೆದು ಹಾಕಬೇಕು.

• ಎಸ್‌ಐಆರ್ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಮತದಾರರ ಪಟ್ಟಿಯಿಂದ ತಪ್ಪಾಗಿ ಹೊರಗಿಡಲಾದ ಎಲ್ಲರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಬೇಕು.

• ಭಾರತ ಚುನಾವಣಾ ಆಯೋಗದ ಸ್ವತಂತ್ರ ಮತ್ತು ಪ್ರಜಾಸತ್ತಾತ್ಮಕ ಕಾರ್ಯನಿರ್ವಹಣೆಯನ್ನುಮರುಸ್ಥಾಪಿಸಬೇಕು.

• ಚುನಾವಣಾ ಆಯುಕ್ತರ ನೇಮಕದ ಪ್ರಸ್ತುತ ವ್ಯವಸ್ಥೆಯನ್ನು ಪ್ರಧಾನಮಂತ್ರಿ, ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂಕೋರ್ಟ್ ಪ್ರಸ್ತಾವಿತ ಆಯ್ಕೆ ಪ್ರಕ್ರೀಯೆಯಾಗಿ ಬದಲಾಯಿಸಬೇಕು.

ಇದನ್ನೂ ಓದಿದ್ದೀರಾ?ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನದ ಹೇಮಾವತಿ ಪ್ರತಿಮೆಯ ಮುಂಬಾಗದಲ್ಲಿ ಸಿಪಿಐಎಂ ಮತ್ತು ಸಿಪಿಐ ಪಕ್ಷಗಳ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಆರ್.ನವೀನ್‌ಕುಮಾರ್, ಸಿಪಿಐ ಜಿಲ್ಲಾ ಕಾರ್ಯದರ್ಶಿ ಧರ್ಮರಾಜ್, ಸಿಪಿಐಎಂ ಮುಖಂಡರಾದ ಧರ್ಮೇಶ್, ಸಿಪಿಐ ಮುಖಂಡರಾದ ಎಂ.ಸಿ. ಡೋಂಗ್ರೆ ಜನಪರ ಸಂಘಟನೆಗಳ ಮುಖಂಡರಾದ ವಿಜಯ್ ಕುಮಾರ್ ದಂಡೋರ, ಮುಬಶಿರ್ ಅಹಮದ್, ಅನ್ಸರ್, ಹರೀಶ್ ಕಟ್ಟೆ, ರಮೇಶ್, ಗಿರೀಶ್ ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...