ಹಾಸನ | ಕಾರ್ಮಿಕರಿಗೆ 36 ಸಾವಿರ ರೂ. ಕನಿಷ್ಠ ವೇತನ ನೀಡುವಂತೆ ಸಿಐಟಿಯು ಆಗ್ರಹ: ಮೇ 30ರಂದು ಪ್ರತಿಭಟನೆ

Date:

ಕಾರ್ಮಿಕರಿಗೆ ತಿಂಗಳಿಗೆ ₹36 ಸಾವಿರ ಕನಿಷ್ಠ ವೇತನ ನೀಡಬೇಕು ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮೇ 30ರಂದು ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾ ಅಧ್ಯಕ್ಷ ಧರ್ಮೇಶ್ ತಿಳಿಸಿದರು.

- Advertisement -

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ದೇಶವು ತೀವ್ರ ಸಾಮಾಜಿಕ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಉತ್ಪಾದನಾ ವಲಯ ಕುಸಿತ ಕಂಡಿದೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ʼದೇಶದ ಆರ್ಥಿಕತೆ ಅಭಿವೃದ್ಧಿಯ ಹಾದಿಯಲ್ಲಿದೆʼ ಎಂಬ ಸರ್ಕಾರದ ವಾದ ವಾಸ್ತವಕ್ಕೆ ದೂರವಾಗಿದೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ದೇಶದ ಒಟ್ಟು ಸಂಪತ್ತಿನ ಶೇ.90ರಷ್ಟು ಭಾಗ ಕೇವಲ ಶೇ.10ರಷ್ಟು ಶ್ರೀಮಂತರ ಕೈಯಲ್ಲಿ ಕೇಂದ್ರೀಕೃತವಾಗಿದೆ. ಉದ್ಯಮಿಗಳ ಆಸ್ತಿ ಅಪಾರವಾಗಿ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಉನ್ನತ ಶಿಕ್ಷಣ ಪಡೆದ ಯುವಜನರಿಗೂ ಸಮರ್ಪಕ ಸಂಬಳ ದೊರೆಯುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ? ವೇತನ ಪರಿಷ್ಕರಣೆ | ಗಾರ್ಮೆಂಟ್ಸ್‌ ನೌಕರರಿಗಿಲ್ಲ ಕನಿಷ್ಠ ವೇತನ; ಇದೇನಾ ಕಾಂಗ್ರೆಸ್‌ನ ಮಹಿಳಾ ಸಬಲೀಕರಣ?

“ಜನರ ಗಮನವನ್ನು ನೈಜ ಆರ್ಥಿಕ ಸಮಸ್ಯೆಗಳಿಂದ ಬೇರೆಡೆಗೆ ತಿರುಗಿಸಲು ಧರ್ಮ, ಜಾತಿ ಹಾಗೂ ಕೋಮು ಆಧಾರಿತ ರಾಜಕಾರಣವನ್ನು ಬಳಸಲಾಗುತ್ತಿದೆ” ಎಂದು ಆರೋಪಿಸಿದರು.

“ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕರಿಂದ ಸಹಿ ಸಂಗ್ರಹ ನಡೆಸಲಾಗಿದೆ. ಜತೆಗೆ ಮೇ 30ರ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ ಬಿ ಪುಷ್ಪ, ಖಜಾಂಚಿ ಅರವಿಂದ್, ಸೌಮ್ಯ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಅವಳ ಕಣ್ಣೋಟ | ಡೊರೊಥಿ- ಸ್ವೀಕಾರದಾಚೆಗೆ, ಒಳಗೊಳ್ಳುವಿಕೆಯ ಕಡೆಗೆ…

ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು...