ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, “ಅರ್ಜುನನ ಸ್ಮಾರಕ ಇಲ್ಲಿ ನಿರ್ಮಾಣವಾಗಲು ಅರಣ್ಯ ಸಚಿವರೇ ಪ್ರಮುಖ ಕಾರಣರಾಗಿದ್ದು, ಅವರು ನುಡಿದಂತೆ ನಡೆದುಕೊಂಡಿದ್ದಾರೆ. ಮಾನವ–ಕಾಡಾನೆ ಸಂಘರ್ಷ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಈ ಸರ್ಕಾರ ಸಾಕಷ್ಟು ಮಟ್ಟಿಗೆ ಯಶಸ್ವಿಯಾಗಿದೆ” ಎಂದು ತಿಳಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ದಸರಾ ರಾಯಭಾರಿ ಅರ್ಜುನ ಸ್ಮಾರಕ ಲೋಕಾರ್ಪಣೆ; ಸಚಿವ ಈಶ್ವರ ಖಂಡ್ರೆ
ಹಗಲಿರುಳು ಶ್ರಮಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯವಾಗಿದ್ದು, ಮಾನವ ಮತ್ತು ಕಾಡಾನೆ ಸಂಘರ್ಷ ನಿಯಂತ್ರಣಕ್ಕೆ ಅವರು ತೋರಿಸುತ್ತಿರುವ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅರಣ್ಯ ಸಚಿವರು ಬೀದರ್ ಜಿಲ್ಲೆಯನ್ನು ಹೊರತುಪಡಿಸಿದರೆ ಅತಿ ಹೆಚ್ಚು ಬಾರಿ ನಮ್ಮ ಕ್ಷೇತ್ರಕ್ಕೆ ಭೇಟಿ ನೀಡಿ, ಸ್ಥಳೀಯ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.




