ಹಾಸನ | ದಲಿತ ಗುತ್ತಿಗೆದಾರನ ಕಾಮಗಾರಿ ವಿಳಂಬ; ಶೇ. ಹಣದ ಬೇಡಿಕೆ ಆರೋಪ: ಎಚ್.ಎಂ. ವಿಶ್ವನಾಥ್

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದಲಿತ ಗುತ್ತಿಗೆದಾರನಿಗೆ ಮಂಜೂರಾಗಿರುವ ಸಾರ್ವಜನಿಕ ಕಾಮಗಾರಿಯನ್ನು ಆರಂಭಿಸಲು ಸ್ಥಳೀಯ ಶಾಸಕರು ಶೇಕಡಾವಾರು ಹಣಕ್ಕೆ ಬೇಡಿಕೆ ಇಟ್ಟು ವಿಳಂಬ ಮಾಡುತ್ತಿದ್ದಾರೆ. ಪಿಡಬ್ಲ್ಯೂಡಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ; ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಗಂಭೀರ ಆರೋಪ ಮಾಡಿದರು.

- Advertisement -

ಪಟ್ಟಣದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಕಚೇರಿ ಎದುರು ಶನಿವಾರ ಸಾಂಕೇತಿಕ ಪ್ರತಿಭಟನೆ ನಡೆಸಿದ ಅವರು, ಮುಖ್ಯ ಇಂಜಿನಿಯರ್ ಪ್ರಸನ್ನಕುಮಾರ್ ಅವರಿಗೆ ಮೌಖಿಕ ದೂರು ಸಲ್ಲಿಸಿ, ಗುತ್ತಿಗೆದಾರರಿಗೆ ಯಾವುದೇ ಅನಗತ್ಯ ತೊಂದರೆ ನೀಡದೆ ಕಾಮಗಾರಿ ಆರಂಭಿಸಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದರು.ಜಲಜೀವನ್ ಮಿಷನ್ (ಜೆಜೆಎಂ) ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಶೇಕಡಾವಾರು ಹಣದ ವ್ಯವಹಾರ ನಡೆಯುತ್ತಿದೆ ಎಂಬ ಆರೋಪ ಮಾಡಿರುವ ಅವರು, ಈ ಕಾರಣದಿಂದ ಅನೇಕ ಕಾಮಗಾರಿಗಳು ಸ್ಥಗಿತಗೊಂಡಿವೆ ಎಂದು ದೂರಿದರು. ಸಾರ್ವಜನಿಕ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗುವ ರೀತಿಯ ಯಾವುದೇ ಕ್ರಮಗಳು ನಡೆಯಬಾರದು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಗುತ್ತಿಗೆದಾರರಿಂದ ಶೇಕಡಾವಾರು ಹಣ ಪಡೆಯಲಾಗುತ್ತಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಅವರು, ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ₹5ರಿಂದ ₹10 ಕೋಟಿ ಹಣ ಪಡೆದು ಮತಗಳನ್ನು ಮಾರಾಟ ಮಾಡಿರುವವರೇ, ಈಗ ದಲಿತ ಗುತ್ತಿಗೆದಾರನ ₹20 ಲಕ್ಷ ಮೌಲ್ಯದ ಸಣ್ಣ ಕಾಮಗಾರಿಗೂ ಕಮಿಷನ್ ಪಡೆಯಲು ಮುಂದಾಗಿರುವುದು ದುರದೃಷ್ಟಕರ ಕಾಮಗಾರಿ ತಡೆಯುವುದನ್ನು ಮುಂದುವರಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸುವುದರ ಜೊತೆಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿ ಎದುರು ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಟೆಂಡರ್ ಮಂಜೂರಾದ ಕಾಮಗಾರಿಗಳನ್ನು ಆರಂಭಿಸಲು ಅವಕಾಶ ನೀಡದಿದ್ದರೆ ಅದನ್ನು ಲಿಖಿತವಾಗಿ ತಿಳಿಸಬೇಕು. ಇಲ್ಲವಾದರೆ ತಕ್ಷಣ ಕಾಮಗಾರಿ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ ಅವರು, “ಫಾರ್ಮಾಲಿಟಿ” ಹಾಗೂ “ಪ್ರೋಟೋಕಾಲ್” ಹೆಸರಿನಲ್ಲಿ ಕಾಮಗಾರಿಗಳನ್ನು ವಿಳಂಬ ಮಾಡುವುದು ಸರಿಯಲ್ಲ. ತಾಲ್ಲೂಕಿನಲ್ಲಿ ವಿವಿಧ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದ ಅವರು, ಅವುಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಅಕ್ರಮಗಳ ಕುರಿತು ಸಂಬಂಧಪಟ್ಟ ಮೇಲಧಿಕಾರಿಗಳು ಹಾಗೂ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಈ ವೇಳೆ ಮಾತನಾಡಿದ ಪಿಡಬ್ಲ್ಯೂಡಿ ಮೂರನೇ ದರ್ಜೆ ಗುತ್ತಿಗೆದಾರ ಜಾನಕೆರೆ ಲೋಕೇಶ್, “ಗದ್ದುಪಾಳ್ ಹಳ್ಳಿಯ ತಡೆಗೋಡೆ, ಕುಂಬರಡಿ–ಎತ್ತಿನಹಳ್ಳಿ ರಸ್ತೆಯ ತಡೆಗೋಡೆ ಹಾಗೂ ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರ್ಕಳ್ಳಿ ಭಾಗದ ಮೂರು ಕಾಮಗಾರಿಗಳು ಟೆಂಡರ್ ಮೂಲಕ ತಮಗೆ ಮಂಜೂರಾಗಿದ್ದು, ಇಲಾಖೆಯಿಂದ ವರ್ಕ್ ಆರ್ಡರ್ ಸಹ ನೀಡಲಾಗಿದೆ ಎಂದರು. ಆದರೆ ಗುದ್ದಲಿ ಪೂಜೆ ನಡೆದ ಬಳಿಕವೇ ಕಾಮಗಾರಿ ಆರಂಭಿಸುವಂತೆ ಸೂಚಿಸಲಾಗುತ್ತಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ದಿನಾಂಕ ನಿಗದಿಯಾಗದ ಕಾರಣ ಕಾಮಗಾರಿ ಆರಂಭಿಸಲು ಸಾಧ್ಯವಾಗುತ್ತಿಲ್ಲ. ಮಳೆಗಾಲ ಆರಂಭವಾಗಿರುವುದರಿಂದ ಕಾಮಗಾರಿ ನಿರ್ವಹಣೆಗೆ ತೊಡಕಾಗಿದ್ದು, ಟೆಂಡರ್ ಹಾಗೂ ತಾಂತ್ರಿಕ ಪ್ರಕ್ರಿಯೆಗಳಿಗಾಗಿ ಈಗಾಗಲೇ ಲಕ್ಷಾಂತರ ರೂಪಾಯಿ ವೆಚ್ಚವಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಉಚಿತ ಶಿಕ್ಷಣಕ್ಕಾಗಿ ಮಕ್ಕಳ ಮನೆ, ಕಲಿಕಾ ಕೇಂದ್ರ ಸ್ಥಾಪನೆ; ಶಾಸಕ ಎ. ಮಂಜು 

ಒಂದು ಕಡೆ ಇಲಾಖೆ ಕಾಮಗಾರಿ ತಕ್ಷಣ ಆರಂಭಿಸುವಂತೆ ಸೂಚಿಸುತ್ತಿದ್ದರೆ, ಮತ್ತೊಂದು ಕಡೆ ಗುದ್ದಲಿ ಪೂಜೆ ಆಗುವವರೆಗೆ ಕಾಯುವಂತೆ ಹೇಳಲಾಗುತ್ತಿದೆ. ಈ ದ್ವಂದ್ವದಿಂದ ಆರ್ಥಿಕ ನಷ್ಟ ಉಂಟಾಗಿದ್ದು, ತಕ್ಷಣ ಕಾಮಗಾರಿ ಆರಂಭಿಸಲು ಅವಕಾಶ ಕಲ್ಪಿಸುವಂತೆ ಅವರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...