ಹಾಸನ | ದಲಿತರ ಭೂಮಿ, ಶಿಕ್ಷಣ, ಉದ್ಯೋಗ ಘನತೆಯ ಬದುಕಿನ ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಚರ್ಚಿಸಲಿ; ಡಿಎಚ್‌ಎಸ್

Date:

ಸಂಸತ್ತಿನ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ದಲಿತರ ಭೂಮಿ, ಶಿಕ್ಷಣ, ವಸತಿ ಮತ್ತು ಉದ್ಯೋಗದ ನೈಜ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಬೇಕು ಹಾಗೂ ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ – ಕರ್ನಾಟಕ(ಡಿಎಚ್‌ಎಸ್) ವತಿಯಿಂದ ನಗರದ ಮಹಾವೀರ ವೃತ್ತದಲ್ಲಿ ‘ಪಾರ್ಲಿಮೆಂಟ್ ಚಲೋ’ ಬೃಹತ್ ಸಹಿ ಸಂಗ್ರಹ ಅಭಿಯಾನಕ್ಕೆ ಬುಧವಾರ ಚಾಲನೆ ನೀಡಲಾಯಿತು.  ರಾಷ್ಟ್ರಮಟ್ಟದ ದಲಿತ ಶೋಷಣಾ ಮುಕ್ತಿ ಮಂಚ್ (ಡಿಎಸ್ಎಂಎಂ) ದೇಶವ್ಯಾಪಿ ಹಮ್ಮಿಕೊಂಡಿರುವ ಕೋಟ್ಯಂತರ ಸಹಿ ಸಂಗ್ರಹ ಆಂದೋಲನದ ಅಂಗವಾಗಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ದಲಿತ ಮುಖಂಡ ಶ್ರೀ ನಾರಾಯಣದಾಸ್ ಅವರು, ಕರ್ನಾಟಕದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿವೆ. ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಿರುವುದನ್ನು ವಿವಿಧ ವರದಿಗಳು ಸೂಚಿಸುತ್ತಿವೆ. ದಲಿತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಮತ್ತು ಖಂಡಿಸಿ ದಲಿತ ಹಕ್ಕುಗಳ ಸಮಿತಿ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನ ಅತ್ಯಂತ ಸೂಕ್ತವಾದ ಕಾರ್ಯಕ್ರಮವಾಗಿದೆ. ದಲಿತರ ಹಕ್ಕುಗಳ ರಕ್ಷಣೆಗಾಗಿ ಸಮಿತಿ ನಡೆಸುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಹೇಳಿದರು.  ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ದೇಶದ ದಲಿತ ಸಮುದಾಯ ಎದುರಿಸುತ್ತಿರುವ ಭೂಮಿ, ಶಿಕ್ಷಣ, ಉದ್ಯೋಗ, ವಸತಿ ಮತ್ತು ಸಾಮಾಜಿಕ ನ್ಯಾಯದ ಪ್ರಮುಖ ಪ್ರಶ್ನೆಗಳನ್ನು ಸಂಸತ್ತಿನಲ್ಲಿ ಸಮಗ್ರವಾಗಿ ಚರ್ಚಿಸಿ, ಅವುಗಳ ಪರಿಹಾರಕ್ಕೆ ಅಗತ್ಯವಾದ ಕಾನೂನುಗಳನ್ನು ರೂಪಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದರ ಜೊತೆಗೆ ಖಾಸಗಿ ವಲಯದಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ದಲಿತ ಹಕ್ಕುಗಳ ಸಮಿತಿ (ಡಿಎಚ್‌ಎಸ್) ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ದೇಶಾದ್ಯಂತ ಹಮ್ಮಿಕೊಂಡಿರುವ ದಲಿತ ಶೋಷಣೆಯ ವಿರುದ್ಧದ ಸಹಿ ಸಂಗ್ರಹ ಅಭಿಯಾನ ಹಾಗೂ ಮುಂಬರುವ ಸಂಸತ್ ಚಲೋ ಹೋರಾಟದ ಅಂಗವಾಗಿ ಹಾಸನ ನಗರದ ಮಹಾವೀರ ವೃತ್ತದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನವನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ಇಂದು ಕಾರ್ಮಿಕರು, ರೈತರು, ವಿದ್ಯಾರ್ಥಿ ಯುವಜನರು ಹಾಗೂ ದಲಿತ ಸಮುದಾಯಗಳು ತಮ್ಮ ಹಕ್ಕುಗಳಿಗಾಗಿ ಏಕಕಾಲದಲ್ಲಿ ಹೋರಾಟಗಳನ್ನು ನಡೆಸುತ್ತಿವೆ. ಸಮಾಜದ ವಿವಿಧ ಶೋಷಿತ ವರ್ಗಗಳಲ್ಲಿ ಅಸಮಾಧಾನ ಮತ್ತು ಅತೃಪ್ತಿಯ ಅಲೆಗಳು ಹೆಚ್ಚಾಗುತ್ತಿದ್ದು, ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ದೊರಕದಿರುವುದೇ ಈ ಹೋರಾಟಗಳಿಗೆ ಪ್ರಮುಖ ಕಾರಣವಾಗಿದೆ. ದಲಿತ ಸಮುದಾಯದ ಸಮಸ್ಯೆಗಳು ಕೇವಲ ಮೀಸಲಾತಿಯ ಪ್ರಶ್ನೆಗೆ ಸೀಮಿತವಾಗಿಲ್ಲ. ಅವರಿಗೆ ಭೂಮಿ, ಗುಣಮಟ್ಟದ ಶಿಕ್ಷಣ, ಉದ್ಯೋಗ, ವಸತಿ ಮತ್ತು ಘನತೆಯ ಬದುಕು ದೊರಕಿಸುವುದು ಅತ್ಯಂತ ಮುಖ್ಯವಾಗಿದೆ. ಈ ಮೂಲಭೂತ ಪ್ರಶ್ನೆಗಳನ್ನು ದೇಶದ ಸಂಸತ್ತಿನಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕೆಂಬ ಉದ್ದೇಶದಿಂದ ರಾಷ್ಟ್ರಮಟ್ಟದಲ್ಲಿ ದಲಿತ ಶೋಷಣಾ ಮುಕ್ತಿ ಮಂಚ್ ಕೋಟ್ಯಂತರ ಸಹಿಗಳನ್ನು ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಸಹಿಗಳ ಮೂಲಕ ದೇಶದ ಜನರಲ್ಲಿ ದಲಿತರ ಹಕ್ಕುಗಳ ಕುರಿತು ಜಾಗೃತಿ ಮೂಡಿಸಿ, ಬಲಿಷ್ಠ ಹೋರಾಟವನ್ನು ರೂಪಿಸುವ ಉದ್ದೇಶ ಹೊಂದಿದೆ ಎಂದರು.

ಕರ್ನಾಟಕದಲ್ಲಿ ದಲಿತ ಶೋಷಣಾ ಮುಕ್ತಿ ಮಂಚ್‌ನ ಸಂಯೋಜಿತ ಸಂಘಟನೆಯಾದ ದಲಿತ ಹಕ್ಕುಗಳ ಸಮಿತಿ ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ನಡೆಸುತ್ತಿದೆ. ಹಾಸನದಲ್ಲಿಯೂ ಮಹಾವೀರ ವೃತ್ತದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಜನರನ್ನು ತಲುಪಿ ಹೆಚ್ಚಿನ ಸಂಖ್ಯೆಯಲ್ಲಿ ಸಹಿಗಳನ್ನು ಸಂಗ್ರಹಿಸಿ ದೆಹಲಿಗೆ ಕಳುಹಿಸುವ ಯೋಜನೆ ರೂಪಿಸಲಾಗಿದೆ. ದಲಿತರಿಗೆ ಭೂಮಿ ಮತ್ತು ಉದ್ಯೋಗದ ಹಕ್ಕು ದೊರೆಯಲಿ ದೇಶದಲ್ಲಿ ಮೀಸಲಾತಿಯ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದರೂ ದಲಿತ ಸಮುದಾಯದ ಬದುಕಿಗೆ ಸಂಬಂಧಿಸಿದ ಭೂಮಿ, ಉದ್ಯೋಗ ಮತ್ತು ಶಿಕ್ಷಣದಂತಹ ಜ್ವಲಂತ ಸಮಸ್ಯೆಗಳು ಸಾಕಷ್ಟು ಚರ್ಚೆಯಾಗುತ್ತಿಲ್ಲ. ಒಂದೆಡೆ ಕೃಷಿ ಭೂಮಿ ಮತ್ತು ದೇಶದ ಸಂಪನ್ಮೂಲಗಳನ್ನು ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗೆ ಅನುಗುಣವಾಗಿ ಖಾಸಗೀಕರಣ ಮಾಡಲಾಗುತ್ತಿದೆ. ಮತ್ತೊಂದೆಡೆ ದಲಿತ ಸಮುದಾಯಕ್ಕೆ ಬದುಕು ಕಟ್ಟಿಕೊಳ್ಳಲು ಅಗತ್ಯವಾದ ಕನಿಷ್ಠ ಪ್ರಮಾಣದ ಭೂಮಿಯೂ ದೊರೆಯುತ್ತಿಲ್ಲ. ಈಗಾಗಲೇ ಭೂಮಿ ಹೊಂದಿರುವವರ ಭೂಮಿಯನ್ನೂ ಕಸಿದುಕೊಳ್ಳುವಂತಹ ನೀತಿಗಳು ಮತ್ತು ಕಾನೂನುಗಳು ಜಾರಿಯಾಗುತ್ತಿವೆ ಎಂಬ ಆತಂಕವಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಹೇಳಿದರು.

ದಲಿತ ಕುಟುಂಬಗಳಿಗೆ ಕೃಷಿ ಭೂಮಿ ದೊರೆಯಬೇಕು. ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳು ಹೆಚ್ಚಾಗಬೇಕು. ವಸತಿ ಸೌಲಭ್ಯ ಖಚಿತಪಡಿಸಬೇಕು. ಈ ಬೇಡಿಕೆಗಳಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಸೂಕ್ತ ಕಾನೂನುಗಳನ್ನು ರೂಪಿಸಬೇಕು. ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಪ್ರಶ್ನೆಗಳನ್ನು ಗಂಭೀರವಾಗಿ ಚರ್ಚಿಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳವಾಗಲಿ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾದ ನಂತರ ಪರಿಶಿಷ್ಟ ಜಾತಿಗಳ ವಿವಿಧ ಸಮುದಾಯಗಳ ನಡುವೆ ಮೀಸಲಾತಿ ಹಂಚಿಕೆಯ ಕುರಿತು ಸಾಕಷ್ಟು ಚರ್ಚೆಗಳು ಮತ್ತು ಅಸಮಾನತೆಗಳ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ. ಒಳಮೀಸಲಾತಿಯ ಅಗತ್ಯವನ್ನು ನಿರಾಕರಿಸುವಂತಿಲ್ಲ. ಆದರೆ ಒಳಮೀಸಲಾತಿಯಷ್ಟೇ ಮುಖ್ಯವಾಗಿ ಒಟ್ಟಾರೆ ಮೀಸಲಾತಿಯ ಪ್ರಮಾಣವನ್ನು ವಿಸ್ತರಿಸುವ ಪ್ರಶ್ನೆಯೂ ಇದೆ ಎಂದು ಧರ್ಮೇಶ್ ಹೇಳಿದರು.

ದೇಶದಲ್ಲಿ ದಲಿತ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದರೂ ಮೀಸಲಾತಿಯ ಪ್ರಮಾಣವನ್ನು ಅದಕ್ಕೆ ಅನುಗುಣವಾಗಿ ಹೆಚ್ಚಿಸಲು ಸರ್ಕಾರಗಳು ಮುಂದಾಗುತ್ತಿಲ್ಲ. ಹಿಂದಿನ ಕಾಲದಲ್ಲಿ ನಿಗದಿಪಡಿಸಿದ ಮೀಸಲಾತಿ ಪ್ರಮಾಣವನ್ನೇ ಇಂದಿಗೂ ಮುಂದುವರಿಸುವುದರಿಂದ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಂವಿಧಾನಾತ್ಮಕವಾಗಿ ಅಗತ್ಯ ತಿದ್ದುಪಡಿಗಳನ್ನು ತಂದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಮಹಿಳೆಯರು ಹಾಗೂ ಅಂಗವಿಕಲರಿಗೆ ಸಾಮಾಜಿಕ ನ್ಯಾಯ ದೊರಕುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಸಂಸತ್ತು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೀಸಲಾತಿ ವಿರೋಧಿ ಅಪಪ್ರಚಾರ ನಿಲ್ಲಲಿ ಮೀಸಲಾತಿಯ ಬಗ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸೈದ್ಧಾಂತಿಕ ನಿಲುವುಗಳು ಮೂಲಭೂತವಾಗಿ ಮೀಸಲಾತಿ ವಿರೋಧಿಯಾಗಿವೆ ಎಂದು ಟೀಕಿಸಿದ ಧರ್ಮೇಶ್, ಮೀಸಲಾತಿ ಕೇವಲ ದಲಿತರಿಗೆ ನೀಡುವ ಸೌಲಭ್ಯ ಎಂಬ ತಪ್ಪು ಕಲ್ಪನೆಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ. ಮೀಸಲಾತಿ ಎನ್ನುವುದು ದಾನ ಅಥವಾ ಕರುಣೆಯಿಂದ ನೀಡುವ ಸೌಲಭ್ಯವಲ್ಲ. ಶತಮಾನಗಳಿಂದ ಸಾಮಾಜಿಕವಾಗಿ ಅವಕಾಶಗಳಿಂದ ವಂಚಿತರಾದ ಸಮುದಾಯಗಳಿಗೆ ಸಮಾನ ಅವಕಾಶ ಮತ್ತು ಪ್ರಾತಿನಿಧ್ಯ ಕಲ್ಪಿಸುವ ಸಾಮಾಜಿಕ ನ್ಯಾಯದ ಸಾಧನವಾಗಿದೆ. ಹೀಗಾಗಿ ಮೀಸಲಾತಿಯ ಕುರಿತು ನಡೆಯುತ್ತಿರುವ ಅಪಪ್ರಚಾರವನ್ನು ತಡೆದು, ಅದರ ಸಂವಿಧಾನಾತ್ಮಕ ಆಶಯವನ್ನು ಜನರಿಗೆ ತಿಳಿಸಬೇಕಾಗಿದೆ. ಖಾಸಗಿ ವಲಯದಲ್ಲೂ ಮೀಸಲಾತಿ ಜಾರಿಯಾಗಲಿ ಇಂದು ದೇಶದ ಸಾರ್ವಜನಿಕ ಸಂಪನ್ಮೂಲಗಳು, ಉದ್ಯಮಗಳು, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕೆಗಳು ವ್ಯಾಪಕವಾಗಿ ಖಾಸಗೀಕರಣಗೊಳ್ಳುತ್ತಿವೆ. ಆದರೆ ಖಾಸಗಿ ವಲಯದಲ್ಲಿ ಮೀಸಲಾತಿ ಇಲ್ಲದಿರುವುದರಿಂದ ದಲಿತರು ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಸಮಾನ ಅವಕಾಶಗಳು ದೊರೆಯುತ್ತಿಲ್ಲ ಎಂದು ಅವರು ಹೇಳಿದರು.

ಸರ್ಕಾರಿ ವಲಯದಲ್ಲಿ ಮೀಸಲಾತಿ ಜಾರಿಯಲ್ಲಿದ್ದರೂ ಸರ್ಕಾರಿ ಸಂಸ್ಥೆಗಳು ಮತ್ತು ಉದ್ಯಮಗಳ ಖಾಸಗೀಕರಣದಿಂದ ಅದರ ಪ್ರಯೋಜನ ಸೀಮಿತವಾಗುತ್ತಿದೆ. ಖಾಸಗಿ ಕಾರ್ಖಾನೆಗಳು, ಬ್ಯಾಂಕುಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಇತರ ಉದ್ಯಮಗಳಲ್ಲಿ ದಲಿತರಿಗೆ ಸಮರ್ಪಕ ಅವಕಾಶಗಳು ದೊರೆಯುತ್ತಿಲ್ಲ. ಗುತ್ತಿಗೆ ಆಧಾರಿತ ಭದ್ರತಾ ಸಿಬ್ಬಂದಿ, ಹೌಸ್‌ಕೀಪಿಂಗ್ ಮತ್ತು ಪೌರಕಾರ್ಮಿಕರಂತಹ ಅಸುರಕ್ಷಿತ ಹಾಗೂ ಕಡಿಮೆ ವೇತನದ ಉದ್ಯೋಗಗಳಿಗೆ ಅವರನ್ನು ಸೀಮಿತಗೊಳಿಸಲಾಗುತ್ತಿದೆ. ಒಂದೆಡೆ ಮೀಸಲಾತಿ ನೀಡುವುದಾಗಿ ಹೇಳಿ ಮತ್ತೊಂದೆಡೆ ಉದ್ಯೋಗ ಮತ್ತು ಶಿಕ್ಷಣದ ಅವಕಾಶಗಳನ್ನು ಖಾಸಗೀಕರಣಗೊಳಿಸಿದರೆ ಮೀಸಲಾತಿಯ ಉದ್ದೇಶವೇ ಈಡೇರುವುದಿಲ್ಲ. ಆದ್ದರಿಂದ ಖಾಸಗಿ ವಲಯದಲ್ಲಿಯೂ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಕಾನೂನನ್ನು ಕೇಂದ್ರ ಸರ್ಕಾರ ರೂಪಿಸಬೇಕು. ಇದರಿಂದಲೇ ದಲಿತರು, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರಿಗೆ ನಿಜವಾದ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯ ಎಂದು ಒತ್ತಾಯಿಸಿದರು. ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಪ್ರಜಾಪ್ರಭುತ್ವವೂ ಅಗತ್ಯ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ಉಲ್ಲೇಖಿಸಿದ ಧರ್ಮೇಶ್, ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಸಾಮಾಜಿಕ ಪ್ರಜಾಪ್ರಭುತ್ವ ಜಾರಿಯಾಗಬೇಕು ಎಂಬ ಅಂಬೇಡ್ಕರ್ ಅವರ ವಿಚಾರ ಅತ್ಯಂತ ಪ್ರಸ್ತುತವಾಗಿದೆ ಎಂದು ಹೇಳಿದರು.

ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಸಮಾಜದ ಪ್ರತಿಯೊಂದು ವರ್ಗದ ಜನರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿ, ಕೈಗಾರಿಕೆ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಸಮಾನ ಅವಕಾಶಗಳು ದೊರೆಯುವುದು. ಯಾವುದೇ ಸಮುದಾಯವನ್ನು ಹೊರಗಿಡದೆ ಎಲ್ಲರನ್ನೂ ಒಳಗೊಳ್ಳುವ ವ್ಯವಸ್ಥೆಯೇ ನಿಜವಾದ ಸಾಮಾಜಿಕ ಪ್ರಜಾಪ್ರಭುತ್ವವಾಗಿದೆ.ಸಂವಿಧಾನ ಘನತೆಯಿಂದ ಬದುಕುವ ಹಕ್ಕನ್ನು ಖಾತರಿಪಡಿಸಿದೆ. ಆದರೆ ಭೂಮಿ, ಶಿಕ್ಷಣ, ಉದ್ಯೋಗ ಮತ್ತು ವಸತಿ ಇಲ್ಲದೆ, ನಿರಂತರ ಶೋಷಣೆ ಮತ್ತು ಅಭಾವದ ನಡುವೆ ಬದುಕುವ ಪರಿಸ್ಥಿತಿಯನ್ನು ಘನತೆಯ ಬದುಕು ಎಂದು ಕರೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಸಾಮಾಜಿಕ ಗೌರವದೊಂದಿಗೆ ಬದುಕುವ ಅವಕಾಶ ದೊರೆಯಬೇಕು. ಇದೇ ದಲಿತ ಹಕ್ಕುಗಳ ಸಮಿತಿ ಮತ್ತು ದಲಿತ ಶೋಷಣಾ ಮುಕ್ತಿ ಮಂಚ್‌ನ ಹೋರಾಟದ ಮೂಲ ಆಶಯವಾಗಿದೆ. ಡಿಎಚ್ಎಸ್ ಜಿಲ್ಲಾ ಸಂಚಾಲಕ ಮಾತನಾಡಿ ರಾಷ್ಟ್ರವ್ಯಾಪಿ ಸಂಸತ್ ಚಲೋ ಹೋರಾಟಕ್ಕೆ ಸಿದ್ಧತೆ ಡಿಸೆಂಬರ್ 1ರಿಂದ ಲಕ್ಷಾಂತರ ಕಾರ್ಮಿಕರು, ಸುಮಾರು ಮೂರು ಲಕ್ಷಕ್ಕೂ ಅಧಿಕ ಕಾರ್ಮಿಕರು ದೆಹಲಿಗೆ ತೆರಳಿ ಸಂಸತ್ ಭವನದ ಸುತ್ತಮುತ್ತ ತಮ್ಮ ಬೇಡಿಕೆಗಳಿಗಾಗಿ ತೀವ್ರ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಈ ಹೋರಾಟಗಳ ನಡುವೆ ದಲಿತ ಸಮುದಾಯದ ಮೂಲಭೂತ ಸಮಸ್ಯೆಗಳನ್ನೂ ರಾಷ್ಟ್ರಮಟ್ಟದ ಚರ್ಚೆಯ ಕೇಂದ್ರಕ್ಕೆ ತರಬೇಕಾಗಿದೆ. ಈ ಉದ್ದೇಶದಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನವನ್ನು ಕೇವಲ ಒಂದು ಸಂಘಟನೆಯ ಕಾರ್ಯಕ್ರಮವಾಗಿ ನೋಡದೆ, ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರುವ ಪ್ರತಿಯೊಬ್ಬರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಹಾಸನದ ಮಹಾವೀರ ವೃತ್ತದಲ್ಲಿ ಸಾಂಕೇತಿಕವಾಗಿ ಆರಂಭಗೊಂಡಿರುವ ಈ ಅಭಿಯಾನವನ್ನು ಜಿಲ್ಲೆಯ ಪ್ರತಿಯೊಂದು ಗ್ರಾಮ, ತಾಲೂಕು ಮತ್ತು ನಗರ ಪ್ರದೇಶಗಳಿಗೆ ವಿಸ್ತರಿಸಲಾಗುವುದು. ದಲಿತ ಸಮುದಾಯದ ಜನರ ಜೊತೆಗೆ ದಲಿತೇತರ ಸಮುದಾಯದ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಿ ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಲಕ್ಷಾಂತರ ಮೌಲ್ಯದ ಆಭರಣ, ನಗದು ಕಳ್ಳತನ

ಮಾನವ ಬಂಧುತ್ವ ವೇದಿಕೆಯ ಹಾಸನ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್ ಅವರು ಸಹಿ ಸಂಗ್ರಹ ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದರು. ಡಿ.ಎಚ್.ಎಸ್. ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ ಸಹಿ ಸಂಗ್ರಹ ಅಭಿಯಾನ ನಡೆಸಿಕೊಟ್ಟರು ಕೆ.ಪಿ.ಆರ್.ಎಸ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಸಾಹಿತಿ ಹರೀಶ್ ಕಟ್ಟೇಬೆಳಗುಲಿ, ನಿವೃತ್ತ ಉಪನ್ಯಾಸಕಿ ಪ್ರಮೀಳಾ, ಎಸ್.ಎಫ್.ಐ. ಮುಖಂಡರಾದ ರಮೇಶ್, ಮೇಘ, ಪೌರ ಕಾರ್ಮಿಕ ಮುಖಂಡ ಪ್ರಕಾಶ್, ಡಿ.ಎಚ್.ಎಸ್. ಮುಖಂಡರಾದ ಬಿ.ಎಸ್. ಲಿಂಗರಾಜು, ಅಶೋಕ್ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಿ ದಾಳಿಗೆ ಆದಿವಾಸಿ ಮಹಿಳೆ ಬಲಿ: ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಜಮೀನಿನ ಪಕ್ಕದಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದ ಆದಿವಾಸಿ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ...

ಪತ್ರಕರ್ತರ ಕ್ರಿಕೆಟ್: ಕೊಡಗು ಅರೇಬಿಕಾ-ಮಂಡ್ಯ ಜಂಟಿ ಚಾಂಪಿಯನ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ...

ರಾಯಚೂರು | ಗ್ರಾಮೀಣ ಕಲೆಗೆ ಜೀವ ತುಂಬುವ ಕೆಲಸ ಎಲ್ಲರೂ ಮಾಡಬೇಕು: ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ

ನಶಿಸಿ ಹೋಗುತ್ತಿರುವ ಗ್ರಾಮೀಣ ಕಲೆಗಳಿಗೆ ಪುನಶ್ಚೇತನ ನೀಡುವ ಮೂಲಕ ಅವುಗಳಿಗೆ ಜೀವ...

ರಾಯಚೂರು | ಜಿಲ್ಲೆಯಲ್ಲಿ ಜೆಸ್ಕಾಂ ದಾಳಿ: ಅಕ್ರಮ ವಿದ್ಯುತ್ ಬಳಕೆಯ 162 ಪ್ರಕರಣ ಪತ್ತೆ, ₹14.98 ಲಕ್ಷ ದಂಡ

ರಾಯಚೂರು ಜಿಲ್ಲಾದ್ಯಂತ ಅಕ್ಟೋಬ‌ರ್ 2026ರಲ್ಲಿ ಜೆಸ್ಕಾಂ ಅಧಿಕಾರಿಗಳು ಹಾಗೂ ಜಾಗೃತ ದಳದವರು...