ಹಾಸನ | ಕರಡು ಮತದಾರರ ಪಟ್ಟಿ ಪ್ರಕಟ: 1.67 ಲಕ್ಷ ಜನರ ಹೆಸರು ಹೊರಗೆ!

Date:

ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 13,75,517 ಮತದಾರರು ಪಟ್ಟಿಯಲ್ಲಿ ಉಳಿದಿದ್ದು, ವಿವಿಧ ಕಾರಣಗಳಿಂದ 1,67,285 ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತಾತ್ಕಾಲಿಕವಾಗಿ ಹೊರಗಿಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.

- Advertisement -

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಎಸ್‌ಐಆರ್ ಪ್ರಕ್ರಿಯೆಗೂ ಮುನ್ನ ಜಿಲ್ಲೆಯಲ್ಲಿ 15,42,802 ಮತದಾರರು ಇದ್ದರು. ಪರಿಶೀಲನೆಯ ಬಳಿಕ 13,75,517 ಮತದಾರರ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, ಇದು ಒಟ್ಟು ಮತದಾರರ ಶೇ.89.16ರಷ್ಟಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

52 ಸಾವಿರಕ್ಕೂ ಹೆಚ್ಚು ಮತದಾರರು ಮೃತರು
ಕರಡು ಪಟ್ಟಿಯಿಂದ ಹೊರಗಿಡಲಾದ 1,67,285 ಮತದಾರರ ಪೈಕಿ 52,022 ಮಂದಿ ಮೃತಪಟ್ಟಿದ್ದು, 73,964 ಮಂದಿ ಶಾಶ್ವತವಾಗಿ ವಲಸೆ ಹೋಗಿರುವುದು ಪರಿಶೀಲನೆಯಲ್ಲಿ ಪತ್ತೆಯಾಗಿದೆ. ಅಲ್ಲದೆ, 13,616 ಪುನರಾವರ್ತಿತ ಹೆಸರುಗಳು, 24,632 ಗೈರು ಮತದಾರರು ಹಾಗೂ 3,051 ಮಂದಿಯನ್ನು ಇತರೆ ಕಾರಣಗಳಿಂದ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಹಾಸನ ಕ್ಷೇತ್ರದಲ್ಲಿ ಅತಿ ಹೆಚ್ಚು 47,032 ಮತದಾರರ ಹೆಸರುಗಳನ್ನು ಹೊರಗಿಡಲಾಗಿದೆ. ಶ್ರವಣಬೆಳಗೊಳದಲ್ಲಿ 22,375, ಅರಸೀಕೆರೆಯಲ್ಲಿ 16,297, ಬೇಲೂರಿನಲ್ಲಿ 19,092, ಹೊಳೆನರಸೀಪುರದಲ್ಲಿ 21,559, ಅರಕಲಗೂಡಿನಲ್ಲಿ 22,864 ಹಾಗೂ ಸಕಲೇಶಪುರದಲ್ಲಿ 18,066 ಮತದಾರರ ಹೆಸರುಗಳನ್ನು ವಿವಿಧ ಕಾರಣಗಳಿಂದ ಕರಡು ಪಟ್ಟಿಯಿಂದ ಕೈಬಿಡಲಾಗಿದೆ.

ಕ್ಷೇತ್ರವಾರು ವಿವರ
ಶ್ರವಣಬೆಳಗೊಳ ಕ್ಷೇತ್ರದಲ್ಲಿ ಎಸ್‌ಐಆರ್‌ಗೂ ಮೊದಲು 2,14,454 ಮತದಾರರಿದ್ದು, 22,375 ಹೆಸರುಗಳನ್ನು ಹೊರಗಿಡಲಾಗಿದೆ. ಅರಸೀಕೆರೆಯ 2,21,014 ಮತದಾರರ ಪೈಕಿ 16,297 ಹಾಗೂ ಬೇಲೂರಿನ 2,04,786 ಮತದಾರರ ಪೈಕಿ 19,092 ಹೆಸರುಗಳನ್ನು ಕೈಬಿಡಲಾಗಿದೆ.

ಹಾಸನ ಕ್ಷೇತ್ರದ 2,35,943 ಮತದಾರರ ಪೈಕಿ 47,032, ಹೊಳೆನರಸೀಪುರದ 2,24,676 ಮತದಾರರ ಪೈಕಿ 21,559, ಅರಕಲಗೂಡಿನ 2,36,667 ಮತದಾರರ ಪೈಕಿ 22,864 ಹಾಗೂ ಸಕಲೇಶಪುರದ 2,05,262 ಮತದಾರರ ಪೈಕಿ 18,066 ಹೆಸರುಗಳನ್ನು ಕರಡು ಪಟ್ಟಿಯಿಂದ ಹೊರಗಿಡಲಾಗಿದೆ.

ಮಹಿಳಾ ಮತದಾರರೇ ಹೆಚ್ಚು
ಪರಿಷ್ಕರಣೆಯ ಬಳಿಕ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. ಜಿಲ್ಲೆಯಲ್ಲಿ 6,80,925 ಪುರುಷ ಹಾಗೂ 6,94,559 ಮಹಿಳಾ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

79,778 ಮತದಾರರಿಗೆ ನೋಟಿಸ್
ಜಿಲ್ಲೆಯಲ್ಲಿ 23,641 ಮತದಾರರ ‘ನೋ ಮ್ಯಾಪಿಂಗ್’ ಹಾಗೂ 56,137 ಮತದಾರರ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಒಟ್ಟು 79,778 ಮತದಾರರಿಗೆ ಜಿಲ್ಲಾಡಳಿತದಿಂದ ನೋಟಿಸ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ನೋಟಿಸ್ ಪಡೆದ ಮತದಾರರು ಚುನಾವಣಾ ಆಯೋಗ ಸೂಚಿಸಿರುವ ಗುರುತಿನ ಚೀಟಿ, ಜನನ ಪ್ರಮಾಣಪತ್ರ, ಪಾಸ್‌ಪೋರ್ಟ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಮತದಾನದ ಹಕ್ಕನ್ನು ಸಮರ್ಥಿಸಿಕೊಳ್ಳಬಹುದು.

ಸೆಪ್ಟೆಂಬರ್ 23ರವರೆಗೆ ಅವಕಾಶ
ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ. ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಹೊರಗಿಡಲಾಗಿದ್ದರೆ ಅಥವಾ ಪಟ್ಟಿಯಲ್ಲಿನ ಮಾಹಿತಿಗೆ ಆಕ್ಷೇಪಣೆ ಇದ್ದರೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...