ಹಾಸನ | ಹಾಸನಾಂಬ ದೇವಸ್ಥಾನದಲ್ಲಿ ಭಕ್ತರಿಗೆ ವಿದ್ಯುತ್ ಶಾಕ್; ನೂಕುನುಗ್ಗಲು

Date:

ಹಾಸನದಲ್ಲಿರುವ ಹಾಸನಾಂಬ ದೇವಸ್ಥಾನದಲ್ಲಿ ಧರ್ಮ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಭಕ್ತರು ಆತಂಕಗೊಂಡ ಬಳಿಕ ನೂಕು ನುಗ್ಗಲು ನಡೆದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

- Advertisement -

ವಿದ್ಯುತ್ ಶಾಕ್ ಹೊಡೆದ ಪರಿಣಾಮ ಭಕ್ತರು ಭಯದಿಂದ ಓಡಿದ್ದು, ನೂಕುನುಗ್ಗಲಿನಲ್ಲಿ ಹಲವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಘಟನಾ ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

“ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಶಾಕ್‌ ಹೊಡೆದಿದೆ ಎಂಬುದು ಗಮನಕ್ಕೆ ಬಂದಿದೆ. ನೂಕುನುಗ್ಗಲಿನಲ್ಲಿ ಕೆಲವರು ಅಸ್ವಸ್ಥರಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ” ಎಂದು ಎಸ್‌ಪಿ ತಿಳಿಸಿದ್ದಾರೆ.

ವಿದ್ಯುತ್ ಶಾಕ್ ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಹಾಸನ ಜಿಲ್ಲಾ ಪ್ರವಾಸದಲ್ಲಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನಿಗದಿಪಡಿಸಿದ್ದ ಕಾರ್ಯಕ್ರಮವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್​ ಹೊಡೆದಿದ್ದು ಸ್ಪಷ್ಟವಾಗಿದೆ. ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದು, ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...