ಹಾಸನ | ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ; ಶುಭಂ ಶುಕ್ಲ 

Date:

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಸ್ವಚ್ಛ ಮತ್ತು ಹಸಿರು ಪರಿಸರವನ್ನು ಉಳಿಸಿ ಕೊಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗಿಡಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲ ಹೇಳಿದರು.

- Advertisement -

ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಶಾಂತಿಗ್ರಾಮ ಹಾಗೂ ಶಾಂತಿಗ್ರಾಮ ಗ್ರಾಪಂ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಲಾಗಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ, ಅರಣ್ಯ ನಾಶ ಹಾಗೂ ಹವಾಮಾನ ವೈಪರೀತ್ಯಗಳು ಸಮಾಜಕ್ಕೆ ಗಂಭೀರ ಸವಾಲಾಗಿ ಪರಿಣಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ಗಿಡಮರಗಳ ನೆಡುವಿಕೆ ಮತ್ತು ಅವುಗಳ ಪಾಲನೆಗೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನೂ ಓದಿದ್ದೀರಾ?ಹಾಸನ | ಹೇಮಾವತಿ ನದಿ: ಮಳೆಯಿಲ್ಲದೆ ಬರ! ಕೇವಲ 14 ಟಿಎಂಸಿ ನೀರು?

ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 500 ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು. ಶಾಂತಿಗ್ರಾಮ ಗ್ರಾಪಂ ಪಿಡಿಒ ಅಭಿಲಾಶ್ ಮಾತನಾಡಿ, ನೆಡಲಾದ ಪ್ರತಿಯೊಂದು ಗಿಡದ ಪಾಲನೆ ಮತ್ತು ಪೋಷಣೆಗೆ ಎಲ್ಲರೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಮನವಿ ಮಾಡಿದರು. ಈ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ಆರ್.ತನುಜಾ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್, ಶಿಕ್ಷಕ ವೃಂದ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್...

ಹೆರಿಗೆಯ ನಂತರ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ! ಬಾಲಕನ ವಿರುದ್ಧ ಪೋಕ್ಸೋ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಕೇರಳ ಮೂಲದ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯೊಂದಿಗೆ...

ಶೌಚಕ್ಕೆ ಬಾವಿ ನೀರು ಹೊರುವ ವಿದ್ಯಾರ್ಥಿಗಳು: ತಾತ್ಕಾಲಿಕವಷ್ಟೇ ಎಂದು ನುಣುಚಿದ ಆಡಳಿತ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಿಂದ ಸುಮಾರು 8 ಕಿ.ಮೀ ದೂರದಲ್ಲಿರುವ...

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...