ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

Date:

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ ಆಗುತ್ತದೆ. ಸಂಘಗಳಲ್ಲಿ ರಾಜಕೀಯ ಬೆರೆಸುವ ಬದಲು ರಾಜಕೀಯ ಮುಕ್ತವಾಗಿ ಸಹಕಾರ ಸಂಘಗಳ ಏಳಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಎಚ್‌ಡಿಸಿಸಿ ಬ್ಯಾಂಕ್ ನ ಹಾಸನ ಜಿಲ್ಲಾ ನಿರ್ದೇಶಕ ಜಗದೀಶ್ ಕಬ್ಬಿನಹಳ್ಳಿ ಅಭಿಪ್ರಾಯಪಟ್ಟರು. ತಾಲೂಕಿನ ಬೈರಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರ ಸಂಘಗಳು ಮುಕ್ತವಾಗಿ ಕೆಲಸ ಮಾಡಬೇಕು. ಸಹಕಾರ ಸಂಘಗಳ ಉಳಿವಿನಲ್ಲಿ ರೈತರ ಹಿತ ಮತ್ತು ಬಲವರ್ಧನೆಯು ಅಡಗಿದೆ. ಹಾಗಾಗಿ, ಪಕ್ಷಾತೀತವಾಗಿ ಸಹಕಾರ ಕ್ಷೇತ್ರವನ್ನು ಮುನ್ನಡೆಸಲು ಎಲ್ಲಾ ರಾಜಕಾರಣಿ ಪಕ್ಷಬೇಧ ಮರೆತು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

- Advertisement -

ಬೈರಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾದ ರಸಗೊಬ್ಬರ, ಬಿತ್ತನೆ ಬೀಜ, ಬೇಸಾಯ ಚಟುವಟಿಕೆಗಳಿಗೆ ಬೇಕಾದ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುತ್ತಿರುವ ಸಹಕಾರ ಸಂಘಗಳು ಉಳಿದು ಬೆಳೆಯಬೇಕಾದರೆ ಸೇವಾ ಭಾವನೆಯುಳ್ಳ ಆಡಳಿತ ಮಂಡಳಿ ಮತ್ತು ನೌಕರರ ಪ್ರಾಮಾಣಿಕ ದುಡಿಮೆಯಿಂದ ಮಾತ್ರ ಸ್ವ ಎಂದರು. ಈ ವರ್ಷ ಬರಗಾಲ ಆವರಿಸಿದ್ದು, ರೈತರು ಬಿ ಮಾಡಿದ ಬೆಳೆ ಸಂಪೂರ್ಣ ನಾಶವಾಗಿ ರೈತ ನಷ್ಟ ಆಗಿದೆ ಉದ್ದೇಶದಿಂದ ಸಹಕಾರಿ ಸಂಘಗಳಿಗೆ ಶೇರುದಾರರಿಗೆ ಹಾಗೂ ರೈತರಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು |ರಾಜ್ಯದಲ್ಲಿ ಪ್ರಸ್ತುತ 9,೦೦೦ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ

ಈ ಕಾರ್ಯಕ್ರಮದಲ್ಲಿ  ತಾಲೂಕು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶಿವಣ್ಣ ಸದಸ್ಯರುಗಳಾದ ಸ್ವಾಮಿ ಗೌಡ.ಬೈರಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಶೋಕ್. ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಆಶಾರಾಣಿ. ಎಸ್ ವಿ ಕೃಷ್ಣೇಗೌಡ. ಚಂದ್ರಶೇಖರ್. ಗಿರೀಶ್ ವೆಂಕಟೇಶ್. ಶಾರದಮ್ಮ ಧರ್ಮಪ್ಪ. ಪಾಲಾಕ್ಷ. ರಾಘವೇಂದ್ರ ಮೇಲ್ವಿಚಾರಕರು ಕೇಂದ್ರ ಬ್ಯಾಂಕ್, ಆಲೂರು. ಪಂಚಾಯಿತಿ ಸದಸ್ಯರುಗಳಾದ ರುದ್ರೇಗೌಡ. ಗಣೇಶ್. ನಂಜೇಶ್. ಶಿವೇಗೌಡ.  ಮಧು. ಎಲ್ಲಾ ಶೇರುದಾರರು ಸಾರ್ವಜನಿಕರು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ

SIR (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ರದ್ದುಪಡಿಸುವುದು, ಮತದಾರರ ಪಟ್ಟಿಯಿಂದ ತೆಗೆದುಹಾಕಿರುವ...

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...