ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ಒಟ್ಟಿಗೆ ಬಿಯರ್ ಕುಡಿದು ವಾಪಸ್ ಆಗುವಾಗ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ತ್ಯಾವಿಹಳ್ಳಿ ಗ್ರಾಮದ ಪವನ್ (26), ಗೆಳೆಯ ಮನೋಜ್ ಜೊತೆ ರಾತ್ರಿ ಬಿಯರ್ ಕುಡಿದು ಸ್ಕೂಟಿಯಲ್ಲಿ ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಅಕ್ಟಿವಾದಲ್ಲಿ ಬಂದ ರಾಕೇಶ್ ಹಾಗೂ ಕಿರಣ್ ಪವನ್‌ನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಇದನ್ನೂ ಓದಿದ್ದೀರಾ?ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ
ಹಳೇ ವೈಷಮ್ಯವೇ ಹಲ್ಲೆಗೆ ಕಾರಣ ಎನ್ನಲಾಗಿದ್ದು, ಶಾಂತಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




