ಹಾಸನ | ಅಕ್ರಮ ಭೂ ಮಂಜೂರಾತಿ ಮಾಜಿ ಶಾಸಕ ಬಂಧನ 

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಮಾಜಿ ಶಾಸಕ ಕೆ.ಎಸ್ ಲಿಂಗೇಶ್‌ ಅವರನ್ನು ಬಗರ್‌ಹುಕುಂ ಭೂ ಹಗರಣ ಪ್ರಕರಣದಲ್ಲಿ ಸಿಐಡಿ ಪೊಲೀಸರು ಬಂಧಿಸಿರುವುದು ನ್ಯಾಯದಾನದಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಪ್ರಕರಣ ಶೀಘ್ರ ಅಂತ್ಯ ಕಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದು ದೂರುದಾರ ಕೆ.ಸಿ. ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2018ರಿಂದ 2023ರವರೆಗೆ ಕೆ.ಎಸ್. ಲಿಂಗೇಶ್ ಅವರು ಬೇಲೂರು ತಾಲ್ಲೂಕು ಬಗರ್‌ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದು, ಈ ಅವಧಿಯಲ್ಲಿ ಸುಮಾರು 2,750 ಎಕರೆ ಸರ್ಕಾರಿ ಭೂಮಿಯನ್ನು 1,430 ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ. ಈ ಮಂಜೂರಾತಿಗಳು ನಕಲಿ ದಾಖಲೆಗಳ ಆಧಾರದಲ್ಲಿ ನಡೆದಿವೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.  ಈ ಸಂಬಂಧ 2023ರಲ್ಲಿ ದೂರು ದಾಖಲಾಗಿತ್ತು. ನಂತರ ಹಿಂದಿನ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್‌ ಸಲ್ಲಿಸಿದ್ದ ವರದಿ ಆಧರಿಸಿ ತನಿಖೆ ತೀವ್ರಗೊಂಡಿತು. ಆರಂಭದಲ್ಲಿ ಬೇಲೂರು ಪೊಲೀಸರು ತನಿಖೆ ನಡೆಸಿದ್ದು, ಬಳಿಕ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಯಿತು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಪ್ರಕರಣದಲ್ಲಿ ಮಾಜಿ ಶಾಸಕ ಲಿಂಗೇಶ್‌ ಸೇರಿದಂತೆ ಒಟ್ಟು 30ಕ್ಕೂ ಹೆಚ್ಚು ಮಂದಿ ವಿರುದ್ಧ ದಾಖಲೆ ಸಂಗ್ರಹವಾಗಿದ್ದು, ಈವರೆಗೆ 16 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಇಬ್ಬರು ತಹಶೀಲ್ದಾರರು, ಮಾಜಿ ಶಾಸಕ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಲು ಸೇರಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪೋಕ್ಸೋ; ಶಿಕ್ಷಕನ ಮೇಲೆ ಪ್ರಕರಣ ದಾಖಲು 

ತಮ್ಮ ಗಮನಕ್ಕೆ ಬಾರದೆ ಪ್ರಕರಣ ನಡೆದಿದೆ ಎಂದು ಕೆ.ಎಸ್ ಲಿಂಗೇಶ್ ಹೇಳಿಕೆ ನೀಡಿರುವುದು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ. ಸಮಿತಿಯ ಅಧ್ಯಕ್ಷರಾಗಿದ್ದ ವೇಳೆ ನಡೆದ ಮಂಜೂರಾತಿಗಳಿಗೆ ಅವರೇ ಜವಾಬ್ದಾರರಾಗಬೇಕು ಎಂದು ಆಗ್ರಹಿಸಿದರು. ಪ್ರಕರಣದಲ್ಲಿ ಲಿಂಗೇಶ್ ಅವರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸಿಐಡಿ ಪರ ವಕೀಲರು ತಾತ್ಕಾಲಿಕ ಜಾಮೀನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬಂಧನ ಮಾಡಲಾಗಿದೆ. ಬಿ. ಎ. ಜಗದೀಶ್ ಅವರ ಅವಧಿಯಲ್ಲಿ 10.65 ಎಕರೆ, ಪುಟ್ಟಶೆಟ್ಟಿ ಅವಧಿಯಲ್ಲಿ 893 ಎಕರೆ, ಜೆ. ಉಮೇಶ್ ಅವಧಿಯಲ್ಲಿ ಸುಮಾರು 400 ಎಕರೆ ಹಾಗೂ ಯು.ಎನ್. ಮೋಹನ್ ಕುಮಾರ್ ಅವಧಿಯಲ್ಲಿ 287 ಎಕರೆ ಸೇರಿ ಒಟ್ಟು 2,822.04 ಎಕರೆ ಭೂಮಿ ಅಕ್ರಮವಾಗಿ ಮಂಜೂರಾಗಿದೆ. ಈ ಹಗರಣದ ಮೌಲ್ಯ ₹2,500 ಕೋಟಿಗೂ ಹೆಚ್ಚು ಇರಬಹುದೆಂದು ಅಂದಾಜಿಸಲಾಗಿದೆ. ಸಂಪೂರ್ಣ ತನಿಖೆ ಬಳಿಕ ಸಿಐಡಿ ದೋಷಾರೋಪಣಾ ಪಟ್ಟಿ ಸಲ್ಲಿಸಲಿದೆ. ತ್ವರಿತಗತಿ ನ್ಯಾಯಾಲಯದಲ್ಲಿ ಶೀಘ್ರ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ರಾಜಣ್ಣ ಹೇಳಿದರು‌. ಶ್ರೀಕಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೈಜ ಮತದಾರರ ಹಕ್ಕು ಕಸಿದುಕೊಳ್ಳದಂತೆ ಕ್ರಮಕ್ಕೆ ಅಬ್ದುಲ್ ಹಮೀದ್ ಮುಶ್ರೀಫ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ Claims &...

ಬಾದಾಮಿ | ಸೆ.27ರಂದು ‘ಬಸವ-ಭೀಮ ಸಂಗಮ’ ಕಾರ್ಯಕ್ರಮ

ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಶೋಷಣೆಮುಕ್ತ ಸಮಾಜದ ಆಶಯಗಳನ್ನು ಮುನ್ನೆಲೆಗೆ ತರುವ...

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...