ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಗ್ರಂಥಾಲಯ ಇಲಾಖೆ ಹಾಗೂ ಭಾರತೀಯ ವಿದ್ಯಾರ್ಥಿ ಸಂಘ(BVS)ದ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 7ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಒಂದು ದಿನದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಜಿಕೆ(GK) ಪುಸ್ತಕ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕುರಿತು ಸರ್ಕಾರಿ ಕಾಲ ಕಾಲೇಜು ಸಹಾಯಕ ಪ್ರಾಧ್ಯಾಪಕ ಪ್ರೊ. ಮಹೇಶ್ ಅವರು ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತ ಕಾರ್ಯಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಅಧ್ಯಯನ ವಿಧಾನ, ಸಮಯ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ತಜ್ಞರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ” ಎಂದರು.
ಇದನ್ನೂ ಓದಿದ್ದೀರಾ? ʼಮೀಸಲಾತಿ ಹಠಾವೋʼ ಅಲ್ಲ; ಸಮಾನ ಅವಕಾಶ ಮತ್ತು ಪ್ರಾತಿನಿಧ್ಯಕ್ಕೆ ವಿಭಿನ್ನ ಬೆಂಬಲ
“ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಈ ಉಚಿತ ಕಾರ್ಯಾಗಾರದ ಸದುಪಯೋಗ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಿಕೊಳ್ಳಬೇಕು. ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.




