ಹಾಸನ | ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ತೆರೆ; 6 ಕೋಟಿಗೂ ಅಧಿಕ ಆದಾಯ ಸಂಗ್ರಹ

Date:

Advertisements

ಈ ವ‍ರ್ಷದ ಹಾಸನಾಂಬೆ ಜಾತ್ರಾ ಮಹೋತ್ಸವ ತೆರೆ ಕಂಡಿದೆ. ಬುಧವಾರ ಮಧ್ಯಾಹ್ನ 12.23ಕ್ಕೆ ಹಾಸನ ಜಿಲ್ಲಾಡಳಿತದ ಸಮ್ಮುಖದಲ್ಲಿ ಬಾಗಿಲು ಮುಚ್ಚುವ ಮೂಲಕ ಉತ್ಸವವು ಕೊನೆಗೊಂಡಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ಸಹಕಾರ ಸಚಿವ ಕೆ ಎನ್ ರಾಜಣ್ಣ, ಶಾಸಕ ಹೆಚ್ ​ಪಿ ಸ್ವರೂಪ್‌ ಪ್ರಕಾಶ್, ಜಿಲ್ಲಾಧಿಕಾರಿ ಸತ್ಯಭಾಮ, ಎಸ್‌ಪಿ ಮಹಮದ್ ಸುಜೀತಾ ಅವರ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಬಂದ್ ಮಾಡಿದ್ದಾರೆ.

ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವು ಮಾಡಿ ಪೂಜೆ ಸಲ್ಲಿಸಿ, ಗರ್ಭಗುಡಿಯಿಂದ ಅರ್ಚಕರು, ಅಧಿಕಾರಿಗಳು ಹೊರಬಂದು ಗರ್ಭಗುಡಿ ಬಾಗಿಲಿಗೆ ಪೂಜೆ ಸಲ್ಲಿಸಿ ಬೀಗ ಹಾಕಿದ್ದಾರೆ. ಮುಂದಿನ ವರ್ಷವೇ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಿದೆ.

Advertisements

ಪ್ರಸ್ತುತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಆದರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ದಾಖಲೆ ಬರೆದ ಹಾಸನಾಂಬೆ: ಈ ಬಾರಿ ಹಾಸನಾಂಬೆ ಜಾತ್ರಾ ಮಹೋತ್ಸವದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ 10 ಲಕ್ಷಕ್ಕೂ ಹೆಚ್ಚಿನ ಮಂದಿ ಹಾಸನಾಂಬೆ ದರ್ಶನ ಪಡೆದಿದ್ದು, ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದ್ದರಿಂದ ದೇವಾಲಯಕ್ಕೆ ಈ ವರ್ಷ 6 ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. ಮಂಗಳವಾರ ಮಧ್ಯಾಹ್ನ 5 ಗಂಟೆವರೆಗೆ ನೇರ ದರ್ಶನದ ಟಿಕೆಟ್‌ಗಳ ಮಾರಾಟ ಮತ್ತು ಲಾಡು ಪ್ರಸಾದದ ಮಾರಾಟದಿಂದಲೇ ದಾಖಲೆ ಮಟ್ಟದ ಆದಾಯ ಬಂದಿದೆ.

ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕ ನಿಗದಿ ಮಾಡಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಹಾಸನಾಂಬ ದೇವಾಲಯ; 9 ದಿನದಲ್ಲಿ 5.5 ಕೋಟಿ ರೂ. ಸಂಗ್ರಹ

ಪ್ರಸ್ತುತ ಸಾಲಿನಲ್ಲಿ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ  ಮಾಡಿಕೊಡಲಾಗಿತ್ತು. ಆದರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X