ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಒಟ್ಟು 14 ದಿನಗಳ ಉತ್ಸವದಲ್ಲಿ ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಉಳಿದ 12 ದಿನ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಭರದ ಸಿದ್ಧತೆ ನಡೆಯುತ್ತಿದೆ. ಈ ಸಂಪ್ರದಾಯ ಹಾಗೂ ಧಾರ್ಮಿಕ ವಿಧಿವಿಧಾನಗಳಿಗೆ ಆದ್ಯತೆ ನೀಡಿ ಜಾತ್ರೆ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ
ಸಂಪೂರ್ಣ ವೇಳಾಪಟ್ಟಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಡೆಯುವ ಸುದ್ದಿಗೋಷ್ಠಿಯಲ್ಲಿ ಪ್ರಕಟವಾಗಲಿದೆ ಎಂದು ಜಿಲ್ಲಾಧಿಕಾರಿ ಕೆ. ಎಸ್ ಲತಾ ಕುಮಾರಿ ತಿಳಿಸಿದ್ದಾರೆ.




