ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಪರಿಣಾಮ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಸಮೀಪ ನಡೆದಿದೆ.
ಮೃತರನ್ನು ಪ್ರಿಯಾಂಕ (30) ಮತ್ತು ವೈಭವ್ (1.5), ಬೆಂಗಳೂರಿನ ದೇವನಹಳ್ಳಿ ನಿವಾಸಿಗಳಾಗಿದ್ದಾರೆ. ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವನಹಳ್ಳಿಗೆ ಮರಳುತ್ತಿದ್ದ ವೇಳೆ ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕಾರು ನಾಲೆಗೆ ಪತನಗೊಂಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿದ್ದೀರಾ?ಹಾಸನ | ಮದುವೆಗೆ ವಧು ಸಿಗದೆ ಯುವಕ ಸಾವು
ಅಪಘಾತದಲ್ಲಿ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಸಮೀಪದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





