ಸಕಲೇಶಪುರ ತಾಲೂಕಿನ ಯಸಳೂರು ವಲಯದಲ್ಲಿ ಕಾಡಾನೆಗಳೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ರಾಯಭಾರಿ ಅರ್ಜುನ ಆನೆಯ ಸ್ಮರಣಾರ್ಥವಾಗಿ ನಿರ್ಮಿಸಿರುವ ಸ್ಮಾರಕವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.
ಶಾಸಕ ಸಿಮೆಂಟ್ ಮಂಜು ಮಾತನಾಡಿ, “ಸ್ಮಾರಕ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಪ್ರವಾಸಿಗರ ಅನುಕೂಲಕ್ಕಾಗಿ ಸಮರ್ಪಕ ರಸ್ತೆ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ಕೊಠಡಿ ಹಾಗೂ ಭದ್ರತಾ ಸಿಬ್ಬಂದಿಗೆ ವಸತಿ ವ್ಯವಸ್ಥೆ ಅಗತ್ಯವಿದೆ. ಮಳೆಯ ಸಮಯದಲ್ಲಿ ಇಲ್ಲಿ ಪ್ರವೇಶಿಸುವುದೇ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
ಅರ್ಜುನನಿಗೆ ಇನ್ನೂ ಹೆಚ್ಚಿನ ಗೌರವ ದೊರಕಬೇಕಾಗಿತ್ತು. ಭವಿಷ್ಯದಲ್ಲಿ ಕಂಚಿನ ಪ್ರತಿಮೆ ಸ್ಥಾಪನೆ ಮಾಡುವ ಯೋಜನೆ ಕೈಗೊಳ್ಳಬೇಕು. ಪ್ರವಾಸಿಗರ ಸುರಕ್ಷತೆಗಾಗಿ ಬೆಳಿಗ್ಗೆಯಿಂದ ಸಂಜೆವರೆಗೆ ಭದ್ರತಾ ವ್ಯವಸ್ಥೆ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿದ್ದೀರಾ?ಹಾಸನ | ಮಾನವ–ಕಾಡಾನೆ ಸಂಘರ್ಷ ನಿಯಂತ್ರಣ: ಸರ್ಕಾರ ಯಶಸ್ವಿಯಾಗಿದೆ; ಸಂಸದ ಶ್ರೇಯಸ್ ಪಟೇಲ್
ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಕೃಷ್ಣ ಬೈರೇಗೌಡ, ಶಾಸಕ ಶಿವಲಿಂಗೇಗೌಡ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಮುರುಳಿ ಮೋಹನ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.




