ಹಾಸನ | ಮದುವೆಗೆ ಒಪ್ಪದ ಶಾಲಾ ಶಿಕ್ಷಕಿ ಅಪಹರಣ; ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸ್

Date:

ಮದುವೆಗೆ ಒಪ್ಪದ ಹಿನ್ನೆಲೆ, ಶಾಲಾ ಶಿಕ್ಷಕ್ಷಿಯೊಬ್ಬರನ್ನು ದುರುಳರು ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಿರುವ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ.

ಶಾಲಾ ಶಿಕ್ಷಕಿ ಅರ್ಪಿತಾ ಅಪಹರಣಕ್ಕೊಳಗಾದವರು. ಈಕೆಯ ಸಂಬಂಧಿ ರಾಮು ಎಂಬುವವರು ಅಪಹರಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗುರುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಅರ್ಪಿತಾ ಶಾಲೆಗೆ ತೆರಳುತ್ತಿದ್ದರು. ಈ ವೇಳೆ, ಕಾರ್​ನಲ್ಲಿ ಬಂದ ರಾಮು ಎಂಬಾತ ಬಲವಂತವಾಗಿ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಅರ್ಪಿತಾ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೆಳಗ್ಗೆಯೇ ಈ ಘಟನೆ ನಡೆದಿದ್ದು, ಜನರಲ್ಲಿ ಆತಂಕ ಉಂಟು ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸದ್ಯ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದು, ತಂಡ ರಚಿಸಿದ್ದಾರೆ. ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಗರಣಗಳು ಬಯಲಿಗೆ ಬರುವ ಭಯದಿಂದ ಸದನದಲ್ಲಿ ಬಿಜೆಪಿ ಗದ್ದಲ: ಡಿ ಕೆ ಶಿವಕುಮಾರ್ ವಾಗ್ದಾಳಿ

ಸರ್ಕಾರದ ಮೇಲೆ ಆರೋಪ ಮಾಡಿದ ಬಿಜೆಪಿಯವರಿಗೆ ಉತ್ತರವನ್ನು ಕೇಳುವ ಸಹನೆ, ಸಂಯಮ...

ಹಗರಣ ಮುಚ್ಚಿಹಾಕಲು ಮಳೆ ವಿಷಯ ಚರ್ಚೆಗೆ ಎತ್ತಿಕೊಂಡ ಸ್ಪೀಕರ್‌: ಆರ್‌.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಬಿಜೆಪಿ ಸದಸ್ಯರು ಧ್ವನಿ ಎತ್ತಿದರೆ...

ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಉದ್ಘಾಟನೆ

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ...

ವಾಲ್ಮೀಕಿ ನಿಗಮ | ಅಕ್ರಮ ಆಗಿದೆ, ಆರೋಪಿಗಳ ವಿರುದ್ಧ ಕ್ರಮ ಆಗುತ್ತೆ: ಸಿದ್ದರಾಮಯ್ಯ

ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ...