ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ನಿಡುವಣಿ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದಿರುವ ಕಾರಣ ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ನಿಡುವಣಿ, ಕೇರಳಾಪುರ, ಓಡನಹಳ್ಳಿ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್‌ಗಳು ವಿದ್ಯಾರ್ಥಿಗಳಿಗಾಗಿ ನಿಲುಗಡೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಬಸ್‌ಗಾಗಿ ಕಾಯುತ್ತಿದ್ದರೂ ಚಾಲಕರು ನಿಲ್ಲಿಸದೆ ತೆರಳುತ್ತಿದ್ದಾರೆ. ಇದರಿಂದ ಕಾಲೇಜಿಗೆ ತಡವಾಗುತ್ತಿದ್ದು, ಪರೀಕ್ಷೆಗೂ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ದಾಳಿ: ಕುಟುಂಬಕ್ಕೆ 25 ಲಕ್ಷ ಪರಿಹಾರ
ಈ ಘಟನೆ ಕುರಿತು ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಬರಬೇಕು, ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಕಲ್ಪಿಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.



