ಹಾಸನ | ಬೋನಿಗೆ ಚಿರತೆ ಸೆರೆ; ಗ್ರಾಮಸ್ಥರು ನಿರಾಳ 

Date:

ಹಾಸನ ಜಿಲ್ಲೆ ಆಲೂರು ತಾಲೂಕಿನ ಕದಾಳು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರಯಾಗಿದೆ. ಒಂದು ತಿಂಗಳಿಂದ ಕದಾಳು ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ರಾತ್ರಿ ಗ್ರಾಮದೊಳಗೆ ನುಗ್ಗುತ್ತಿದ್ದ ಚಿರತೆ ಕುರಿ ಹಾಗೂ ನಾಯಿಗಳನ್ನು ತಿಂದು ಹಾಕುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು.

- Advertisement -

ಗ್ರಾಮದ ರಘು ಎಂಬುವರ ಮನೆಯ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿಯೂ ಚಿರತೆ ಓಡಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯನ್ನು ಸೆರೆ ಹಿಡಿದು ಗ್ರಾಮಸ್ಥರಿಗೆ ರಕ್ಷಣೆ ಒದಗಿಸುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕದಾಳು ಗ್ರಾಮದ ಹಿರಿಯ ಮುಖಂಡ ಲೋಕೇಶ್ ಮಾತನಾಡಿ ಕಳೆದ ಎರಡು ವರ್ಷಗಳಿಂದ ನಮ್ಮ ಊರಿನಲ್ಲಿ ಚಿರತೆಯ ಚಲನವಲನ ಕಂಡುಬರುತ್ತಿತ್ತು ನಾವು ಅರಣ್ಯ ಇಲಾಖೆಗೆ ಕರೆ ಮಾಡಿ ಚಿರತೆಯನ್ನು ಹಿಡಿಯಲು ಮನವಿ ಸಲ್ಲಿಸಿದ್ದೆವು ಇದಕ್ಕೆ ಸ್ಪಂದಿಸಿದ ಅರಣ್ಯ ಇಲಾಖೆ ಚಿರತೆ ಹಿಡಿಯಲು ಬೋನನ್ನು ಅಳವಡಿಸಿದ್ದರು.

ಇದನ್ನೂ ಓದಿದ್ದೀರಾ?ಹಾಸನ | ನಿಶ್ಚಲಾನಂದ ಸ್ವಾಮಿ ಹೇಳಿಕೆಗೆ  ಸಿಪಿಐಎಂ ಖಂಡನೆ 

ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಶುಕ್ರವಾರ ಗ್ರಾಮದಲ್ಲಿ ಬೋನು ಇರಿಸಿದ್ದರು. ಶನಿವಾರ ಬೆಳಗಿನ ಜಾವ ಅಂದಾಜು ಮೂರು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಚಿರತೆಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲಾಯಿತು. ಚಿರತೆ ಸೆರೆಯಾಗಿರುವ ಸುದ್ದಿ ತಿಳಿದು ಕದಾಳು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...