ಹಾಸನ | ಕುಮ್ಮತ ಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಬಳಿಯ ಕುಮ್ಮತ ಹಳ್ಳಿಯಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

ಗ್ರಾಮದ ಮನೆಯೊಂದರಲ್ಲಿ ಸಾಕು ನಾಯಿಯನ್ನು ಚಿರತೆ ಎಳೆದುಕೊಂಡು ಹೋಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಇದರ ಪಕ್ಕದಲ್ಲಿ ಸಕಲೇಶಪುರ ಪುರಸಭೆಯ ಎಂಜಿನಿಯರ್ ಕವಿತಾ ಅವರ ಸಹೋದರಿಯ ಜಮೀನಿನಲ್ಲೂ ಹೆಜ್ಜೆ ಗುರುತುಗಳು ಕಂಡುಬಂದಿವೆ. ಆ ಗ್ರಾಮದಲ್ಲಿ ಪರಿಶೀಲಿಸಿದಾಗ ಚಿರತೆ ಹೆಜ್ಜೆಯ ಗುರುತುಗಳು ಕಂಡು ಬಂದಿದೆಂದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಆಡಳಿತ ಪಕ್ಷದ ವಿರುದ್ಧ ಹೋರಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಮಾಜಿ ಸಿಎಂ ಬೊಮ್ಮಾಯಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಭಾಗದ ರೈತರು ತಮ್ಮ ಜಮೀನಿಗೆ ಹೋಗಲು ಭಯಪಡುವಂತಾಗಿದೆ. ಈಗಾಗಲೇ ಕಾಡಾನೆ-ಮಾನವ ಸಂಘರ್ಷ, ಕಾಟಿಗಳ ಉಪಟಳ ಹೆಚ್ಚಾಗಿದ್ದು, ರೈತರ ಬೆಳೆಗಳನ್ನು ಹಾಳು ಮಾಡುತ್ತಿವೆ. ಈ ನಡುವೆ ಚಿರತೆ ಪ್ರತ್ಯಕ್ಷವಾಗಿ ನಾಯಿ ಹೊತ್ತೊಯ್ದಿರುವುದು ಮತ್ತು ಹೆಜ್ಜೆಯ ಗುರುತುಗಳು ಕಂಡುಬಂದಿರುವುದರಿಂದ ಹೆತ್ತೂರು ಹೋಬಳಿಯ ಜನರಿಗೆ ಮತ್ತಷ್ಟು ಆತಂಕ ಎದುರಾಗಿದೆ. ಹೀಗೆ ಆದರೆ ಮುಂದಿನ ದಿನಗಳಲ್ಲಿ ರೈತರು ಕೃಷಿ ಮಾಡುವುದನ್ನೇ ಕೈಬಿಡಬೇಕಾದ ಪರಿಸ್ಥಿತಿ ಎದುರಾಗಿದೆ” ಎಂದು ಕುಮ್ಮತಳ್ಳಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನದಲ್ಲಿ ದಾರುಣ ಘಟನೆ: ಕೆರೆಯಲ್ಲಿ ಈಜಲು ಹೋದ ಒಂದೇ ಗ್ರಾಮದ ನಾಲ್ವರು ಮಕ್ಕಳು ನೀರುಪಾಲು

ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ...

ಹಾಸನ | ಪೂರ್ಣಚಂದ್ರ ತೇಜಸ್ವಿ ರಂಗ ಮಂದಿರದಲ್ಲಿ ಮೇ 15ರಂದು ʼಮಲೆಯಾದ್ರಿ ನಾಟಕʼ ಪ್ರದರ್ಶನ

ಹಾಸನದ ಸಕಲೇಶಪುರ ತಾಲೂಕಿನ ರಕ್ಷದಿ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಪ್ರಾಕೃತಿಕ...

ಪ್ರಜ್ವಲ್ ಲೈಂಗಿಕ ಹಗರಣ | ಪೆನ್‌ಡ್ರೈವ್‌ ಕೇಸ್‌ನಲ್ಲಿ ಕಾರ್ತಿಕ್‌ ಸೇರಿ ನಾಲ್ವರಿಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ, ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ...

ಹಾಸನ | ರೌಡಿಶೀಟರ್ ಮಾಸ್ತಿಗೌಡ ಹತ್ಯೆ ಪ್ರಕರಣ; 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕಳೆದ ವರ್ಷ, ರೌಡಿಶೀಟರ್ ಮಾಸ್ತಿಗೌಡ ಎಂಬಾತನನ್ನು ಹತ್ಯೆಗೈದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು...