ಹಾಸನ | ನೀಟ್‌ ವಿದ್ಯಾರ್ಥಿಗಳ ಬೇಡಿಕೆ ಈಡೇರದಿದ್ದರೆ ಇನ್ನೂ ದೊಡ್ಡಮಟ್ಟದ ಪ್ರತಿಭಟನೆ: ಎಸ್‌ಎಫ್‌ಐ ಎಚ್ಚರಿಕೆ

Date:

ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್ ಅವರ ಬಲವಂತ ಬಂಧನ ಖಂಡಿಸಿ, ನೀಟ್ ಯುಜಿ (NEET UG) ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಸರಿಯಾದ ತನಿಖೆ ಮಾಡುವಂತೆ, ನೀಟ್ ರದ್ದು ಮಾಡುವಂತೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ಅವರು ರಾಜೀನಾಮೆ ನೀಡುವಂತೆ ಒತ್ತಾಯಿಸಿ ಹಾಸನದಲ್ಲಿ ಪ್ರತಿಭಟನೆ ಮಾಡಲಾಯಿತು.

- Advertisement -

ನಗರದ ಬಾಲಕರ ಪದವಿಪೂರ್ವ ಕಾಲೇಜಿನಿಂದ ಡಿಸಿ ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆ ಬಳಿಕ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, “ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮೇ.3ರಂದು ನಡೆಸಲಾದ NEET UG 2026 ಪರೀಕ್ಷೆಯಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ರಾಜಸ್ಥಾನದಲ್ಲಿ ಸೋರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ NTA ಈ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ಮಾಡಲಾಗಿದೆ. ಇದರ ಪರಿಣಾಮವಾಗಿ ದೇಶದಲ್ಲಿ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

“ಆರಂಭದಿಂದಲೂ ಪರೀಕ್ಷೆಗಳ ದುರುಪಯೋಗಕ್ಕೆ ಕುಖ್ಯಾತವಾಗಿರುವ ಎನ್‌ಟಿಎ, ಪರೀಕ್ಷೆಗಳ ನಿರ್ವಹಣೆಯಲ್ಲಿ ತನ್ನ ಅಸಮರ್ಥತೆಯನ್ನು ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ಈ ಹಿಂದೆ 89 ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, 48 ಮರು ಪರೀಕ್ಷೆ ಮಾಡಲಾಗಿದೆ. ಹಾಗಾಗಿ ಇಂತಹ ಅಸಮರ್ಥ NTA ಸಂಸ್ಥೆಯನ್ನು ರದ್ದುಗೊಳಿಸಬೇಕು” ಎಂದು ಆಗ್ರಹಿಸಿದರು.

“ಸೋನಂ ಅವರ ಶಾಂತಿಯುತ ಉಪವಾಸ ಸತ್ಯಾಗ್ರಹದ ಇಪ್ಪತ್ತು ದಿನಗಳ ನಂತರ ನಡೆದಿರುವ ಈ ಅಧಿಕಾರ ದುರುಪಯೋಗದ ಕ್ರಮವು ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ಶಾಂತಿಯುತ ಪ್ರತಿಭಟನೆಯ ಸಂವಿಧಾನಬದ್ಧ ಹಕ್ಕಿನ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿಯಾಗಿದೆ. ಕಳೆದ ಇಪ್ಪತ್ತು ದಿನಗಳಿಂದ ಸೋನಂ ವಾಂಗ್ಚುಕ್ ಅವರು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಅನೇಕ ವಿದ್ಯಾರ್ಥಿಗಳೂ ಕೂಡ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾಕಾರರೊಂದಿಗೆ ಶಾಂತಿಯುತ, ಪ್ರಜಾಸತ್ತಾತ್ಮಕ ಸಂವಾದ ನಡೆಸುವ ಬದಲು, ಕೇಂದ್ರ ಸರ್ಕಾರವು ಪೊಲೀಸ್ ಕ್ರಮದ ಮೂಲಕ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಮಾರ್ಗವನ್ನು ಆರಿಸಿಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆಯುವುದು ನಮ್ಮ ದೇಶದ ಪ್ರಜಾಸತ್ತಾತ್ಮಕ ಪರಂಪರೆಗೆ ಕಪ್ಪು ಚುಕ್ಕೆಯಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಬದ್ಧವಾಗಿರುವ ಸರ್ಕಾರವು ಶಾಂತಿಯುತ ಪ್ರತಿಭಟನೆಗಳಿಗೆ ಸಂವಾದ ಮತ್ತು ಹೊಣೆಗಾರಿಕೆಯ ಮೂಲಕ ಸ್ಪಂದಿಸಬೇಕು; ಬಲಪ್ರಯೋಗ ಹಾಗೂ ಬೆದರಿಕೆಯ ಮೂಲಕವಲ್ಲ. ಭಿನ್ನಾಭಿಪ್ರಾಯಗಳನ್ನು ಮಣಿಸಲು ಪೊಲೀಸ್ ಬಲವನ್ನು ಹೆಚ್ಚಾಗಿ ಬಳಸುತ್ತಿರುವುದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ದುರ್ಬಲಗೊಳಿಸುವ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜುಲೈ 21ರಂದು ವಿದ್ಯಾರ್ಥಿಗಳ ಪಾರ್ಲಿಮೆಂಟ್ ಚಲೋದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಬಲ ಪ್ರಯೋಗ ಮಾಡುವ ಮೂಲಕ ಶಾಂತಿಯುತವಾಗಿ ನಡೆಯುತ್ತಿದ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ” ಎಂದರು.

“NDA ದುರಾಡಳಿತ ವಿದ್ಯಾರ್ಥಿಗಳಿಗೆ ಆತಂಕವನ್ನು ಉಂಟುಮಾಡಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿದ್ದೀರಾ? ದಾಂಡೇಲಿ | ರೀಲ್ಸ್‌ಗಾಗಿ ಅಪಾಯಕಾರಿ ವಾಹನ ಚಾಲನೆ; ತೂಫಾನ್ ಕ್ರೂಸರ್ ಚಾಲಕನ ವಿರುದ್ಧ ಪ್ರಕರಣ ದಾಖಲು

  1. “NTA ಸಂಸ್ಥೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡಬೇಕು. ಕೇಂದ್ರ ಸರ್ಕಾರವು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತನ್ನ ಅವೈಜ್ಞಾನಿಕ ಮತ್ತು ಅಸಮರ್ಥ ಕೇಂದ್ರೀಕರಣ ಪ್ರಯತ್ನಗಳನ್ನು ನಿಲ್ಲಿಸಬೇಕು, NTA ರದ್ದುಗೊಳಿಸಬೇಕು ಹಾಗೂ NEET ಬ್ಯಾನ್ ಮಾಡಬೇಕು. ಶಿಕ್ಷಣ ಸಚಿವ ಧರ್ಮೆಂದ್ರ ಪ್ರದಾನ್ ರಾಜೀನಾಮೆ ನೀಡಬೇಕು, ನೀಟ್ ಹಗರಣವನ್ನು ನ್ಯಾಯಾಂಗ ತನಿಖೆ ಮಾಡಬೇಕು.
  2. ಪ್ರಧಾನ ಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು” ಎಂದು ಎಸ್‌ಎಫ್‌ಐ ಹಾಸನ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ವಿವೇಕ್, ಡಿವೈಎಫ್‌ಐ ಪೃಥ್ವಿ ಎಂ.ಜಿ, ನವೀನ್ ಕುಮಾರ್, ಧರ್ಮೇಶ್, ಕೃಷ್ಣದಾಸ್, ಹರೀಶ್ ಕಟ್ಟೆಬೆಳಗುಲಿ, ಶಶಿ, ರಾಜು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...