ಹಾಸನ | ಶಾಸಕ ಹೆಚ್. ಡಿ ರೇವಣ್ಣ ವಿರುದ್ಧ ತಿರುಗೇಟು ನೀಡಿದ ಸಚಿವ ಕೆ.ಎಂ ಶಿವಲಿಂಗೇಗೌಡ 

Date:

ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ,  ಗ್ರಾಪಂ ಸದಸ್ಯ ಸ್ಥಾನಗಳ ಮೀಸಲಾತಿ ಪ್ರಕ್ರಿಯೆ ಕಾನೂನಾತ್ಮಕವಾಗಿಯೇ ನಡೆಸಲಾಗಿದೆ. ತಹಶೀಲ್ದಾರ್ ಕಳುಹಿಸಿದ ಎಲ್ಲವನ್ನೂ ಡಿಸಿ ಒಪ್ಪಿಕೊಳ್ಳಬೇಕು ಎಂಬ ನಿಯಮವಿಲ್ಲ. ಜಿಲ್ಲಾಧಿಕಾರಿ ತಪ್ಪು ಮಾಡಿದ್ದರೆ ದಾಖಲೆ ಸಮೇತ ಆರೋಪ ಮಾಡಲಿ, ತನಿಖೆ ನಡೆಸಲಿ. ಆದರೆ ಏಕವಚನದಲ್ಲಿ ಮಾತನಾಡುವುದು ಹಾಗೂ ಅಧಿಕಾರಿಗಳ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ ಎಂದು ಖಂಡಿಸಿದರು.

- Advertisement -

ಡಿಸಿ ಪರಿಶಿಷ್ಟ ಪಂಗಡ ಮಹಿಳೆ, ಅವರನ್ನು ಎಲ್ಲಿಂದ ಹಿಡಿದುಕೊಂಡು ಬಂದ್ರೋ ಎಂಬ ಪದ ಬಳಕೆ ಸರಿಯಿಲ್ಲ. ತಪ್ಪುಗಳಾಗಿದ್ದರೆ ತನಿಖೆಗೆ ಒತ್ತಾಯಿಸಲಿ. ಆದರೆ ಜಿಲ್ಲಾಡಳಿತವನ್ನೇ ದೋಷಪೂರಿತವಾಗಿ ನೋಡುವ ಮನೋಭಾವನೆ ಸರಿಯಲ್ಲ ಎಂದು ತಿರುಗೇಟು ನೀಡಿದರು. ಜಿಲ್ಲಾಧಿಕಾರಿಗೆ ಆತ್ಮಸ್ಥೈರ್ಯ ತುಂಬುವುದು ಉಸ್ತುವಾರಿ ಸಚಿವನಾಗಿ ನನ್ನ ಕರ್ತವ್ಯ, ನಾನು ಅವರ ಪರ ನಿಲ್ಲುತ್ತೇನೆ. ವೈಯಕ್ತಿಕವಾಗಿ ಆರೋಪ ಮಾಡುವುದು, ಏಕ ವಚನದಲ್ಲಿ ಮಾತನಾಡುವುದು, ಹೆದರಿಸುವ ರೀತ ಮಾತನಾಡುವುದು ಖಂಡನೀಯ. ರಾಜಕಾರಣಿಗಳಿಗೆ ಈ ರೀತಿಯ ದೋರಣೆ ಶೋಭೆ ತರಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿದ್ದೀರಾ?ಹಾಸನ | ನಾವು ದ್ವೇಷದ ರಾಜಕಾರಣ ಮಾಡಲ್ಲ; ಹೆಚ್.ಡಿ ರೇವಣ್ಣ 

ಯಾವುದೇ ಪಕ್ಷದವರಿರಲಿ, ಡಿಸಿಯವರು ಶಾಸಕರ ಪತ್ರಗಳಿಗೆ ಪ್ರತಿಕ್ರಿಯಿಸದಿದ್ದರೆ, ಫೋನ್ ರಿಸೀವ್ ಮಾಡದಿದ್ದರೆ ತಪ್ಪು. ರೇವಣ್ಣ – ಡಿಸಿ ಹೇಗೆ ನಡೆದುಕೊಂಡಿದ್ದಾರೆ ಎಂಬುದು ನನಗೇನೂ ಗೊತ್ತಿಲ್ಲ. ಡಿಸಿ ನಮ್ಮ ಫೋನ್ ರಿಸೀವ್ ಮಾಡ್ತಾರೆ, ನಮ್ಮೊಂದಿಗೆ ಚನ್ನಾಗಿ ನಡೆದುಕೊಳ್ತಾರೆ. ಕೆಲಸಕಾರ್ಯಗಳು ಸಲೀಸಾಗಿ ನಡೆಯುತ್ತಿವೆ ಎಂದು ಶಿವಲಿಂಗೇಗೌಡ  ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ...

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...