ಹಾಸನ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಮುಂಭಾಗ ಕಳೆದ ಸೋಮವಾರ ಮುಂಜಾನೆ ಬರ್ಬರವಾಗಿ ಹತ್ಯೆಯಾಗಿದ್ದ ಬೆಂಗಳೂರಿನ ರೌಡಿಶೀಟರ್ ಮಂಜೇಶ್ ಕುಮಾರ್ ಅಲಿಯಾಸ್ ಮಂಜು ಕೊಲೆ ಸಂಬಂಧ ಐವರು ಹಂತಕರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
- Advertisement -
ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದ್ದು, ಹತ್ಯೆಯಲ್ಲಿ ಇನ್ನೂ 3 ಮಂದಿ ಭಾಗಿಯಾಗಿದ್ದು, ಶೀಘ್ರವೇ ಅವರನ್ನೂ ಬಂಧಿಸಲಾಗುವುದು ಎಂದು ಎಸ್ಪಿ ಶುಭಾನ್ವಿತಾ ಅವರು ತಿಳಿಸಿದ್ದಾರೆ.
ಕೊಲೆಗೆ ನಿಖರ ಕಾರಣ ಏನೆಂಬುದರ ಬಗ್ಗೆ ವಿಚಾರಣೆ ಮುಂದುವರಿದಿದೆ.





