ಹಾಸನ | ಅಗತ್ಯವಿರುವ ಆರೋಗ್ಯ ಸೌಲಭ್ಯ ಒದಗಿಸಬೇಕು 

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಆಸ್ಪತ್ರೆಯಲ್ಲಿ ಜನಸಾಮಾನ್ಯರಿಗಾಗಿ ಅಗತ್ಯವಿರುವ ಆರೋಗ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

- Advertisement -

ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಲಭ್ಯವಿದ್ದರೂ, ಅವುಗಳ ಸೇವೆ ಜನರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ನಮ್ಮ ಭಾಗದ ಜನರಿಗೆ, ವಿಶೇಷವಾಗಿ ತುರ್ತು ಚಿಕಿತ್ಸೆಯ ಅಗತ್ಯವಿರುವ ರೋಗಿಗಳು, ಗರ್ಭಿಣಿಯರು, ಹಿರಿಯ ನಾಗರಿಕರು ಹಾಗೂ ಬಡ ಕುಟುಂಬಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸುವಂತೆ  ಹಲವು ತಿಂಗಳುಗಳಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಹಾಗೆಯೇ,  ಆರೋಗ್ಯ ಸೇವೆಗಳು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಅನಾರೋಗ್ಯವು ಯಾವಾಗ ಬೇಕಾದರೂ ಯಾರಿಗಾದರೂ ಎದುರಾಗಬಹುದು. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಸೇವೆಗಳು ಸದಾ ಲಭ್ಯವಿರುವಂತೆ ನೋಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಸಮಯಕ್ಕೆ ಸರಿಯಾಗಿ ಸ್ಕ್ಯಾನಿಂಗ್, ಪರೀಕ್ಷೆಗಳು ಹಾಗೂ ಇತರ ಚಿಕಿತ್ಸಾ ಸೇವೆಗಳು ದೊರೆತರೆ ಅನೇಕ ಅಮೂಲ್ಯ ಜೀವಗಳನ್ನು ಉಳಿಸಬಹುದು. ಆದರೆ ಈ ಸೌಲಭ್ಯಗಳ ಕೊರತೆಯಿಂದ ರೋಗಿಗಳು ದೂರದ ನಗರಗಳಿಗೆ ತೆರಳಿ ಹೆಚ್ಚಿನ ಹಣ ಖರ್ಚು ಮಾಡಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಡವರು ಮತ್ತು ನಿರ್ಗತಿಕರು ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚವನ್ನು ಭರಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗಾಂಜಾ ಮಾರಾಟ; ಆರೋಪಿಗಳ ಬಂಧನ 

ಜನರ ಸಮಸ್ಯೆಗಳ ಬಗ್ಗಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಗಮನಹರಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು. ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಎಲ್ಲಾ ವೈದ್ಯಕೀಯ ಉಪಕರಣಗಳನ್ನು ಕಾರ್ಯನಿರ್ವಹಣೆಗೆ ತಂದು, ವೈದ್ಯರ ಹಾಗೂ ಸಿಬ್ಬಂದಿಗಳ ಕೊರತೆಯನ್ನು ನಿವಾರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕೆಂದು ಒತ್ತಾಯಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...