ಹಾಸನ | ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ; AIDSO ಪ್ರತಿಭಟನೆ 

Date:

ಹಾಸನ ನಗರದ ಅಪೂರ್ವ ಅಂಬೇಡ್ಕರ್ ಹಾಸ್ಟೆಲ್ ಗೆ ಮೂಲಭೂತ ಸೌಕರ್ಯ ಒದಗಿಸುವಂತೆ AIDSO ಪ್ರತಿಭಟನೆ ನಡೆಸಿದರು.

- Advertisement -

ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಿಲ್ಡಿಂಗ್‌ನಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಿದ್ಯಾರ್ಥಿನಿಲಯದ ಸುಮಾರು 110 ವಿದ್ಯಾರ್ಥಿನಿಯರು ಅಗತ್ಯ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಚಪ್ಪಲಿ ಸ್ಟ್ಯಾಂಡ್, ಮಲಗಲು ಅಗತ್ಯವಿರುವ ಬೆಡ್ ಹಾಗೂ ಕಾಟ್‌ಗಳಂತಹ ಕನಿಷ್ಠ ಸೌಲಭ್ಯಗಳನ್ನೂ ಸಮರ್ಪಕವಾಗಿ ಒದಗಿಸಿಲ್ಲ. ಸರಿಯಾದ ಮಲಗುವ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರು ಸಂಕಷ್ಟ ಅನುಭವಿಸುತ್ತಿದ್ದು, ಇದು ಅವರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ  ಎಂದು ಸುಭಾಷ್ ಬೆಟ್ಟದಕೊಪ್ಪ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ವಿದ್ಯಾರ್ಥಿನಿಲಯದ ಈ ಸಮಸ್ಯೆಗಳ ಕುರಿತು ವಿದ್ಯಾರ್ಥಿನಿಯರು ಈಗಾಗಲೇ ವಾರ್ಡನ್ ಹಾಗೂ ಸಂಬಂಧಪಟ್ಟ ಉನ್ನತ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ಸಲ್ಲಿಸಿದ್ದರು. ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ಆಗ್ರಹಿಸಿ 15 ದಿನಗಳ ಹಿಂದೆ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು 15 ದಿನಗಳೊಳಗಾಗಿ ಒದಗಿಸುವುದಾಗಿ ಸ್ಪಷ್ಟವಾಗಿ ಆಶ್ವಾಸನೆ ನೀಡಿದ್ದರು.

ಆದರೆ ಅಧಿಕಾರಿಗಳು ನೀಡಿದ ಗಡುವು ಮುಗಿದು 15 ದಿನಗಳು ಕಳೆದರೂ ಇದುವರೆಗೂ ವಿದ್ಯಾರ್ಥಿನಿಲಯಕ್ಕೆ ಯಾವುದೇ ಅಗತ್ಯ ಸೌಲಭ್ಯಗಳನ್ನು ಒದಗಿಸಿಲ್ಲ. ವಿದ್ಯಾರ್ಥಿನಿಯರ ಹೋರಾಟದ ಸಂದರ್ಭದಲ್ಲಿ ಸ್ಥಳಕ್ಕೆ ಬಂದು ಭರವಸೆ ನೀಡಿದ ಅಧಿಕಾರಿಗಳು, ತಮ್ಮದೇ ಮಾತನ್ನು ಉಳಿಸಿಕೊಳ್ಳದೆ ಮತ್ತೆ ವಿದ್ಯಾರ್ಥಿನಿಯರನ್ನು ಅದೇ ಸಮಸ್ಯೆಗಳ ನಡುವೆ ಬದುಕುವಂತೆ ಮಾಡಿರುವುದು ತೀವ್ರ ಖಂಡನೀಯವಾಗಿದೆ. ಸಮಸ್ಯೆ ಬಗೆಹರಿಸುವುದಾಗಿ ಹೇಳಿ ಗಡುವು ನೀಡುವುದು, ನಂತರ ಗಡುವು ಮುಗಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ವಿದ್ಯಾರ್ಥಿನಿಯರ ಸಮಸ್ಯೆಗಳ ಕುರಿತಾದ ನಿರ್ಲಕ್ಷ್ಯವನ್ನು ತೋರಿಸುತ್ತದೆ.

ಇದರ ಜೊತೆಗೆ ವಿದ್ಯಾರ್ಥಿನಿಲಯದಲ್ಲಿ ರಾತ್ರಿ ವೇಳೆ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಉಸಿರುಗಟ್ಟುವಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದ ವಿದ್ಯಾರ್ಥಿನಿಯರ ಆರೋಗ್ಯ, ಶಿಕ್ಷಣ ಹಾಗೂ ಮಾನಸಿಕ ನೆಮ್ಮದಿಯ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿನಿಯರಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದ್ದರೂ, ಅಧಿಕಾರಿಗಳು ಈ ಸಮಸ್ಯೆಗಳನ್ನು ಪದೇಪದೇ ನಿರ್ಲಕ್ಷಿಸುತ್ತಿರುವುದು ಅತ್ಯಂತ ಖಂಡನೀಯವಾಗಿದೆ.

ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಪರಿಹರಿಸುವುದು ಅಧಿಕಾರಿಗಳ ದಯೆಯಲ್ಲ, ಅವರ ಜವಾಬ್ದಾರಿಯಾಗಿದೆ. ಹೋರಾಟದ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸದೆ ವಿದ್ಯಾರ್ಥಿನಿಯರ ತಾಳ್ಮೆಯನ್ನು ಪರೀಕ್ಷಿಸುವುದನ್ನು ಅಧಿಕಾರಿಗಳು ಕೂಡಲೇ ನಿಲ್ಲಿಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಕ್ಷಣ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಅಧಿಕಾರಿಗಳು ನೀಡಿದ ಆಶ್ವಾಸನೆಯಂತೆ ಬೆಡ್, ಕಾಟ್, ಚಪ್ಪಲಿ ಸ್ಟ್ಯಾಂಡ್ ಸೇರಿದಂತೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಕೂಡಲೇ ಒದಗಿಸಿ, ವಿದ್ಯಾರ್ಥಿನಿಯರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು AIDSO ಹಾಗೂ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರ ಹೋರಾಟ ಸಮಿತಿ ಆಗ್ರಹಿಸುತ್ತದೆ ಎಂದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸೆ. 9ರಂದು ವಿದ್ಯುತ್‌ ವ್ಯತ್ಯಯ

ಈ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಚೈತ್ರ ಜಿಲ್ಲಾ ಕಾರ್ಯದರ್ಶಿಯಾದ ಸುಷ್ಮಾ ಜಿಲ್ಲಾ ಉಪಾಧ್ಯಕ್ಷರಾದ ಅಭಿಷೇಕ್ ಮತ್ತು ವಿದ್ಯಾರ್ಥಿ ನಿಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಬಾದಾಮಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...