ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ ದಿನ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ನಿಗದಿತ ವ್ಯವಸ್ಥೆಯಂತೆ ಭಕ್ತರು ದೇವಿಯ ದರ್ಶನ ಪಡೆಯಬಹುದು.
ಇದನ್ನೂ ಓದಿದ್ದೀರಾ?ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ
ಭಕ್ತರ ಅನುಕೂಲಕ್ಕಾಗಿ ಉಚಿತ ದರ್ಶನದ ಜೊತೆಗೆ ವಿಶೇಷ ದರ್ಶನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಭಕ್ತರು ತಮ್ಮ ಅನುಕೂಲಕ್ಕೆ ತಕ್ಕಂತೆ ದರ್ಶನದ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಸರತಿ ಸಾಲುಗಳ ನಿರ್ವಹಣೆ ಹಾಗೂ ದರ್ಶನ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ.




