ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ ಫುಟ್‌ಪಾತ್ ಒತ್ತುವರಿಗಳನ್ನು ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜೆಸಿಬಿ ಮೂಲಕ ತೆರವುಗೊಳಿಸಲಾಗಿದೆ.

- Advertisement -

ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವೃತ್ತದ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ಫುಟ್‌ಪಾತ್ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಈ ಸಂದರ್ಭದಲ್ಲಿ ಮಾತನಾಡಿ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ ಸುಮಾರು 20 ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಸಕಲೇಶಪುರ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ವಿ ವೃತ್ತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳು ಸಂಭವಿಸುತ್ತಿರುವುದನ್ನು ಗಮನಿಸಿದ್ದರು. ವೃತ್ತದ ಅಗಲೀಕರಣಕ್ಕೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದರು.

ಇದನ್ನೂ ಓದಿದ್ದೀರಾ?ಹಾಸನ | ನಿಶ್ಚಲಾನಂದ ಸ್ವಾಮಿ ಹೇಳಿಕೆಗೆ  ಸಿಪಿಐಎಂ ಖಂಡನೆ 

ಜಿಲ್ಲಾಧಿಕಾರಿಗಳ ಸೂಚನೆಯಂತೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತೇಜಸ್ವಿ ವೃತ್ತದ ಅಗಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ವೃತ್ತದ ಸುತ್ತಮುತ್ತಲಿನ ಫುಟ್‌ಪಾತ್ ಹಾಗೂ ಅದರ ಮೇಲಿನ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಪೋಲಿಸ್ ಬಂದೋಬಸ್ತ್  ಕ್ರಮ ಕೈಕೊಳ್ಳಲಾಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಕೋಮು ಸಂಘರ್ಷ; 14 ಜನರ ಬಂಧನ

ಕಾರಟಗಿ ತಾಲ್ಲೂಕಿನ ಹಾಲಸಮುದ್ರ ಗ್ರಾಮದಲ್ಲಿ ಗೌರಿ ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ ಸಂದರ್ಭದಲ್ಲಿ,...

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...