ಹಾಸನ | ಪ್ರೀವೆಡ್ಡಿಂಗ್ ಫೋಟೋಶೂಟ್; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ 

Date:

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮರಗುಂದ ಗ್ರಾಮದ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ಪ್ರೀವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ವೇಳೆ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯರಿಂದ ಹಲ್ಲೆ ನಡೆದಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

- Advertisement -

ಪ್ರೀವೆಡ್ಡಿಂಗ್ ಶೂಟ್‌ಗೆ ಬಂದಿದ್ದ ವೇಳೆ ಕೆಲ ಸ್ಥಳೀಯರು ವಿನಾಕಾರಣ ಕ್ಯಾತೆ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ಫೋಟೋಗ್ರಾಫರ್‌ಗಳು ಆರೋಪಿಸಿದ್ದಾರೆ. ಘಟನೆಯಲ್ಲಿ ನಾಲ್ಕೈದು ಫೋಟೋಗ್ರಾಫರ್‌ಗಳು ಗಾಯಗೊಂಡಿದ್ದು, ಅವರು ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಹಲ್ಲೆ ವೇಳೆ ಕ್ಯಾಮೆರಾ ಹಾಗೂ ಮೊಬೈಲ್‌ಗಳನ್ನು ಒಡೆದುಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಗೆ ಸಂಬಂಧಿಸಿದಂತೆ ವೀಡಿಯೊ ಸಾಕ್ಷ್ಯಗಳಿದ್ದರೂ ಆರಂಭದಲ್ಲಿ ಎಫ್‌ಐಆರ್ ದಾಖಲಿಸದ ಹಿನ್ನೆಲೆಯಲ್ಲಿ ನೂರಾರು ಫೋಟೋಗ್ರಾಫರ್‌ಗಳು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಫೋಟೋಗ್ರಾಫರ್‌ಗಳು ಒತ್ತಾಯಿಸಿದ್ದಾರೆ. ಹಾಸನ ಜಿಲ್ಲಾ ಛಾಯಾಗ್ರಾಹಕರ ಸಂಘವೂ ಘಟನೆ ಖಂಡಿಸಿ ಕ್ರಮಕ್ಕೆ ಆಗ್ರಹಿಸಿದೆ.

ಠಾಣೆ ಆವರಣದಲ್ಲಿ ಫೋಟೋಗ್ರಾಫರ್‌ಗಳು ಹಾಗೂ ಸ್ಥಳೀಯರ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಹಲ್ಲೆಗೊಳಗಾದವರ ಸಂಬಂಧಿಕರು ಹಾಗೂ ಸ್ಥಳೀಯರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಕೆಲ ಸಂದರ್ಭಗಳಲ್ಲಿ ತಳ್ಳಾಟ-ಬಡಿದಾಟಕ್ಕೂ ತಿರುಗಿತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರಿಗೆ ಹರಸಾಹಸ ಪಡಬೇಕಾಯಿತು.

ಇನ್ನೊಂದೆಡೆ, ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇದು ಪ್ರವಾಸಿ ತಾಣವಲ್ಲ, ನಮ್ಮ ಧಾರ್ಮಿಕ ಕೇಂದ್ರ. ಪ್ರವಾಸಿಗರು ಡ್ರೆಸ್ ಕೋಡ್ ಪಾಲಿಸದೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಇದರಿಂದ ಪರಿಸರ ಮಾಲಿನ್ಯವೂ ಉಂಟಾಗುತ್ತಿದೆ,” ಎಂದು ಸ್ಥಳೀಯರಾದ ಅವರೆಕಾಡಿ ಪೃಥ್ವಿ ತಿಳಿಸಿದ್ದಾರೆ. ಈ ಕುರಿತು ಹಿಂದೆ ತಾಲೂಕು ಆಡಳಿತ ಹಾಗೂ ಶಾಸಕರಿಗೆ ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ದೂರಿದರು.

ಇದನ್ನೂ ಓದಿದ್ದೀರಾ?ಹಾಸನ | ಸಾಮ್ರಾಜ್ಯಶಾಹಿಯನ್ನು ಹಿಮ್ಮೆಟ್ಟಿಸುವುದೇ ಭಗತ್ ಸಿಂಗ್‌ಗೆ ಸಲ್ಲಿಸುವ ನಿಜವಾದ ಗೌರವ: ಧರ್ಮೇಶ್ 

ದೇವಾಲಯದ ಸುತ್ತಮುತ್ತ ಬೇಲಿ ನಿರ್ಮಿಸಿ ಪ್ರವೇಶ ನಿಯಂತ್ರಣ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗಂಭೀರ ಘಟನೆಗಳಿಗೆ ಕಾರಣವಾಗಬಹುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಪಾಂಡವರ ಐತಿಹಾಸಿಕ ಹಿನ್ನೆಲೆ ಹೊಂದಿರುವ ಈ ಪುರಾತನ ಧಾರ್ಮಿಕ ಕೇಂದ್ರದ ಪಾವಿತ್ರ್ಯ ಕಾಪಾಡಬೇಕು ಎಂದು ಅವರು ಆಗ್ರಹಿಸಿದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...