ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಮೊತ್ತ ಹೆಚ್ಚಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು. Nçತಾಲ್ಲೂಕಿನಲ್ಲಿ ಶೇ 50ಕ್ಕಿಂತ ಕಡಿಮೆ ಮಳೆಯಾಗಿರುವುದರಿಂದ ತೀವ್ರ ಬರಪೀಡಿತ ಎಂದು ಘೋಷಿಸಲಾಗಿದೆ. ರೈತರು ಯಾವುದೇ ಗೊಂದಲ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸರ್ಕಾರ ನಿಗದಿಪಡಿಸಿರುವ ಪರಿಹಾರ ರೈತರ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದರು.
ಶನಿವಾರ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಜಾಸೇವಾ ಆಂದೋಲನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತರಿಗೆ ಪ್ರಸ್ತುತ ನಿಗದಿಪಡಿಸಿರುವ ₹2,500 ಪರಿಹಾರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರದ ಬರ ಪರಿಶೀಲನಾ ತಂಡ ಹಾಸನ ಜಿಲ್ಲೆಗೆ ಬಂದಿದ್ದು, ಅವರನ್ನು ಭೇಟಿ ಮಾಡಿ ಜಿಲ್ಲೆಯ ಬರgg ಪರಿಸ್ಥಿತಿ ಕುರಿತು ಮನವರಿಕೆ ಮಾಡಲಾಗುವುದು. ಸಕಲೇಶಪುರ ತಾಲ್ಲೂಕನ್ನೂ ಬರ ಪಟ್ಟಿಗೆ ಸೇರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು
ಆಲೂರಿನಲ್ಲಿ ರೈಲು ನಿಲುಗಡೆಗೆ ಮನವಿ: ಆಲೂರಿನಲ್ಲಿ ರೈಲು ನಿಲುಗಡೆ ಮಾಡಬೇಕೆಂಬುದು ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಅವರೊಂದಿಗೆ ಪರಿಹಾರ ಕಲ್ಪಿಸಲಾಗಿದ್ದು, ಉಳಿದ ಅರ್ಜಿಗಳಿಗೆ ಕಾಲಮಿತಿ ನಿಗದಿಪಡಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.




