ಹಾಸನ | ‘ಅರ್ಜುನ’ನ ಅಂತ್ಯಕ್ರಿಯೆ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ

Date:

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ‘ಅರ್ಜುನ’ ಆನೆಯ ಅಂತ್ಯಕ್ರಿಯೆಗಾಗಿ ಗುಂಡಿ ತೆಗೆಯುತ್ತಿದ್ದ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಆನೆ ‘ಅರ್ಜುನ’ ಸೋಮವಾರ ಮೃತಪಟ್ಟಿದೆ. ಗ್ರಾಮದ ಬಳಿಯೇ ಆನೆಯ ಅಂತ್ಯಕ್ರಿಯೆ ಮಾಡಲಾಗಿದೆ.

ಆನೆಯನ್ನು ಹೂಳಲು ಗುಂಡಿ ತೆಗೆಯುತ್ತಿದ್ದಾಗ, ಅರಣ್ಯ ಇಲಾಖೆಯ ಸಿಬ್ಬಂದಿಗಳ ಪ್ರಮಾದದಿಂದಲೇ ಆನೆ ಮೃತಪಟ್ಟಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಗುಂಡಿ ತೆಗೆಯಲು ಅಡ್ಡಿಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಲಾಠಿ ಪ್ರಹಾರ ನಡೆಸಿರುವ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

“ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲು ಇಂಜೆಕ್ಷನ್‌ ಶೂಟ್ ಮಾಡಲಾಗಿತ್ತು. ಅದು ಗುರಿ ತಪ್ಪಿ ಪ್ರಶಾಂತ್‌ ಎಂಬ ಸಾಕಾನೆ ಮೇಲೆ ಬಿತ್ತು. ನಂತರ, ಬೇರೊಂದು ಇಂಜೆಕ್ಷನ್‌ ನೀಡಿ ಅದನ್ನು ಸುಧಾರಿಸಲಾಯಿತು. ಆ ವೇಳೆಗೆ, ಕಾಡಾನೆ ಮೇಲೆ ಅರ್ಜುನ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದರು. ಆ ಗುಂಡು ಅಚಾನಕ್ಕಾಗಿ ಅರ್ಜುನನ ಕಾಲಿಗೆ ಬಿದ್ದಿತು. ಗುಂಡು ತಗುಲಿದ್ದರಿಂದ ಅರ್ಜುನ ಸುತ್ತಮುತ್ತಲಿದ್ದ ಮರಗಳನ್ನು ಬೀಳಿಸಿತು. ಅರ್ಜುನ ಆನೆ ನಡೆಯಲಾಗದ ಪರಿಸ್ಥಿತಿಯಲ್ಲಿತ್ತು. ಈ ವೇಳೆ, ಕಾಡಾನೆ ಅರ್ಜುನನ ಮೇಲೆ ದಾಳಿ ಮಾಡಿತು” ಎಂದು ಮಾವುತ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಿಸಿಲಿನ ತಾಪಕ್ಕೆ ನಿರ್ಜಲೀಕರಣ; ಇಬ್ಬರು ಮಕ್ಕಳು ಸಾವು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಭೀಕರ ಬಿಸಿಲಿನ ತಾಪಕ್ಕೆ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಮಾಂಗಲ್ಯ ಧಾರಣೆ ಬಳಿಕ ಮತಗಟ್ಟೆಗೆ ಬಂದು ಮತ ಚಲಾಯಿಸಿದ ದಂಪತಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಚುನಾವಣೆ ಹಾಗೂ ಮತದಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ....

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...