ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ ಸುತ್ತಮುತ್ತ ತಳ್ಳುಗಾಡಿ ವ್ಯಾಪಾರ ಹೆಚ್ಚಾಗಿದ್ದು, ಇದರಿಂದ ದೇವಾಲಯದ ಸುತ್ತಲಿನ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಐತಿಹಾಸಿಕ ಸ್ಮಾರಕದ ಮುಂಭಾಗದಲ್ಲೇ ವ್ಯಾಪಾರ ಚಟುವಟಿಕೆಗಳು ನಡೆಯುತ್ತಿರುವುದು ಪ್ರವಾಸಿಗರ ಗಮನ ಸೆಳೆಯುತ್ತಿದೆ.

- Advertisement -

ಪ್ರತಿದಿನ ನೂರಾರು ಪ್ರವಾಸಿಗರು ದೇಗುಲಕ್ಕೆ ಭೇಟಿ ನೀಡುತ್ತಿದ್ದು, ರಜಾ ದಿನಗಳು ಹಾಗೂ ವಿಶೇಷ ಸಂದರ್ಭಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ ದೇಗುಲದ ಪ್ರವೇಶ ಭಾಗದ ಸಮೀಪ ತಳ್ಳುಗಾಡಿಗಳು ಸಾಲುಗಟ್ಟಿ ನಿಲ್ಲುವುದರಿಂದ ಓಡಾಟಕ್ಕೂ ಕೆಲವೊಮ್ಮೆ ತೊಂದರೆಯಾಗುತ್ತಿದೆ ಎನ್ನಲಾಗಿದೆ. ದೇಗುಲಕ್ಕೆ ಬರುವವರು ತಿಂಡಿ-ತಿನಿಸುಗಳನ್ನು ಖರೀದಿಸುವುದು ಸಾಮಾನ್ಯವಾಗಿದ್ದು, ವ್ಯಾಪಾರದ ಬಳಿಕ ಉಳಿಯುವ ಪ್ಲಾಸ್ಟಿಕ್ ತಟ್ಟೆಗಳು, ಕವರ್‌ಗಳು, ಕಪ್‌ಗಳು ಹಾಗೂ ಆಹಾರದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದರಿಂದ ಪರಿಸರದ ಸ್ವಚ್ಛತೆ ಹದಗೆಡುತ್ತಿದೆ ಎಂಬ ಆರೋಪ ಸ್ಥಳೀಯರಿಂದ ವ್ಯಕ್ತವಾಗಿದೆ. ವಿಶೇಷವಾಗಿ ದೇಗುಲದ ಮೆಟ್ಟಿಲುಗಳ ಆಸುಪಾಸಿನಲ್ಲಿ ಚರ್ಮುರಿ, ಪಾನಿಪುರಿ, ಸೌತೆಕಾಯಿ, ಗೋಬಿ ಸೇರಿದಂತೆ ಹಲವು ತಿಂಡಿ-ತಿನಿಸುಗಳ ಗಾಡಿಗಳು ಕಂಡುಬರುತ್ತಿವೆ. ಇದರಿಂದ ಪಾರಂಪರಿಕ ಸ್ಮಾರಕದ ವಾತಾವರಣಕ್ಕೆ ಹೊಂದಿಕೆಯಾಗದ ದೃಶ್ಯ ನಿರ್ಮಾಣವಾಗುತ್ತಿದೆ ಎಂದು ಪ್ರವಾಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚನ್ನಕೇಶವ ದೇಗುಲದ ಶಿಲ್ಪಕಲೆ ಹಾಗೂ ವಾಸ್ತುಶಿಲ್ಪವನ್ನು ವೀಕ್ಷಿಸಲು ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ದೇಗುಲದ ಪ್ರವೇಶ ಭಾಗದಲ್ಲೇ ವ್ಯಾಪಾರ ಮಳಿಗೆಗಳು ಕಂಡುಬರುವುದರಿಂದ ಐತಿಹಾಸಿಕ ಸ್ಮಾರಕದ ವೈಭವವನ್ನು ಆಸ್ವಾದಿಸಲು ಅಡಚಣೆಯಾಗುತ್ತಿದೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ. ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಬದಲು, ಅವರ ಜೀವನೋಪಾಯಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ. ದೇಗುಲದ ಸುತ್ತಲಿನ ಪ್ರದೇಶವನ್ನು ಪ್ರವಾಸಿಗರಿಗೆ ಮುಕ್ತ ಹಾಗೂ ಸ್ವಚ್ಛ ವಾತಾವರಣವಾಗಿಸುವುದು ಅಗತ್ಯವಾಗಿದೆ. ಈ ಸಮಸ್ಯೆ ಕುರಿತು ಜಿಲ್ಲಾಡಳಿತದ ಮಟ್ಟದಲ್ಲಿಯೂ ಗಮನ ಹರಿಸಲಾಗಿದ್ದು, ದೇಗುಲದ ಮುಂಭಾಗದಲ್ಲಿ ತಳ್ಳುಗಾಡಿಗಳನ್ನು ನಿಯಂತ್ರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಗುರುತಿಸಿ ವ್ಯವಸ್ಥೆ ಕಲ್ಪಿಸುವ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಕಲೇಶಪುರ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇಗುಲದ ಸುತ್ತಲಿನ ವ್ಯಾಪಾರ ವ್ಯವಸ್ಥೆ ಕುರಿತು ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಬೇಲೂರು ಪುರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಆದರೆ ಸಭೆ ನಡೆದು ಸಮಯ ಕಳೆದರೂ ಸ್ಥಳದಲ್ಲಿ ನಿರೀಕ್ಷಿತ ಬದಲಾವಣೆ ಕಂಡುಬಂದಿಲ್ಲ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಪುರಸಭೆ ಹಾಗೂ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ದೇಗುಲದ ಪ್ರವೇಶ ಭಾಗವನ್ನು ಸ್ವಚ್ಛವಾಗಿಡುವ ಜತೆಗೆ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಐತಿಹಾಸಿಕ ಸ್ಮಾರಕದ ಸಂರಕ್ಷಣೆ ಮತ್ತು ಸ್ಥಳೀಯ ವ್ಯಾಪಾರಿಗಳ ಹಿತ ಎರಡನ್ನೂ ಗಮನದಲ್ಲಿಟ್ಟುಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ.

ಇದನ್ನೂ ಓದಿದ್ದೀರಾ?ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಚನ್ನಕೇಶವ ದೇಗುಲದ ಸೌಂದರ್ಯಕ್ಕೆ ಧಕ್ಕೆಯಾಗದಂತೆ ತಳ್ಳುಗಾಡಿಗಳನ್ನು ನಿಯಂತ್ರಿಸಿ, ಸ್ವಚ್ಛ ಹಾಗೂ ಪ್ರವಾಸಿಗಸ್ನೇಹಿ ವಾತಾವರಣ ನಿರ್ಮಿಸುವುದು ಅಗತ್ಯವಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌| ಕಬ್ಬಿಗೆ ದರ ನಿಗದಿ ಆಗುವ ತನಕ ಕಾರ್ಖಾನೆ ಆರಂಭಿಸುವಂತಿಲ್ಲ: ರೈತರು ಆಗ್ರಹ

"ಕಬ್ಬಿಗೆ ದರ ನಿಗದಿ‌ ಆಗುವ ತನಕ ಕಾರ್ಖಾನೆಗಳನ್ನು ಆರಂಭಿಸಬಾರದು" ಎಂದು ರೈತ...

ಬೀಳಗಿ | ಕಬ್ಬಿಗೆ ರೂ.5,000 ದರ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಪ್ರತಿಭಟನೆ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ. 5,000 ದರ ನಿಗದಿಪಡಿಸುವುದು ಸೇರಿದಂತೆ...

ಕೋಲಾರ | ಕ್ರೀಡೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ: ಮೈಲಾಂಡಹಳ್ಳಿ ಮುರಳಿ

ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಯುವಕರಿಗೆ ಉತ್ತಮ ಅವಕಾಶಗಳು ದೊರೆಯಬೇಕು. ಕ್ರೀಡೆ ದೈಹಿಕ...

ಜಮಖಂಡಿ | ದಲಿತ ಸಾಹಿತ್ಯ ಶೋಷಣೆಯ ವಿರುದ್ಧದ ಧ್ವನಿ: ಪರಶುರಾಮ ಮಹಾರಾಜನವರ

ಅಸ್ಪೃಶ್ಯತೆ, ಸಾಮಾಜಿಕ ತಾರತಮ್ಯ ಹಾಗೂ ಶೋಷಣೆಯ ವ್ಯವಸ್ಥೆಯ ವಿರುದ್ಧ ಪ್ರಶ್ನೆ ಎತ್ತಿ,...