ಇಂದಿನ ಸಮಾಜದಲ್ಲಿ ಮೂಢನಂಬಿಕೆ, ಕಂದಾಚಾರ, ಜಾತಿ ತಾರತಮ್ಯ, ಅಸ್ಪೃಶ್ಯತೆ, ಕೋಮುವಾದ ಸೇರಿದಂತೆ ಹಲವು ಸಾಮಾಜಿಕ ಸಮಸ್ಯೆಗಳು ಹೆಚ್ಚುತ್ತಿವೆ. ಇದರ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ, ನಿರುದ್ಯೋಗ ಹಾಗೂ ಬಡತನದಂತಹ ಸಮಸ್ಯೆಗಳೂ ತೀವ್ರವಾಗುತ್ತಿವೆ ಎಂದು ಹಾಸನ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ಧರ್ಮೇಶ್ ತಿಳಿಸಿದರರು
ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಟ ನಡೆಸಿ ದೇಶವನ್ನು ಸ್ವತಂತ್ರಗೊಳಿಸುವ ಪ್ರಯತ್ನ ನಡೆದಿತ್ತು. ಆದರೆ ಇಂದಿನ ಸಂದರ್ಭದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಹೊಸ ರೂಪಗಳಲ್ಲಿ ಪ್ರಭಾವ ಬೀರುತ್ತಿರುವ ಶಕ್ತಿಗಳ ಹಿನ್ನೆಲೆಯಲ್ಲಿ ದೇಶದ ಸ್ವಾವಲಂಬನೆ, ಸಾಮಾಜಿಕ ಸಮಾನತೆ ಹಾಗೂ ಜನಪರ ಅಭಿವೃದ್ಧಿಯ ಕುರಿತು ಚರ್ಚೆ ಅಗತ್ಯವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್
ಈ ಹಿನ್ನೆಲೆಯಲ್ಲಿ ಸಮಾಜದಲ್ಲಿ ಪ್ರಗತಿಪರ ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸುವುದು ಅಗತ್ಯವಾಗಿದೆ. ವೈಜ್ಞಾನಿಕ ಚಿಂತನೆ, ಮಾನವೀಯತೆ ಮತ್ತು ಸಾಮಾಜಿಕ ಸಮಾನತೆಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಭಗತ್ ಸಿಂಗ್ ಅವರ ವಿಚಾರಗಳನ್ನು ಯುವಜನರಲ್ಲಿ ವ್ಯಾಪಕವಾಗಿ ಪರಿಚಯಿಸಬೇಕಾಗಿದೆ ಎಂದು ಧರ್ಮೇಶ್ ಅಭಿಪ್ರಾಯಪಟ್ಟರು.




