ಹಾಸನ | ಪುರಸಭೆ ಪೌರಕಾರ್ಮಿಕರಿಗೆ ಸುರಕ್ಷತಾ ಸಾಧನ ಕಡ್ಡಾಯ; ಬಸವರಾಜು ಶಿಗ್ಗಾವಿ

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ನಮಸ್ತೆ ದಿನಾಚರಣೆ’ ಅಂಗವಾಗಿ ಬೇಲೂರು ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಪುರಸಭೆ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾವಿ, “ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಸ್ವಚ್ಛತಾ ಕಾರ್ಯಗಳು ಅತ್ಯಂತ ಅಪಾಯಕಾರಿ ಆಗಿರುವುದರಿಂದ ಯಾವುದೇ ಕಾರಣಕ್ಕೂ ಸುರಕ್ಷತಾ ಸಾಧನಗಳನ್ನು ಧರಿಸದೆ ಕೆಲಸಕ್ಕೆ ಇಳಿಯಬಾರದು ಎಂದು ಸೂಚಿಸಿದರು. ಸರ್ಕಾರ ನೀಡಿರುವ ಸುರಕ್ಷತಾ ಕಿಟ್‌ಗಳನ್ನು ಕಡ್ಡಾಯವಾಗಿ ಬಳಸುವುದರಿಂದ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಪೌರಕಾರ್ಮಿಕರು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಪಟ್ಟಣದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರ ಶ್ರಮದಿಂದಲೇ ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛ ಪರಿಸರ ಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಾಗೂ ಪುರಸಭೆ ವಿವಿಧ ಸುರಕ್ಷತಾ ಮತ್ತು ಆರೋಗ್ಯ ಕಾರ್ಯಕ್ರಮಗಳನ್ನು ನಿರಂತರವಾಗಿ ಜಾರಿಗೆ ತರುತ್ತಿವೆ ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಒಂದೇ ದಿನದಲ್ಲಿ ನಾಲ್ಕು ಕಡೆ ಕಳ್ಳತನ 

ಈ ಸಂದರ್ಭದಲ್ಲಿ ಪುರಸಭೆ ಆರೋಗ್ಯಾಧಿಕಾರಿ ಲೋಹಿತ್, ಇಂಜಿನಿಯರ್ ಮೋಹನ್, ಪೌರಕಾರ್ಮಿಕರಾದ ಓಬಳೇಶ್, ಉಮೇಶ್, ಹರೀಶ್ ಸೇರಿದಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...