ಹಾಸನ | ಕಾಂತರಾಜ ವರದಿ ಬಿಡುಗಡೆ ಮತ್ತು 2ಬಿ ಮೀಸಲಾತಿ ಗೊಂದಲ ನಿವಾರಣೆಗೆ ಆಗ್ರಹ

Date:

ಕಾಂತರಾಜ ಆಯೋಗದ ವರದಿ ಬಿಡುಗಡೆ, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಹಾಗೂ ಮುಸಲ್ಮಾನರ 2ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಶೇ.8ಕ್ಕೆ ಏರಿಸಲು ಹಾಸದಲ್ಲಿ ಸರ್ಕಾರವನ್ನು ಒತ್ತಾಯಪಡಿಸಲು ಕೋರಿ ಎಸ್‌ಡಿಪಿಐ ನಿಯೋಗ ಹಾಸನ ಶಾಸಕ ಎಚ್‌ ಪಿ ಸ್ವರೂಪ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

- Advertisement -

“ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಅದೇ
ನಿಟ್ಟಿನಲ್ಲಿ ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶದಿಂದಲೇ, ರಾಜ್ಯದ ಎಲ್ಲ ಜಾತಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ
ಮಾಹಿತಿಯನ್ನು ಅಂಕಿ ಅಂಶಗಳ ಸಮೇತ ತಿಳಿದುಕೊಳ್ಳಲು ಕಾಂತರಾಜ್ ಆಯೋಗವನ್ನು ರಚಿಸಲಾಗಿತ್ತು. ಆಯೋಗವು ವರ್ಷಗಟ್ಟಲೇ ರಾಜ್ಯಾದ್ಯಂತ ಸಮೀಕ್ಷೆ ನಡೆಸಿ, ಜಾತಿ
ಮತ್ತಿತರ ಕಾರಣಗಳಿಗಾಗಿ ತಮ್ಮ ಹಕ್ಕು ಅಧಿಕಾರಗಳಿಂದ ವಂಚಿತರಾಗಿ, ಹಲವು ರೀತಿಯಲ್ಲಿ ಶೋಷಣೆಗೊಳಗಾಗಿರುವ ಜಾತಿ ಸಮುದಾಯಗಳ ವಾಸ್ತವ ಸ್ಥಿತಿಗಳ ಬಗ್ಗೆ ಅಂಕಿ ಅಂಶಗಳ
ಸಮೇತ ವರದಿ ನೀಡಿರುತ್ತದೆ ಎಂದು ಆಯೋಗದ ಮುಖ್ಯಸ್ಥರೇ ಹೇಳಿಕೊಂಡಿದ್ದಾರೆ” ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಶಾಸಕರಿಗೆ ಮನವರಿಕೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“₹167 ಕೋಟಿ ಖರ್ಚು ಮಾಡಿ ಸಿದ್ಧಪಡಿಸಲಾಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸರ್ಕಾರವು ಸಲ್ಲದ ನೆಪ ಹೇಳಿಕೊಂಡು ಬರುತ್ತಿದೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ; ಮೇಲ್ವಿಚಾರಕಿ ಅಮಾನತಿಗೆ ಆಗ್ರಹ

ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಹಾಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಫರೀದ್, ಹಾಸನ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಜೀಲ್ ಅಹ್ಮದ್ ಮತ್ತು ಹಾಸನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೈಯದ್ ನದೀಂ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...