ಹಾಸನ | ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದು ಮಗ ಸಾವು 

Date:

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಗೂರಮಾರನಹಳ್ಳಿ ವಾರ್ಡ್‌ನಲ್ಲಿ ಆಸ್ತಿ ಮಾರಾಟದ ವಿಚಾರವಾಗಿ ತಂದೆ-ಮಗನ ನಡುವೆ ಜಗಳ ದುರಂತದಲ್ಲಿ ಅಂತ್ಯಗೊಂಡಿದ್ದು, ತಂದೆಯನ್ನು ಕೊಲೆಗೈದ ಪುತ್ರ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

- Advertisement -

ನಿವೃತ್ತ ಮುಖ್ಯ ಶಿಕ್ಷಕ ಬಿ.ಎನ್. ಚನ್ನೇಗೌಡ (73), ಹತ್ಯೆಯಾದವರು.  ಹತ್ಯೆಗೈದ ಪುತ್ರ ಬಿಂದುಕುಮಾರ್ (42), ತಂದೆಯನ್ನು ಹತ್ಯೆಗೈದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಮನೆ ಮಾರಾಟ ಮಾಡಿ ಹಣ ನೀಡುವಂತೆ ಬಿಂದುಕುಮಾರ್ ತಂದೆಯ ಮೇಲೆ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ. ಶನಿವಾರ ಬೆಳಗ್ಗೆ ಗೂರಮಾರನಹಳ್ಳಿಯಲ್ಲಿರುವ ಮನೆಗೆ ಬಂದಿದ್ದ ಆತ ಆಸ್ತಿ ಮಾರಾಟದ ವಿಚಾರವಾಗಿ ತಂದೆಯೊಂದಿಗೆ ಜಗಳವಾಡಿದ್ದಾನೆ. ಜಗಳ ತೀವ್ರಗೊಂಡ ವೇಳೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ತಂದೆಯನ್ನು ಕೊಲೆಗೈದಿದ್ದಾನೆ. ಬಳಿಕ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿದ್ದೀರಾ?ಹಾಸನ | ಒಂದೇ ದಿನದಲ್ಲಿ ನಾಲ್ಕು ಕಡೆ ಕಳ್ಳತನ 

ಈ  ಘಟನೆ ಕುರಿತು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...