ಹಾಸನ | ಜೂ.18ರಂದು ರಂಗ ಅಭಿನಯ ತರಬೇತಿ ಶಿಬಿರ

Date:

ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೆಶನಾಲಯ,, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಂಸ್ಕೃತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಜೂನ್18ರಿಂದ 28ರವರೆಗೆ ರಂಗ ಅಭಿನಯ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೆಶಕ ಪ್ರದೀಪ್ ರಂಗಾಯಣ ತಿಳಿಸಿದರು.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರವು ಪ್ರತಿದಿನ ಸಂಜೆ 5ರಿಂದ ರಾತ್ರಿ 9 ಗಂಟೆಯವರೆಗೆ ನಡೆಯಲಿದ್ದು, 15ರಿಂದ 50 ವರ್ಷ ವಯೋಮಾನದ ಅಭಿನಯಾಸಕ್ತರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಶಿಬಿರದಲ್ಲಿ ರಂಗಾಯಣ ಹಾಗೂ ನೀನಾಸಂನಲ್ಲಿ ತರಬೇತಿ ಪಡೆದ ಅನುಭವಿ ರಂಗಕರ್ಮಿಗಳು ಅಭಿನಯದ ವಿವಿಧ ಆಯಾಮಗಳ ಕುರಿತು ತರಬೇತಿ ನೀಡಲಿದ್ದಾರೆ. ಆಂಗಿಕ, ವಾಚಿಕ ಹಾಗೂ ಸಾತ್ವಿಕ ಅಭಿನಯ, ಧ್ವನಿ ವ್ಯಾಯಾಮ, ದೈಹಿಕ ಚಟುವಟಿಕೆಗಳು ಸೇರಿದಂತೆ ರಂಗಭೂಮಿಗೆ ಅಗತ್ಯವಾದ ವಿವಿಧ ಪ್ರಾಯೋಗಿಕ ವಿಷಯಗಳ ಕುರಿತು ತರಬೇತಿ ನೀಡಲಾಗುವುದು ಎಂದು ತಿಳಿಸಿದರು. ಮೈಸೂರು ರಂಗಾಯಣದಲ್ಲಿ ರಂಗ ಶಿಕ್ಷಣ ಪಡೆದು ಹಲವು ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಪ್ರದೀಪ್ ರಂಗಾಯಣ ಅವರು ಶಿಬಿರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಧಿಕಾರಿಗಳ ಕೊರತೆಯಿಂದ ಪುರಸಭೆ  ಕಾರ್ಯ ಹಿನ್ನಡೆ 

ಶಿಬಿರದಲ್ಲಿ ಕೇವಲ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಾಯಿಸಿ ಕೊಳ್ಳುವವರಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7676443338 ಅನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಬೊಮ್ಮೇಗೌಡ, ಮಧುಸೂದನ್, ಶಂಕರ್, ಮಮತೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...